ಸೆ. 11ರಂದು ಉಪ ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ
ರಾಮನಗರ:ಸೆ/09/20/ಬುಧವಾರ. ಉಪ ಮುಖ್ಯಮಂತ್ರಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು (ಸೆ. 11) ಶುಕ್ರವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರೂ ಆಗಿರುವ ಅಶ್ವತ್ಥ ನಾರಾಯಣ ಅವರು ಅಂದು ಮಧ್ಯಾಹ್ನ 12.15 ಕ್ಕೆ ಇಗ್ಗಲೂರಿನಲ್ಲಿರುವ ಜಲಾಶಯಕ್ಕೆ ಭೇಟಿ ನೀಡುವರು. ನಂತರ ಮಧ್ಯಾಹ್ನ 1.45ಕ್ಕೆ ಕಣ್ವ ಜಲಾಶಯಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಲಿದ್ದಾರೆ. ಬಳಿಕ, ಚನ್ನಪಟ್ಟಣದಲ್ಲಿರುವ ರೇಷ್ಮೆ ತರಬೇತಿ ಕೇಂದ್ರಕ್ಕೆ ಮಧ್ಯಾಹ್ನ 3.00 ಕ್ಕೆ ಭೇಟಿ ನೀಡಿ ವೀಕ್ಷಿಸಲಿದ್ದಾರೆ.
*ಸುರಂಗ ಮಾರ್ಗ ವೀಕ್ಷಣೆ:* ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿಗಳು ಬೆಂಗಳೂರಿನಿಂದ ಹೊರಟು ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ತಾಲ್ಲೂಕಿನ ಸತ್ತೇಗಾಲ ಗ್ರಾಮದಲ್ಲಿರುವ ಸುರಂಗ ಮಾರ್ಗದ ವೀಕ್ಷಣೆಯನ್ನು ಅಂದು ಬೆಳಿಗ್ಗೆ 10.30 ಕ್ಕೆ ನಡೆಸಲಿದ್ದಾರೆ. ಬಳಿಕ 11 ಕ್ಕೆ ನೆಟ್ಕಲ್ ಗ್ರಾಮದ ಪೈಪ್ ಯಾರ್ಡ್ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 3.30 ಕ್ಕೆ ರಾಮನಗರದ ಚನ್ನಪಟ್ಟಣ ತಾಲ್ಲೂಕಿನಿಂದ ನಿರ್ಗಮಿಸಿ ರಸ್ತೆ ಮೂಲಕ ಸಂಜೆ 5.00 ಗಂಟೆಗೆ ಬೆಂಗಳೂರು ತಲುಪುವರು ಎಂದು ಉಪ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು