Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲಾಧಿಕಾರಿ ಕಚೇರಿ ಎದುರು ಅಂಬೇಡ್ಕರ್, ಜಿಲ್ಲಾ ಪಂಚಾಯತ್ ಕಚೇರಿ ಎಂದು ಕೆಂಪೇಗೌಡ ಪುತ್ಥಳಿ ನಿರ್ಮಾಣ : ಪಿ. ರವಿಕುಮಾರ್

Posted date: 10 Mar, 2018

Powered by:     Yellow and Red

ಜಿಲ್ಲಾಧಿಕಾರಿ ಕಚೇರಿ ಎದುರು ಅಂಬೇಡ್ಕರ್, ಜಿಲ್ಲಾ ಪಂಚಾಯತ್ ಕಚೇರಿ ಎಂದು ಕೆಂಪೇಗೌಡ ಪುತ್ಥಳಿ ನಿರ್ಮಾಣ : ಪಿ. ರವಿಕುಮಾರ್

ರಾಮನಗರ :  ಜಿಲ್ಲೆಯ ಜನರ ಹಲವು ವರ್ಷಗಳ ಆಕಾಂಕ್ಷೆಯಾಗಿರುವ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ಪುತ್ಥಳಿ ನಿರ್ಮಾಣಕ್ಕೆ ಮಾರ್ಚ್ 12ರಂದು ನಗರದಲ್ಲಿ ಭೂಮಿಪೂಜೆ ನೆರವೇರಲಿದೆ ಎಂದು ನಗರಸಭೆ ಅಧ್ಯಕ್ಷ ಪಿ.ರವಿಕುಮಾರ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ನಗರದ ಆಡಳಿತ ದ ಶಕ್ತಿ ಕೇಂದ್ರ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಲಾ ಗುತ್ತಿದೆ. ಇದರಿಂದ ಸಂವಿಧಾನ ಶಿಲ್ಪಿ ಮತ್ತು ಆಡಳಿತಗಾರ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ಥಳಿ ನಿರ್ಮಾಣ ಕಾರ್ಯಕ್ಕೆ ಕಾಲ ಕೂಡಿ ಬಂತಂದಾಗಿದೆ. ಇದೇ ರೀತಿ ಮಾಗಡಿ ಕೆಂಪೇಗೌಡ ಪ್ರತಿಮೆಯನ್ನು ಜಿಲ್ಲಾ ಪಂಚಾಯಿತಿ ಮುಂಭಾಗ ನಿರ್ಮಿಸಲಾಗುತ್ತಿದ್ದು, ಜಿಲ್ಲಾ ಉಸ್ತು ವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಾರ್ಚ್ 12ರಂದು ಗುದ್ದಲಿಪೂಜೆ ಕಾರ್ಯ ನೆರವೇರಿಸಲಿದ್ದಾರೆ ಎಂದು ಹೇಳಿದರು.
ಅಂಬೇಡ್ಕರ್ ರವರ ಪ್ರತಿಮೆಯನ್ನು ಅತ್ಯಾಕರ್ಷಕವಾಗಿ ನಿರ್ಮಾಣ ಮಾಡಲು ಈಗಾಗಲೇ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಪ್ರತಿಮೆ ನಿರ್ಮಾಣದ ಕಾರ್ಯಕ್ಕೆ ಪ್ರಾರಂಭಿಕವಾಗಿ ಸರ್ಕಾರ ಈಗಾಗಲೇ 25 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿದೆ. ಪ್ರತಿಮೆ ನಿರ್ಮಾಣ ಕಾರ್ಯದ  ಗುದ್ದಲಿ ಪೂಜೆ ಸಮಾರಂಭಕ್ಕೆ ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಜಾತ್ಯಾತೀತವಾಗಿ ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಲು ಮನವಿ ಮಾಡಿದರು.
ದಲಿತ ಮುಖಂಡ ರಾ.ಶಿ.ದೇವರಾಜು ಮಾತನಾಡಿ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಶೋಷಿತ ಸಮುದಾ ಯಕ್ಕೆ ಬಲ ಬಂದಂತಾಗಿದೆ. ಅದರಲ್ಲಿ ಮುಖ್ಯವಾಗಿ ದಲಿತ ಸಮಾಜದಲ್ಲಿ ಉತ್ತಮ ಪ್ರಗತಿ ಕಾಣುತ್ತಿದ್ದೇವೆ. ಒಟ್ಟಾರೆಯಾಗಿ ಪ್ರಗತಿಪರ ಕೆಲಸಗಳು ನಡೆಯುತ್ತಿರುವುದು ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿ ಮಾತ್ರ ಎಂಬುದನ್ನು ಪ್ರತಿಯೊಬ್ಬರೂ ಮಣಗಾಣಬೇಕಿದೆ. ಕಳೆದ 20 ವರ್ಷಗಳ ಪ್ರಯತ್ನದಿಂದ ಇಂದು ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅಂಬೇಡ್ಕರ್ ಮತ್ತು ಕೆಂಪೇಗೌಡರ ಪ್ರತಿಮೆ ನಿರ್ಮಾಣವಾಗು ತ್ತಿರುವುದು ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ದಲಿತ ಮುಖಂಡರಾದ ಶಿವಕುಮಾರ ಸ್ವಾಮಿ, ರಾಂಪುರ ನಾಗೇಶ್, ಕೆಂಗಲಯ್ಯ, ಕಾಂಗ್ರೆಸ್ ಮುಖಂಡ ವೆಂಕಟಸ್ವಾಮಿ, ಶಿವಲಿಂಗ ಯ್ಯ, ಹಿರಿಯ ಪತ್ರಕರ್ತ ಚೆಲುವರಾಜು, ಅನಿಲ್ ಜೋಗಿಂದರ್ ಉಪಸ್ಥಿತರಿದ್ದರು. 
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑