Tel: 7676775624 | Mail: info@yellowandred.in

Language: EN KAN

    Follow us :


ಮೆಗಾ ಅದಲಾತ್ ನ ಲಾಭ ಪಡೆದುಕೊಳ್ಳಿ: ನ್ಯಾಯಾಧೀಶ ವೆಂಕಟಪ್ಪ

Posted date: 15 Sep, 2020

Powered by:     Yellow and Red

ಮೆಗಾ ಅದಲಾತ್ ನ ಲಾಭ ಪಡೆದುಕೊಳ್ಳಿ: ನ್ಯಾಯಾಧೀಶ ವೆಂಕಟಪ್ಪ

ರಾಮನಗರ:ಸೆ/15/20/ಮಂಗಳವಾರ. ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಮುಂದಿನ ಶನಿವಾರ (ಸೆ. 19) ನಡೆಯುವ ಮೆಗಾ ಇ-ಲೋಕ ಅದಾಲತ್ ನಲ್ಲಿ ಇತ್ಯರ್ಥಗೊಳಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.


ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಮನಗರ ಜಿಲ್ಲೆಯಾದ್ಯಂತ ಇರುವ 18 ಬೆಂಚ್ ಗಳಲ್ಲಿ ಸೆ. 19 ರಂದು ಮೆಗಾ ಇ-ಲೋಕ ಅದಾಲತ್ ಆಯೋಜಿಸಲಾಗಿದೆ. ರಾಜಿ ಇಲ್ಲವೆ ಸಂದಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ್ಯ ಪಡಿಸಿಕೊಳ್ಳಲು ಅವಕಾಶವಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ  ಸತ್ರ ನ್ಯಾಯಾಧೀಶರು ಕೋರಿದ್ದಾರೆ.


ಜಿಲ್ಲೆಯಾದ್ಯಂತ ಏಕ ಕಾಲಕ್ಕೆ ಸೆ. 19 ರಂದು ನಡೆಯುವ ಇ-ಲೋಕ ಅದಾಲತ್ ಗಾಗಿ ಮುಂದಿನ ಶುಕ್ರವಾರದ ವರೆಗೆ (ಸೆ. 18) ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲಾಗುತ್ತದೆ. ರಾಮನಗರ ಜಿಲ್ಲಾ ಹಾಗೂ ಎಲ್ಲಾ ಅಧೀನ ನ್ಯಾಯಾಲಯಗಳಲ್ಲಿ ಕಲಾಪವು ಆನ್ ಲೈನ್ ಮೂಲಕವೇ ನಡೆಯಲಿದೆ. ನ್ಯಾಯಾಲಯದ ಕಲಾಪಗಳಲ್ಲಿ ವಕೀಲರು ಖುದ್ದಾಗಿ ಇಲ್ಲವೆ ಆನ್ ಲೈನ್ ಮೂಲಕ ಭಾಗವಹಿಸಬಹುದು. ಅವಶ್ಯಕತೆ ಇದ್ದಲ್ಲಿ  ಕಕ್ಷಿದಾರರನ್ನು  ಆನ್ ಲೈನ್ ಮೂಲಕ ಸಂಪರ್ಕಿಸಲಾಗುವುದು ಎಂದು ವೆಂಕಟಪ್ಪ ಅವರು ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ಒಟ್ಟು 39,686 ಪ್ರಕರಣಗಳು ಬಾಕಿ ಇದೆ. ಇವುಗಳ ಪೈಕಿ 4,384 ಪ್ರಕರಣಗಳನ್ನು ಮೆಗಾ ಲೋಕ ಅದಾಲತ್ ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ಧಾರೆ. 


ಕೋವಿಡ್ -19 ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಶನಿವಾರ ಪ್ರಥಮಬಾರಿಗೆ ಆನ್ ಲೈನ್ ಮೂಲಕ ಸಣ್ಣ ಪುಟ್ಟ ಪ್ರಕರಣಗಳನ್ನು ಇತ್ಯರ್ಥ್ಯ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ದೇಶದಲ್ಲಿಯೇ ಪ್ರಥಮ ಬಾರಿಗೆ ಇ-ಲೋಕ ಅದಾಲತ್  ಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದ್ಧಾರೆ.


ವಿಮಾ ಕಂಪನಿಗಳಿಂದ ಬರಬೇಕಾದ ಪರಿಹಾರ, ಅಪಘಾತ, ಕಂತು ಕಟ್ಟದಿರುವುದು ಸೇರಿದಂತೆ ಇನ್ನಿತರ ಸಣ್ಣಪುಟ್ಟ ಪ್ರಕರಣಗಳನ್ನು ರಾಜಿ ಇಲ್ಲವೆ ಸಂಧಾನದ ಮೂಲಕ ಬಗೆಹರಿಸಲು ಒತ್ತು ನೀಡಲಾಗುತ್ತಿದೆ. ಹೀಗಾಗಿ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑