Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಅಭಿವೃದ್ಧಿ ಯೋಜನೆಗಳ ಬಗ್ಗೆ ಡಿಸಿಎಂ ಸಮಾಲೋಚನೆ:

Posted date: 13 Aug, 2020

Powered by:     Yellow and Red

ರಾಮನಗರ ಅಭಿವೃದ್ಧಿ ಯೋಜನೆಗಳ ಬಗ್ಗೆ ಡಿಸಿಎಂ ಸಮಾಲೋಚನೆ:

ರಾಮನಗರ:ಆ/13/20/ಗುರುವಾರ. 250 ಬೆಡ್’ಗಳ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ, ಕುಡಿಯುವ ನೀರು, ಒಳಚರಂಡಿ ಅಭಿವೃದ್ಧಿ ಬಗ್ಗೆ ಚರ್ಚೆ

***

ಬೆಂಗಳೂರು: ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಇಲ್ಲಿನ ವಿಕಾಸಸೌಧ ದಲ್ಲಿ ಗುರುವಾರ ಸರಣಿ ಸಭೆಗಳನ್ನು ನಡೆಸಿದ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಅಭಿವೃದ್ಧಿ ಕಾಮಗಾರಿಗಳ ವೇಗ ಹೆಚ್ಚಬೇಕು ಹಾಗೂ ಪೂರ್ವ ನಿಗಧಿತ ಸಮಯಕ್ಕೆ ಅವುಗಳ ಪ್ರಯೋಜನ ಜನರಿಗೆ ಲಭ್ಯವಾಗಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. 


ರಾಮನಗರದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆಯನ್ನು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ  ಕಾಮಗಾರಿ, ಜಿಲ್ಲೆಯ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆ, ಒಳಚರಡಿ ಸುಧಾರಣೆ ಸೇರಿ ಜಿಲ್ಲೆಯಲ್ಲಿ ಕಾರ್ಯಗತವಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರಲ್ಲದೆ, ಎಲ್ಲ ಯೋಜನೆಗಳು ಕಾಲಮಿತಿಯಲ್ಲಿ ಮುಗಿಯಲೇಬೇಕು ಎಂದು ಅಧಿಕಾರಿಗಳಿಗೆ ಖಡಕ್ಕಾಗಿ ಸೂಚನೆ ನೀಡಿದರು.


250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ:


ಜಿಲ್ಲಾ ಕೇಂದ್ರದಲ್ಲಿ ಈಗ ನಿರ್ಮಾಣ ಆಗುತ್ತಿರುವ 250 ಹಾಸಿಗೆಗಳ ಆಸ್ಪತ್ರೆಯನ್ನು ಜಾಗತಿಕ ಗುಣಮಟ್ಟದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸುವ  ಕಾಮಗಾರಿಯ ಪ್ರಗತಿಯ ಬಗ್ಗೆ ಡಿಸಿಎಂ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದ್ರೋಗ, ನರರೋಗ, ಎದೆ ಸಮಸ್ಯೆ ಮುಂತಾದ ಗಂಭೀರ ಕಾಯಿಲೆಗಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುವುದು. ಜತೆಗೆ ಈಗಾಗಲೇ ಜಿಲ್ಲಾ ಕೇಂದ್ರದಲ್ಲಿರುವ 100 ಹಾಸಿಗೆಗಳ ಅಸ್ಪತ್ರೆಯನ್ನು ತಾಯಿ-ಮಕ್ಕಳ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲು ಕೂಡ ಸಭೆಯಲ್ಲಿ ನಿರ್ಧರಿಸಲಾಯಿತು.


ಮಣಿಪಾಲ್ ಆಸ್ಪತ್ರೆ ತಜ್ಞ ವೈದ್ಯರು ಆಸ್ಪತ್ರೆಯ ನಿರ್ಮಾಣಕ್ಕೆ ಸೂಕ್ತ ಸಲಹೆ ನೀಡುತ್ತಿದ್ದು, ಜಾಗತಿಕ ಗುಣಮಟ್ಟಕ್ಕೆ ಯಾವುದೇ ರೀತಿಯಲ್ಲೂ ತಗ್ಗದಂತೆ ಸೌಲಭ್ಯಗಳ ವ್ಯವಸ್ಥೆ ಮಾಡಲಾಗುವುದು. ಮೂರು ತಿಂಗಳ ಅವಧಿಯಲ್ಲಿ ಈ ಆಸ್ಪತ್ರೆಯ ಕಾಮಗಾರಿ ಮುಗಿಯುತ್ತದೆ. ಈ ಭಾಗದ ಜನರಿಗೆ ಇನ್ನು ಮುಂದೆ ರಾಮನಗರದಲ್ಲಿಯೇ ಜಾಗತಿಕ ಗುಣಮಟ್ಟದ ಚಿಕಿತ್ಸೆ ದೊರೆಯಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಇಂಥ ಸುಸಜ್ಜಿತ ಆಸ್ಪತ್ರೆ ಅಗತ್ಯವಾಗಿತ್ತು ಎಂಬುದನ್ನು ಸಭೆಯಲ್ಲಿ ಚರ್ಚೆ ನಡೆಸಲಾಯಿತು.


ಈ ಸಭೆಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ನಿಗದಿತ ವೇಳೆಯಲ್ಲೇ ಈ ಆಸ್ಪತ್ರೆಯೂ ಜನರ ಸೇವೆಗೆ ಲಭ್ಯವಾಗುವಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳಿಗೆ ಹೇಳಿದರು.


ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಜಿಲ್ಲಾ ಸರ್ಜನ್ ಡಾ. ಶಶಿಧರ್, ಜಿಲ್ಲೆಯ ತಜ್ಞ ವೈದ್ಯೆ ಡಾ. ಪದ್ಮಾ ಹಾಗೂ ಮಣಿಪಾಲ ಆಸ್ಪತ್ರೆಯ ವೈದ್ಯರು ಪಾಲ್ಗೊಂಡಿದ್ದರು.  


ಕುಡಿಯುವ ನೀರಿನ ಯೋಜನೆ:


ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರೊದಿಗಿಸಲು ಇಗ್ಗಲೂರು ಅಣೆಕಟ್ಟೆಯಿಂದ ಕಣ್ವ, ಮಂಚನಬೆಲೆ ಮತ್ತು ವೈ.ಜಿ. ಗುಡ್ಡ ಜಲಾಶಯಗಳಿಗೆ ನೀರು ತುಂಬಿಸುವ ಕಾಮಗಾರಿಯ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಪರಿಶೀಲನೆ ನಡೆಸಿದರು. 540 ಕೋಟಿ ರೂ. ವೆಚ್ಚದಲ್ಲಿ ಕಾರ್ಯಗತವಾಗುತ್ತಿರುವ ಈ ಯೋಜನೆಯೂ 2020ರ ಡಿಸೆಂಬರ್ ಹೊತ್ತಿಗೆ ಮುಗಿಯಲಿದ್ದು, ಕಾವೇರಿ ನದಿಯಿಂದ ಜಿಲ್ಲೆಗೆ ನೀರು ತರಲಾಗುತ್ತಿದೆ ಎಂದು ಅವರು ತಿಳಿಸಿದರು.


ಇದಾದ ಮೇಲೆ 1,800 ಕೋಟಿ ರೂ. ವೆಚ್ಚದಲ್ಲಿ ಮನೆಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಯೋಜನೆ ಹಾಕಿಕೊಳ್ಳಲಾಗಿದ್ದು, ಇದಕ್ಕೆ ಕೇಂದ್ರದ ಒಪ್ಪಿಗೆಯನ್ನು ಪಡೆಯಬೇಕಾಗಿದೆ. ಇನ್ನು 311 ಕೋಟಿ ರೂ. ವೆಚ್ಚದಲ್ಲಿ ಜಿಲ್ಲೆಯ ಒಟ್ಟು 2.8 ಲಕ್ಷ ಮನೆಗಳ ಪೈಕಿ ಮೊದಲ ಹಂತದಲ್ಲಿ 75,000 ಮನೆಗಳಿಗೆ ಶುದ್ಧ ನೀರು ಒದಗಿಸುವ ಯೋಜನೆ ಪ್ರಗತಿಯಲ್ಲಿದೆ. ಎಲ್ಲ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲೇ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿಎಂ ತಾಕೀತು ಮಾಡಿದರು.


ರಾಮನಗರ, ಚನ್ನಪಟ್ಟಣ, ಬಿಡದಿ, ಮಾಗಡಿ ಮತ್ತು ಕನಕಪುರ ಪಟ್ಟಣಗಳಿಗೆ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗಳ ಪ್ರಗತಿಯನ್ನು ಕೂಡ ಡಿಸಿಎಂ ಪರಿಶೀಲನೆ ನಡೆಸಿದರು. ರಾಮನಗರ ಪಟ್ಟಣಕ್ಕೆ 456 ಕೋಟಿ ರೂ. ವೆಚ್ಚದಲ್ಲಿ ಹಾಗೂ ಬಿಡದಿ ಪಟ್ಟಣಕ್ಕೆ 171 ಕೋಟಿ ರೂ. ವೆಚ್ಚದಲ್ಲಿ ನೀರು ಒದಗಿಸುವ ಕಾಮಗಾರಿ ಭರದಿಂದ ನಡೆಯುತ್ತಿದ್ದು ಈ ಕಾಮಗಾರಿಗಳು ಪೂರ್ವ ನಿಗದಿತ ಎರಡು ವರ್ಷದಲ್ಲಿಯೇ ಪೂರ್ಣ ಆಗಲೇಬೇಕು ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಭೆಯಲ್ಲಿ ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆಗೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಜಯರಾಂ, ಬೆಂಗಳೂರು ಜಲಮಂಡಳಿ ಮುಖ್ಯ ಎಂಜಿನಿಯರ್ ರಮೇಶ್, ನಗರ ನೀರು ಸರಬರಾಜು ಮಂಡಳಿ ಮುಖ್ಯ ಎಂಜಿನಿಯರ್ ದಿನೇಶ್, ಸಣ್ಣ ನೀರಾವರಿ ಇಲಾಖೆಯ ಮುಖ್ಯ ಎಂಜಿನೀಯರ್ ಶಂಕರೇ ಗೌಡ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಮುಖ್ಯ ಎಂಜಿನೀಯರ್ ಬಸಪ್ಪ ಉಪಸ್ಥಿತರಿದ್ದರು.


ಈ ಎಲ್ಲ ಸಭೆಗಳಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ಅರ್ಚನಾ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑