ಇ-ಅದಾಲತ್ ನಲ್ಲಿ 1290 ಪ್ರಕರಣ ಇತ್ಯರ್ಥ್ಯ : ನ್ಯಾಯಾಧೀಶೆ ಬಿ.ಜಿ. ರಮಾ
ರಾಮನಗರ:ಸೆ./22/ಮಂಗಳವಾರ. ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನಡೆದ ಮೆಗಾ ಇ-ಲೋಕ ಅದಾಲತ್ ನಲ್ಲಿ ಒಟ್ಟು 1,290 ಪ್ರಕರಣಗಳನ್ನು ರಾಜಿ - ಸಂಧಾನದ ಮೂಲಕ ಇತ್ಯರ್ಥ್ಯ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಿ. ರಮಾ ಅವರು ತಿಳಿಸಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಮನಗರ ಜಿಲ್ಲೆಯಾದ್ಯಂತ ಇರುವ 18 ಬೆಂಚ್ ಗಳಲ್ಲಿ ಕಳೆದ ಶನಿವಾರ (ಸೆ. 19) ನಡೆದ ಮೆಗಾ ಇ-ಲೋಕ ಅದಾಲತ್ ನಲ್ಲಿ ವಿವಿಧ ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸತ್ರ ನ್ಯಾಯಾಧೀಶರು ಮಾಹಿತಿ ನೀಡಿದರು.
ಕೋವಿಡ್ -19 ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ದೇಶದಲ್ಲಿಯೇ ಪ್ರಥಮ ಬಾರಿಗೆ ಆನ್ ಲೈನ್ ಮೂಲಕ ಸಣ್ಣ ಪುಟ್ಟ ಪ್ರಕರಣಗಳನ್ನು ಇತ್ಯರ್ಥ್ಯ ಪಡಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು ಎಂದು ರಮಾ ಅವರು ವಿವರಿಸಿದರು.
*ಕ್ರಿಮಿನಲ್ ಪ್ರಕರಣಗಳೇ ಹೆಚ್ಚು:* ಮೆಗಾ ಇ-ಲೋಕ ಅದಾಲತ್ ನಲ್ಲಿ ಇತ್ಯರ್ಥಗೊಳಿಸಿದ 1,290 ಪ್ರಕರಣಗಳ ಪೈಕಿ 982 ಪ್ರಕರಣಗಳು ಕ್ರಿಮಿನಲ್ ಪ್ರಕರಣಗಳಾಗಿವೆ. 140 ಕ್ರಿಮಿನಲ್ ಕಾಂಪೌಡಬಲ್ ಪ್ರಕರಣಗಳಾಗಿದ್ದರೆ, 70 ಸಿವಿಲ್, 46 ವ್ಯಾಜ್ಯ ಪೂರ್ವ, 44 ಅಪಘಾತ ಪರಿಹಾರ, ನೆಗೋಷಿಯಬಲ್ ಆಕ್ಟ್ ನ 30 ಪ್ರಕರಣಗಳು, 6 ಬ್ಯಾಂಕ್ ನ ಹಣ ವಸೂಲಾತಿ ಪ್ರಕರಣ, 2 ಕೈಗಾರಿಕಾ ವಿವಾದದ ಪ್ರಕರಣಗಳು ಸೇರಿದಂತೆ ಇನ್ನಿತರ ಪ್ರಕರಣಗಳನ್ನು ಇತ್ಯರ್ಥ್ಯ ಪಡಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 39,686 ಪ್ರಕರಣಗಳು ಬಾಕಿ ಇದ್ದು, ಇವುಗಳ ಪೈಕಿ 4,384 ಪ್ರಕರಣಗಳು ಹಾಗೂ ಇ-ಲೋಕ ಅದಾಲತ್ ಗಾಗಿ ನೊಂದಣಿ ಮಾಡಿಸಿಕೊಂಡಿದ್ದ ಪ್ರಕರಣಗಳನ್ನು ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ವಿಚಾರಣೆ ಕೈಗೆತ್ತಿಕೊಳ್ಳಲಾಗಿತ್ತು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ತಿಳಿಸಿದರು.
ರಾಮನಗರ ಜಿಲ್ಲಾ ಹಾಗೂ ಎಲ್ಲಾ 18 ಅಧೀನ ನ್ಯಾಯಾಲಯಗಳಲ್ಲಿ ಆನ್ ಲೈನ್ ಮೂಲಕವೇ ಈ ಕಲಾಪವು ನಡೆದಿದ್ದು ವಿಶೇಷವಾಗಿತ್ತು. ನ್ಯಾಯಾಲಯದ ಕಲಾಪಗಳಲ್ಲಿ ವಕೀಲರು ಖುದ್ದಾಗಿ ಭಾಗವಹಿಸಿದ್ದರೆ, ಇನ್ನು ಕೆಲವರು ಆನ್ ಲೈನ್ ಮೂಲಕ ಭಾಗವಹಿಸಿದ್ದರು. ಅವಶ್ಯಕತೆ ಇದ್ದಂತಹ ಪ್ರಕರಣಗಳಲ್ಲಿ ಕಕ್ಷಿದಾರರನ್ನು ಆನ್ ಲೈನ್ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥ್ಯ ಪಡಿಸಲಾಯಿತು ಎಂದು ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು