Tel: 7676775624 | Mail: info@yellowandred.in

Language: EN KAN

    Follow us :


ಪ್ರವಾಸಿ ತಾಣವಾಗಿ ಮಂಚನಬೆಲೆ ಅಭಿವೃದ್ಧಿ: ಅಶ್ವತ್ಥ ನಾರಾಯಣ

Posted date: 28 Aug, 2020

Powered by:     Yellow and Red

ಪ್ರವಾಸಿ ತಾಣವಾಗಿ ಮಂಚನಬೆಲೆ ಅಭಿವೃದ್ಧಿ: ಅಶ್ವತ್ಥ ನಾರಾಯಣ

ರಾಮನಗರ:ಆ/29/20/ಶುಕ್ರವಾರ. ಮಂಚನಬೆಲೆ ಜಲಾಶಯವನ್ನು ಪ್ರವಾಸಿಗರ ತಾಣವನ್ನಾಗಿಸುವ ದೃಷ್ಠಿಯಿಂದ ಇಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಅನ್ನು ನಿರ್ಮಿಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಇಂದು ತಿಳಿಸಿದರು.


ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿರುವ ಮಂಚನಬೆಲೆ ಜಲಾಶಯವು ತುಂಬಿರುವ ಹಿನ್ನೆಲೆಯಲ್ಲಿ ಇಲ್ಲಿ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿಗಳು, ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ಮನರಂಜನಾ ಪಾರ್ಕ್ ಅನ್ನು ಅಭಿವೃದ್ಧಿ ಪಡಿಸಲಾಗುವುದು. ದೋಣಿ ವಿಹಾರ ಸೇರಿದಂತೆ ಹಲವು ಬಗೆಯ ಮನರಂಜನೆಯ ಥೀಮ್ಗಳನ್ನು ಒಳಗೊಂಡಿರುವಂತೆ ಪಾರ್ಕ್ ಅನ್ನು ನಿರ್ಮಿಸಲು ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.


ಬೆಂಗಳೂರಿಗೆ ಹೊಂದಿಕೊಂಡಿರುವ ರಾಮನಗರ ಜಿಲ್ಲೆಯ ಮಾಗಡಿಯ ಮಂಚನಬೆಲೆಯಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ ಅನ್ನು ನಿರ್ಮಿಸುವುದರಿಂದ ಎರಡೂ ನಗರಗಳ ಜನತೆಗೆ ವಾರಾಂತ್ಯದಲ್ಲಿ ಉತ್ತಮ ಮನರಂಜನಾ ಪಾರ್ಕ್ ಲಭ್ಯವಾದಂತೆ ಆಗಲಿದೆ. ಅಲ್ಲದೆ, ಇದರಿಂದ ಅನೇಕ ಮಂದಿಗೆ ಉದ್ಯೋಗದ ಅವಕಾಶಗಳು ತೆರೆದುಕೊಳ್ಳಲಿದೆ. ಉತ್ತಮ ರಸ್ತೆಗಳು ಸಹ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ವಿವರಿಸಿದರು.


ಜಾಗತಿಕ ದರ್ಜೆಗೆ ಅನುಗುಣವಾಗಿ ಈ ಅಮ್ಯೂಸ್ಮೆಂಟ್ ಪಾರ್ಕ್ ಅನ್ನು ನಿರ್ಮಿಸಲಾಗುವುದು. ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಪಾರ್ಕ್ ಅನ್ನು ನಿರ್ಮಿಸುವ ಬಗ್ಗೆ ಅತ್ಯುತ್ತಮ ಸಂಸ್ಥೆಗಳ ಮೂಲಕ ವಿಸ್ತತ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು. ಯೋಜನೆಗೆ ಅನುಮೋದನೆ ಪಡೆದುಕೊಂಡ ಬಳಿಕ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿಗಳು ಮಾಹಿತಿ ನೀಡಿದರು.


*ಜನವಸತಿಗೆ ಶುದ್ಧ ನೀರು:*  ರಾಮನಗರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಜನವಸತಿಗಳಿಗೆ ಶುದ್ಧ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡಿ 250 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಕಾಮಗಾರಿಗಳನ್ನು ಜಿಲ್ಲೆಯಾದ್ಯಂತ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.


ಜಿಲ್ಲೆಯ ಕಣ್ವ, ಮಂಚನಬೆಲೆ, ಇಗ್ಗಲೂರು ಹಾಗೂ ವೈ.ಜಿ ಗುಡ್ಡ ಜಲಾಶಯಗಳಿಗೆ ಕಾವೇರಿ ನದಿಯಿಂದ ನೀರನ್ನು ತುಂಬಿಸಿ ಈ ಜಲಮೂಲಗಳಿಂದ ಜಿಲ್ಲೆಯ ವಸತಿ ಪ್ರದೇಶಗಳಿಗೆ ನೀರು ಒದಗಿಸಲು ರಾಜ್ಯ ಸರ್ಕಾರವು 1,800 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ. ಪ್ರಸ್ತಾವನೆಗೆ ಅನುಮೋದನೆ ದೊರೆತ ತಕ್ಷಣ ರಾಜ್ಯ ಸರ್ಕಾರ ಈ ದಿಶೆಯಲ್ಲಿ ಕಾರ್ಯೋನ್ಮುಖವಾಗಲಿದೆ ಎಂದರು.


*ಎಲ್ಲಾ ತಾಲ್ಲೂಕಿಗೂ ಕುಡಿವ ನೀರು:* ಒಟ್ಟು 540 ಕೋಟಿ ರೂ.ಗಳ ವೆಚ್ಚದ ಸತ್ತೇಗಾಲ ಕುಡಿಯುವ ನೀರು ಯೋಜನೆ ಪ್ರಗತಿಯಲ್ಲಿದ್ದು, ಇದರಿಂದ ಮೊಗೇನಹಳ್ಳಿ ಕೆರೆ ಮತ್ತು ಕಣ್ವ ಜಲಾಶಯಕ್ಕೆ ನೀರನ್ನು ತುಂಬಿಸಲಾಗುತ್ತದೆ. ಪುನಃ ಅಲ್ಲಿಂದ ಮಂಚನಬೆಲೆ ಜಲಾಶಯ ಮತ್ತು ವೈ.ಜಿ.ಗುಡ್ಡ ಕೆರೆಗೆ ತಂದು ಅದನ್ನು ನಾಲ್ಕು ತಾಲ್ಲೂಕುಗಳಿಗೂ ಕುಡಿಯುವ ನೀರನ್ನು ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ವಿವರಿಸಿದರು.


ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಕಾಮಗಾರಿಗೆ ಆದ್ಯತೆ ನೀಡಿ ವಿವಿದ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದೆ. ಅದರಲ್ಲೂ, ಪ್ರಮುಖವಾಗಿ 210 ಕೋಟಿ ರೂ.ಗಳ ವೆಚ್ಚದಲ್ಲಿ ಕೋಡಿಹಳ್ಳಿ ಹಾಗೂ ಇತರೆ 299 ಹಳ್ಳಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ,  4 ಕೋಟಿ ರೂ.ಗಳ ವೆಚ್ಚದಲ್ಲಿ ಸಾತನೂರು ಹಾಗೂ ಇತರೆ  29 ಹಳ್ಳಿಗಳಿಗೆ  ಕುಡಿಯುವ ನೀರಿನ ಸರಬರಾಜು ಯೋಜನೆ ಹಾಗೂ 2 ಕೋಟಿ ರೂ.ಗಳ ವೆಚ್ಚದಲ್ಲಿ ಹಾರೋಹಳ್ಳಿ ಗ್ರಾಮಕ್ಕೆ ಕುಡಿಯುವ ನೀರಿನ ಸರಬರಾಜು ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.


*ಶ್ರೀರಂಗ ಏತ ನೀರಾವರಿ:*  ಮಾಗಡಿ ತಾಲ್ಲೂಕಿನ 211 ಹಳ್ಳಿಗಳಿಗಳಿಗೆ ಕುಡಿಯುವ ನೀರು ಒದಗಿಸಲು ಮತ್ತು ಇಲ್ಲಿನ 66 ಕೆರೆಗಳನ್ನು ಹೇಮಾವತಿ ನದಿಯಿಂದ ಏತ ನೀರಾವರಿ ಮೂಲಕ ತುಂಬಿಸುವ ಶ್ರೀರಂಗ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದುಕೊಂಡು ಒಂದು ವರ್ಷದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ಅಶ್ವತ್ಥ ನಾರಾಯಣ ಅವರು ನುಡಿದರು.


ಕನಕಪುರ ತಾಲೂಕಿನ ಕೋಡಿಹಳ್ಳಿ ಹಾಗೂ 298 ಜನವಸತಿಗಳಿಗೆ ಕಾವೇರಿ ನದಿಯಿಂದ ಶುದ್ಧ ನೀರನ್ನು ಪೂರೈಸಲು 210 ಕೋಟಿ ರೂ.ಗಳ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಯೋಜನೆಯ ಪ್ರಗತಿಯು ವಿವಿಧ ಹಂತದಲ್ಲಿದೆ. ಯೋಜನೆಯ ಮುಂದಿನ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ.


*ಕೆರೆ ಕಾಮಗಾರಿ:* ಅರ್ಕಾವತಿ ಜಲಾಶಯದ ಹಿನ್ನೀರಿನಿಂದ ಕನಕಪುರ ತಾಲ್ಲೂಕಿನ ಗರಳಾಪುರ ಹಾಗೂ ಇನ್ನಿತರ 12 ಕೆರೆಗಳಿಗೆ ಎರಡು ಹಂತಗಳಲ್ಲಿ 70 ಕೋಟಿ ರೂ.ಗಳ ವೆಚ್ಚದಲ್ಲಿ ನೀರು ತುಂಬಿಸಲಾಗುವುದು. ಭೂಸ್ವಾಧೀನದ ಸಮಸ್ಯೆ ಪರಿಹರಿಸಿಕೊಂಡು ಕಾಮಗಾರಿಯನ್ನು ಚುರುಕುಗೊಳಿಸಲಾಗುವುದು ಎಂದರು.


110 ಕೋಟಿ ರೂ.ಗಳ ವೆಚ್ಚದಲ್ಲಿ ಬೈರಮಂಗಲ ಕೆರೆಯ ಪುನಶ್ಚೇತನ ಕಾಮಗಾರಿ. 70 ಕೋಟಿ ರೂ.ಗಳ ವೆಚ್ಚದಲ್ಲಿ ದೊಡ್ಡಾಲಹಳ್ಳಿ ಮೈಕ್ರೋ ಇರಿಗೇಷನ್ ಕಾಮಗಾರಿ ಹಾಗೂ 252 ಕೋಟಿ ರೂ.ಗಳ ವೆಚ್ಚದಲ್ಲಿ  ನಾರಾಯಣಪುರ, ಗರಳಪುರ ಮತ್ತು ಸಾತನೂರು ಏತ ನೀರವಾರಿ ಯೋಜನೆಗಳಿಂದ ಕೆರೆ ತುಂಬಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.


*ಬಾಗಿನ ಸಮರ್ಪಣೆ:* ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು ಸೇರಿದಂತೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು, ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣ ಗೌಡ ಮತ್ತು ಸಂಸದ ಡಿ.ಕೆ. ಸುರೇಶ್ ಹಾಗೂ ಮಾಗಡಿ ಶಾಸಕ ಎ. ಮಂಜುನಾಥ್ ಸೇರಿದಂತೆ ಇನ್ನಿತರರು ಬಾಗಿನ ಸಮರ್ಪಣೆ ಮಾಡಿದರು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ರಾಮನಗರ ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ ಉಲ್ಲಾ ಷರೀಫ್, ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑