Tel: 7676775624 | Mail: info@yellowandred.in

Language: EN KAN

    Follow us :


ಮಹಿಳಾ ಅಭಿವೃದ್ಧಿ ನಿಗಮದ ಸಾಲ ತಪ್ಪದೆ ಮರಳಿಸಿ : ಶಶಿಕಲಾ

Posted date: 31 Aug, 2020

Powered by:     Yellow and Red

ಮಹಿಳಾ ಅಭಿವೃದ್ಧಿ ನಿಗಮದ ಸಾಲ ತಪ್ಪದೆ ಮರಳಿಸಿ : ಶಶಿಕಲಾ

ರಾಮನಗರ:ಆ/31/20/ಸೋಮವಾರ. ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪಡೆದುಕೊಂಡ ಸಾಲವನ್ನು ಫಲಾನುಭವಿ ಮಹಿಳೆಯರು ಸಮಯಕ್ಕೆ ಸರಿಯಾಗಿ ಪಾವತಿಸುವ ಮೂಲಕ ಬದ್ಧತೆಯನ್ನು ತೋರಿಸುವದರ ಜೊತೆಗೆ ಇನ್ನೊಬ್ಬ ಮಹಿಳೆಗೆ ನೆರವಾಗುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 

ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಅವರು ತಿಳಿಸಿದರು.


ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ರಾಮನಗರ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಹಾಗೂ ಉದ್ಯೋಗಿನಿ ಹಾಗೂ ಸಮೃದ್ಧಿ ಯೋಜನೆ ಫಲಾನುಭವಿಗಳಿಗೆ ಚೆಕ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಅಭಿವೃದ್ಧಿ ನಿಗಮದಿಂದ ಸಾಲ ಪಡೆದುಕೊಂಡವರು, ಸರ್ಕಾರ ಮತ್ತೆ ಸಾಲ ಮನ್ನಾ ಮಾಡುತ್ತದೆ ಎನ್ನುವ ಇನ್ನೊಬ್ಬರ ಮಾತಿಗೆ ಕಿವಿಗೊಡದೆ ಸಕಾಲದಲ್ಲಿ ಸಾಲದ ಕಂತನ್ನು ಪಾವತಿಸಿ ಸುಸ್ತಿದಾರರಾಗುವುದನ್ನು ತಪ್ಪಿಸಿಕೊಳ್ಳುವುದು ಅತ್ಯಂತ ಸೂಕ್ತ ಎನ್ನುವ ಸಲಹೆಯನ್ನು ನೀಡಿದರು.


ಮಹಿಳೆಯರಿಗೆ ನಿಗಮದ ವತಿಯಿಂದ ನೀಡಲಾಗುವ ಒಟ್ಟು ಸಾಲದ ಮೊತ್ತದ ಪೈಕಿ ಶೇ. 50 ರಷ್ಟು ಮೊತ್ತಕ್ಕೆ ಸಬ್ಸಿಡಿ ನೀಡಲಾಗಿರುತ್ತದೆ. ಇನ್ನುಳಿದ ಶೇ. 50 ರಷ್ಟು ಮೊತ್ತವನ್ನು ಅವರುಗಳು ಪಾವತಿಸಬೇಕಾಗಿರುತ್ತದೆ. ಆದರೆ, ಈ ಮೊತ್ತವನ್ನು ಸಹ ಪಾವತಿಸಬೇಕಾಗಿಲ್ಲ. ಸರ್ಕಾರ ಇದನ್ನು  ಕೂಡ ಮನ್ನಾ ಮಾಡುತ್ತದೆ ಎನ್ನುವ ಇನ್ನೊಬ್ಬರ ಬಣ್ಣದ ಮಾತುಗಳಿಗೆ ಮರುಳಾಗದೆ ಸಾಲ ಚುಕ್ತಾ ಮಾಡುವಂತೆ ಮಹಿಳಾ ಫಲಾನುಭವಿಗಳಿಗೆ ನಿಗಮದ ಅಧ್ಯಕ್ಷರು ತಿಳಿಹೇಳಿದರು.


ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಿರ್ಗತಿಕ ಮಹಿಳೆಯರು, ಅಬಲೆಯರು, ಲಿಂಗತ್ವ ಅಲ್ಪ ಸಂಖ್ಯಾತರು, ಆಶಕ್ತ ಮಹಿಳೆಯರು, ದೇವದಾಸಿಯರು ಮತ್ತು ವಿಧವೆಯರು ಸೇರಿದಂತೆ ಅನೇಕ ಮಹಿಳೆಯರು ಸಾಲ ಪಡೆದುಕೊಂಡು ತಮ್ಮ ಬದುಕನ್ನು  ರೂಪಿಸಿಕೊಂಡಿದ್ದಾರೆ. ಪಡೆದುಕೊಂಡ ಸಾಲವನ್ನು ಮರಳಿ ನೀಡಿದರೆ ಆ ಮೊತ್ತದಿಂದ ಇನ್ನೊಬ್ಬ ಮಹಿಳೆಗೆ ನಿಗಮವು ಸಹಾಯ ಮಾಡಲು ಸಾಧ್ಯವಾಗುತ್ತದೆ. ಹೀಗಾಗಿ, ಸಾಲ ಪಡೆದು ಅದನ್ನು ಕಟ್ಟುವ ಮೂಲಕ ಬದ್ಧತೆಯನ್ನು ತೋರುವಂತೆ ಮಹಿಳಾ ನಿಗಮದ ಅಧ್ಯಕ್ಷರು ಹೇಳಿದರು.


*ತರಬೇತಿ ಅವಧಿ ಕಡಿತ:* ಆರು ದಿನಗಳ ಕಡ್ಡಾಯ ತರಬೇತಿ ಪಡೆದುಕೊಂಡ ಬಳಿಕವೇ ಸಾಲ ಮಂಜೂರಾದವರಿಗೆ ಹಣವನ್ನು ನೀಡಲಾಗುತ್ತಿತ್ತು. ಆದರೆ, ಕೋವಿಡ್-19 ಹಿನ್ನೆಲೆಯಲ್ಲಿ ಆರು ದಿನಗಳ ತರಬೇತಿ ಪಡೆದುಕೊಳ್ಳಲು ಮಹಿಳೆಯರು ಹೆಚ್ಚಿನ  ತೊಂದರೆಯಾಗುತ್ತವೆ ಎನ್ನುವ ಹಿನ್ನೆಲೆಯಲ್ಲಿ ಸರ್ಕಾರ ತರಬೇತಿಯ ಅವಧಿಯನ್ನು ಒಂದು ದಿನಕ್ಕೆ ಇಳಿಸಿದೆ. ಮಹಿಳೆಯರು ಇದರ ಲಾಭವನ್ನು ಪಡೆದುಕೊಳ್ಳುವಂತೆ ಟೆಂಗಳಿ ಅವರು ತಿಳಿಸಿದರು.


*ಸಮೃದ್ಧಿ ಯೋಜನೆ:* ಸಣ್ಣಪುಟ್ಟ ವ್ಯಾಪಾರಗಳಾದ ಹಣ್ಣು, ಹೂ, ತರಕಾರಿ ಇಲ್ಲವೆ ತೆಂಗಿನಕಾಯಿ ಮಾರಾಟ ಮಾಡುವಂಥ ಸಣ್ಣ ಮಹಿಳಾ ವ್ಯಾಪಾರಿಗಳನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಸಮೃದ್ಧಿ ಯೋಜನೆ ಹೊಂದಿದೆ. ಈ ಹಿನ್ನೆಲೆಯಲ್ಲಿ ತೀರಾ ಅವಶ್ಯಕತೆ ಇರುವ ಮಹಿಳೆಯರಿಗೆ ಮಾತ್ರ ಈ ಯೋಜನೆಯಡಿ ಸಾಲ ನೀಡಲಾಗುತ್ತದೆ. ಇದರಲ್ಲಿ 10 ಸಾವಿರ ಮೊತ್ತವನ್ನು ನೀಡಲಾಗುತ್ತದೆ. ಅದರಿಂದಲೇ ಆ ಮಹಿಳೆಯರು ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ಹೀಗಾಗಿ, ಈ ಯೋಜನೆಯಡಿ ಮಹಿಳೆಯರನ್ನು ಆಯ್ಕೆ ಮಾಡುವಾಗ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು.


*ನಿರ್ಲಕ್ಷ್ಯಕ್ಕೆ ಒಳಾಗದವರಿಗೆ ನೆರವು:* ರಾಜ್ಯದಲ್ಲಿ ಇರುವ ದೇವದಾಸಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ವರ್ಗದವರನ್ನೂ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ಅವರಿಗೂ ನಿಗಮದ ವತಿಯಿಂದ ಸಾಲ ನೀಡಲಾಗುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರು ಬಿಕ್ಷಾಟನೆಯನ್ನು ಕೈಬಿಟ್ಟು ಒಳ್ಳೆಯ ಬದುಕನ್ನು ಕಟ್ಟಿಕೊಳ್ಳಲು ಅನುವಾಗುವಂತೆ ಅವರಿಗೂ ಸಾಲ ನೀಡಲಾಗುತ್ತಿದೆ. ಅದೇ ರೀತಿ ದೇವದಾಸಿಯರನ್ನು ಸಹ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಲು ಅನುವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ನುಡಿದರು.


ಮಹಿಳೆಗೆ ಸಮಾಜದಲ್ಲಿ ಸ್ಥಾನಮಾನ ಹಾಗೂ ಗೌರವದಿಂದ ಬದುಕಲು ಸರ್ಕಾರದ ಯೋಜನೆಗಳ ಮೂಲಕ ಆದಾಯ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ. ಸಮಾಜದಲ್ಲಿ ಕಟ್ಟ ಕಡೆಯ ಮಹಿಳೆಗೂ ಸರ್ಕಾರದ ಸವಲತ್ತುಗಳು ಸಿಗಲು ನಿಗಮದಿಂದ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು. ಉದ್ಯೋಗಿನಿ ಹಾಗೂ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಚೆಕ್ ಮತ್ತು ಪ್ರಮಾಣ ಪತ್ರ ನೀಡಿದರು.


ರಾಮನಗರ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಉಲ್ಲಾ ಷರೀಫ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿ.ವಿ. ರಾಮನ್ ಮತ್ತು ಜಿಲ್ಲಾ ಅಭಿವೃದ್ಧಿ ನಿರೀಕ್ಷಕಿ ಗಾಯಿತ್ರಿ ದೇವಿ, ಮಹಿಳಾ ಶಕ್ತಿ ಕೇಂದ್ರದ ಸೌಮ್ಯ ಮತ್ತು ತೇಜಸ್ವಿನಿ, ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್, ಆರೋಗ್ಯ ಇಲಾಖೆ ಅಧಿಕಾರಿ ಕುಮಾರ್ ಮತ್ತು ರಾಜು ಹಾಗೂ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿಗಳು ಮತ್ತು ಹಾಗೂ ವಿವಿಧ ಯೋಜನೆಯ ಫಲಾನುಭವಿಗಳು ಸಭೆಯಲ್ಲಿ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑