Tel: 7676775624 | Mail: info@yellowandred.in

Language: EN KAN

    Follow us :


ಭಾಷೆಯಿಂದ ಭಾಷೆಗೆ, ಜನರಿಂದ ಜನರಿಗೆ ಬಂದಿರುವುದೇ ಜಾನಪದ ಸಿಇಓ ಇಕ್ರಂ

Posted date: 23 Aug, 2020

Powered by:     Yellow and Red

ಭಾಷೆಯಿಂದ ಭಾಷೆಗೆ, ಜನರಿಂದ ಜನರಿಗೆ ಬಂದಿರುವುದೇ ಜಾನಪದ ಸಿಇಓ ಇಕ್ರಂ

ರಾಮನಗರ:ಆ/23/20/ಭಾನುವಾರ. ಭಾಷೆಯಿಂದ ಭಾಷೆಗೆ, ಜನರ ಬಾಯಿಂದ ಬಾಯಿಗೆ, ತಲೆಮಾರಿನಿಂದ ತಲೆಮಾರಿಗೆ ಹರಿದು, ನಿರಂತವಾಗಿ ಉಳಿದುಕೊಂಡಿದ್ದಲ್ಲದೆ, ಮುಂದಿನ ಪೀಳಿಗೆಗೂ ತಲುಪುತ್ತಿರುವ ಕಲೆ ಜನಪದ ಕಲೆ ಎಂದು ರಾಮನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಇಕ್ರಂ ಸಂತಸ ವ್ಯಕ್ತಪಡಿಸಿದರು.


ಅವರು ಇಂದು ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್ತು, ಅಖಿಲ ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟ, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ಅಂದು ಲಿಪಿ ಇಲ್ಲದೆ ಜನರ ಬಾಯಿಯಲ್ಲೇ ಉಳಿದ ಜನಪದವನ್ನು ಇಂದು, ಮುಂದು ಹಾಗೂ ಶಾಶ್ವತವಾಗಿ ಉಳಿಸಲು ಎಚ್ ಎಲ್ ನಾಗೇಗೌಡರು ಜಾನಪದ ಲೋಕವನ್ನು ಸೃಷ್ಟಿಸಿದ್ದಾರೆ. ಇಂತ ಮಹಾನ್ ಜಾನಪದ ತಜ್ಞರ ಆಶಯಗಳನ್ನು ಈಡೇರಿಸಲು ಜಿಲ್ಲಾ ಪಂಚಾಯತಿಯು ತನ್ನ ಮಿತಿಯಲ್ಲಿ ಕಲಾವಿದರಿಗೆ ಸಹಕಾರ ನೀಡಲು ನೆರವಾಗುವುದಾಗಿ ತಿಳಿಸಿದರು


ಮತ್ತೋರ್ವ ಮುಖ್ಯ ಅತಿಥಿ ಎಎಸ್ಪಿ ರಾಮರಾಜನ್ ರವರು ಮಾತನಾಡಿ ನಾನು ಸಹ ಕಲಾವಿದರ ಕುಟುಂಬದಿಂದ ಬಂದವನು. ನಮ್ಮ ತಂದೆಯು ಸಹ ಉತ್ತಮ ನಾಟಕಕಾರರು. ಕಲೆ ಜೀವನದ ಒಂದು ಮುಖ್ಯವಾದ ಅಂಗ. ಅದು ಪ್ರತಿಯೊಬ್ಬರಲ್ಲೂ ಒಂದೊಂದು ಬಗೆಯಲ್ಲಿರುತ್ತದೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅದು ಬಹಳ ಮುಖ್ಯ ಅಂಗ ಎಂದೇ ಭಾವಿಸಬಹುದು. ಅದು ಪುರಾಣ ಪುಣ್ಯ ಕಥೆಗಳಿರಬಹುದು ಅಥವಾ ಇತಿಹಾಸ ಇರಬಹುದು. ಎರಡರಲ್ಲೂ ಕಲೆ ಅಜರಾಮರವಾಗಿವೆ. ಕಲೆಯನ್ನು ಉಳಿಸಲು ನಾವೆಲ್ಲರೂ ಒಗ್ಗೂಡಿ ಉಳಿಸಿ ಬೆಳೆಸೋಣಾ ಎಂದು ಕರೆ ನೀಡಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿ ತಿಮ್ಮೇಗೌಡರು ಮಾತನಾಡಿ ಕಲಾವಿದರು ನಮ್ಮ ಆಸ್ತಿ. ಅವರನ್ನು ನಾವುಗಳು ಉಳಿಸಿದರೆ ಕಲೆಯನ್ನು ಉಳಿಸಿದಂತೆ ಎಂದು ಅಭಿಪ್ರಾಯಪಟ್ಟರು. ಕೊರೊನಾ ಸಮಯದಲ್ಲೂ ಸರ್ಕಾರಕ್ಕೆ ಮೊರೆ ಇಟ್ಟು ಸಣ್ಣ ಪ್ರಮಾಣದ ಆರ್ಥಿಕ ಸಹಾಯ ಹಾಗೂ ದಿನಸಿ ಪದಾರ್ಥಗಳನ್ನು ಕೆಲವರಿಗೆ ನೀಡಲಾಗಿದೆ. ಉಳಿದವರಿಗೂ ಕೊಡಲು ಎಲ್ಲಾ ತಯಾರಿ ‌ನಡೆದಿದೆ ಎಂದರು.


ಹಿರಿಯ ಕಲಾವಿದ ಚಿಕ್ಕನರಸಯ್ಯ ಉದ್ಘಾಟನಾ ನುಡಿಗಳನ್ನಾಡಿದರು. ಜೋಗಿಲ ಸಿದ್ದರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರೆ ಜಾನಪದ ಲೋಕದ ಮುಖ್ಯ ಆಡಳಿತಾಧಿಕಾರಿ ಸಿ ಎನ್ ರುದ್ರಪ್ಪನವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸು ತ ರಾಮೇಗೌಡ ಉಪಸ್ಥಿತರಿದ್ದರು. ವೈದ್ಯ ಹನುಮಂತಯ್ಯನವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಹಲವಾರು ಜಿಲ್ಲೆಗಳ ಕಲಾವಿದರು ಜಾನಪದ ಕಲೆಗಳನ್ನು ಪ್ರದರ್ಶಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑