Tel: 7676775624 | Mail: info@yellowandred.in

Language: EN KAN

    Follow us :


ಸ್ವಾತಂತ್ರ್ಯ ಬಂದು 74 ವರ್ಷವಾದರೂ ಸಮಾನತೆ ಸಾಧಿಸಲಾಗಿಲ್ಲ. ತಹಶಿಲ್ದಾರ್ ನಾಗೇಶ್

Posted date: 15 Aug, 2020

Powered by:     Yellow and Red

ಸ್ವಾತಂತ್ರ್ಯ ಬಂದು 74 ವರ್ಷವಾದರೂ ಸಮಾನತೆ ಸಾಧಿಸಲಾಗಿಲ್ಲ. ತಹಶಿಲ್ದಾರ್ ನಾಗೇಶ್

ಚನ್ನಪಟ್ಟಣ:ಆ/15/20/ಶನಿವಾರ. ಸ್ವಾತಂತ್ರ್ಯ ಬಂದು ಇಂದಿಗೆ 74 ವರ್ಷ ಕಳೆದರೂ ದೇಶದಲ್ಲಿ ನಾವು ಸಮಾನತೆ ಸಾಧಿಸಲಾಗಿಲ್ಲ. ಅಸಮಾನತೆ ನಮ್ಮಲ್ಲಿ ತಾಂಡವಾಡುತ್ತಿದೆ. ಸಮಾನತೆ ಸಾಧಿಸಲು ಯುವಶಕ್ತಿ ಪಣ ತೊಡಬೇಕು, ಎಂದು ತಾಲ್ಲೂಕಿನ ದಂಡಾಧಿಕಾರಿ ನಾಗೇಶ್ ಅಭಿಪ್ರಾಯ ಪಟ್ಟರು.

ಅವರು ಇಂದು ನಗರದ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ 74 ನೇ ಸರಳ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.


ಸರ್ಕಾರದ ಹಲವಾರು ಯೋಜನೆಗಳ ಫಲಗಳು, ಫಲಾನಿಭವಿಗಳಿಗೆ ತಲುಪುತ್ತಿಲ್ಲ. ಸಮಾನತೆ ಸಾಧಿಸಬೇಕಾದರೆ ಸರ್ಕಾರದ ಯೋಜನೆಗಳು ಸಕಾಲದಲ್ಲಿ, ಸಂಪೂರ್ಣವಾಗಿ ಫಲಾನುಭವಿಗಳಿಗೆ ದೊರೆತಾಗ ಮಾತ್ರ ಸಮಾನತೆ ಸಾಧಿಸಬಹುದು. ಇದರಲ್ಲಿ ಅಧಿಕಾರಿಗಳ ಮಾತ್ರ ಮಹತ್ವವಾದದ್ದು ಎಲ್ಲಾ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ನಾವೆಲ್ಲರೂ ಸಮರ್ಥರಿದ್ದು ಸಮಾನತೆ ಸಾಧಿಸುತ್ತೇವೆ ಎಂದರು.


ಮುಖ್ಯ ಭಾಷಣಕಾರರಾಗಿ ಮಾತನಾಡಿದ ಉಪನ್ಯಾಸಕ ಚನ್ನವೀರೇಗೌಡ ರು ಸ್ವಾತಂತ್ರ್ಯ ಪೂರ್ವದಲ್ಲಿ ಮಹಮ್ಮದ್ ಘಜನಿ, ಅಲೆಕ್ಸಾಂಡರ್, ಬ್ರಿಟಿಷರಾದಿಯಾಗಿ ಅನೇಕ ವಿದೇಶಿಯರು ದಾಳಿ ಮಾಡಿ ದೇಶದ ಸಂಪತ್ತನ್ನು ದೋಚಿದ್ದಾರೆ. ಗಾಂಧಿಜೀಯವರು ಅಹಿಂಸೆ, ಸತ್ಯಾಗ್ರಹ ಮಾರ್ಗದ ಮೂಲಕ, ಸುಭಾಷ್ ಚಂದ್ರ ಬೋಸ್ ರಂತಹ ಕ್ರಾಂತಿಕಾರಿಗಳು ರೋಷಾವೇಷದ ಮೂಲಕ ಸ್ವಾತಂತ್ರ್ಯ ಪಡೆಯಲು ತಮ್ಮ ಜೀವಿತಾವಧಿಯನ್ನು ಸವೆಸಿದ್ದಾರೆ. ಅನೇಕ ಮಹಿಳಾ ರಾಣಿಯರು ಸಹ ಸ್ವಾತಂತ್ರ್ಯ ಪಡೆಯಲು ತಮ್ಮ ಸಾಮ್ರಾಜ್ಯವನ್ನೇ ಕಳೆದುಕೊಂಡು ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟಿದ್ದಾರೆ ಎಂದರು.


ನಮ್ಮ ದೇಶ ವಿವಿಧತೆಯಲ್ಲಿ ಏಕತೆ ಹೊಂದಿರುವ ಬಹು ದೊಡ್ಡ ಪ್ರಜಾಪ್ರಭುತ್ವ ದೇಶ. ಭೌಗೋಳಿಕವಾಗಿ ಹಾಗೂ ಕಲಾ ಸಂಸ್ಕೃತಿಯಲ್ಲೂ ಶ್ರೀಮಂತ ದೇಶವಾಗಿದೆ. ದೇಶ ಸೇವೆಯೇ ಈಶ ಸೇವೆ ಎಂಬಂತೆ ನಾವೆಲ್ಲರೂ ರಾಷ್ಟ್ರ ಭಕ್ತಿಯನ್ನು ಮೆರೆಯಬೇಕು ಎಂದು ಯುವ ಶಕ್ತಿಗೆ ಕರೆ ನೀಡಿದರು.


*ಟಿಹೆಚ್ಓ ಗದ್ಗದಿತ*

ತಾಲ್ಲೂಕು ವೈದ್ಯಾಧಿಕಾರಿ ಡಾ ಕೆ ಪಿ ರಾಜು ರವರು ಕೊರೊನಾ ವಾರಿಯರ್ಸ್ ಆಗಿ ಸನ್ಮಾನ ಸ್ವೀಕರಿಸಿ ಮಾತನಾಡುವ ವೇಳೆ ಮಕ್ಕಳ ತಜ್ಞ ದಿವಂಗತ ಡಾ ಮಂಜುನಾಥ ರವರನ್ನು ನೆನೆದು ತೀವ್ರ ಗದ್ಗದಿತರಾದರು. ಕೊರೊನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಡಾ ಮಂಜುನಾಥ ಮತ್ತು ರಾಮನಗರದಲ್ಲಿ ಇಬ್ಬರು ವೈದ್ಯರು ಸೇರಿದಂತೆ ಅನೇಕ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ ಎಂದು ಗದ್ಗದಿತರಾಗಿಯೇ ಭಾಷಣ ಮುಗಿಸಿದರು.


*ಆಹ್ವಾನ ಪತ್ರಿಕೆಯಲ್ಲಿ ಲೋಪ*

ರಾಷ್ಟ್ರೀಯ ಹಬ್ಬಗಳಲ್ಲಿ ನಿಯಮದಂತೆ (ಪ್ರೋಟೋಕಾಲ್) ಜನಪ್ರತಿನಿಧಿಗಳ ಹೆಸರುಗಳನ್ನು ಮುದ್ರಿಸಬೇಕಿತ್ತು. ವಿಧಾನ ಪರಿಷತ್ ಸದಸ್ಯ ಸಿ ಎಂ ಲಿಂಗಪ್ಪನವರ ಹೆಸರನ್ನು ಕೈಬಿಟ್ಟಿದ್ದು, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಗಿರೀಶ್ ರವರ ಹೆಸರು ಮುದ್ರಣವಾಗಿದ್ದು ಇದು ಪ್ರೋಟೋಕಾಲ್‌ ನ ನಿಯಮವನ್ನು ಮುರಿದಂತಾಗಿದೆ.


*ಸನ್ಮಾನ*

ನರೇಗಾ ಕಾಮಗಾರಿಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಕ್ಕೆ ತಂದು ಉದ್ಯೋಗ ಖಾತ್ರಿಯಲ್ಲಿ ಸಾಧನೆ ಮಾಡಿದ ತಂತ್ರಜ್ಞೆ ಹರ್ಷಿತಾ, ಪಿಡಿಓ ಹರ್ಷಗೌಡ, ಶ್ರೀಧರ್ ಅವರನ್ನು ಸ್ಮರಣಿಕೆ ನೀಡಿ ಸನ್ಮಾಸಿಲಾಯಿತು.

ಪ್ರಗತಿಪರ ರೈತರು ಸೇರಿದಂತೆ ಹಲವಾರು ಇಲಾಖೆಯ ಸಾಧಕರನ್ನು ಸಹ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.


ವೇದಿಕೆಯಲ್ಲಿ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ನಾಗರಾಜು ಮತ್ತು ಟಿಎಪಿಸಿಎಂಎಸ್ ಅಧ್ಯಕ್ಷ ವೆಂಕಟಸ್ವಾಮಿ, ಪೌರಾಯುಕ್ತ ಶಿವನಂಕಾರಿಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು, ನಗರ ವೃತ್ತ ನಿರೀಕ್ಷಕ ಗೋವಿಂದರಾಜು, ಕೃಷಿ ಇಲಾಖೆಯ ಅಪರ್ಣಾ, ಅಕ್ಷರ ದಾಸೋಹ ದ ಸಿದ್ದರಾಜು ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑