Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣದ ಆಟಿಕೆ ಗೊಂಬೆಗಳಿಗೆ ಸಿಕ್ಕ ಮನ್ನಣೆ: ವಿಶೇಷ ಅಂಚೆ ಚೀಟಿ ಬಿಡುಗಡೆಗೆ ಕ್ಷಣಗಣನೆ

Posted date: 01 Oct, 2020

Powered by:     Yellow and Red

ಚನ್ನಪಟ್ಟಣದ ಆಟಿಕೆ ಗೊಂಬೆಗಳಿಗೆ ಸಿಕ್ಕ ಮನ್ನಣೆ: ವಿಶೇಷ ಅಂಚೆ ಚೀಟಿ ಬಿಡುಗಡೆಗೆ ಕ್ಷಣಗಣನೆ

ಬೆಂಗಳೂರು/ಚನ್ನಪಟ್ಟಣ:ಅ/01/20/ಗುರುವಾರ. ನಮ್ಮ ಚನ್ನಪಟ್ಟಣದ ಸಾಂಪ್ರದಾಯಿಕ ಆಟಿಕೆಗಳು ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೇರಿಕಾದ ವೈಟ್ ಹೌಸ್ ಹಾಗೂ ವಿಶ್ವದಾದ್ಯಂತ ಹೆಸರುವಾಸಿಯಾಗಿವೆ.

ಇತ್ತೀಚೆಗೆ ಪ್ರಧಾನಮಂತ್ರಿ ಮೋದಿ ಯವರು ಸಹ ಇತ್ತೀಚೆಗೆ ತಮ್ಮ ಮನಸ್ಸಿನ ಮಾತು (ಮನ್ ಕೀ ಬಾತ್) ನಲ್ಲಿ ಚನ್ನಪಟ್ಟಣದ ಗೊಂಬೆಗಳ ವಿಷಯವನ್ನು ಪ್ರಸ್ತಾಪಿಸಿದರು.

ಇದನ್ನು ಗಮನದಲ್ಲಿರಿಸಿಕೊಂಡ ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ.


ಭಾರತವನ್ನು ಜಾಗತಿಕ ಆಟಿಕೆ ಕೇಂದ್ರವನ್ನಾಗಿ ಮಾಡುವಂತೆ ಉದ್ಯಮಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದಂತೆಯೇ ಇದಕ್ಕೆ ಅನುಗುಣವಾಗಿ ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾ ಚನ್ನಪಟ್ಟಣ ಸೇರಿದಂತೆ 12 ರಾಜ್ಯಗಳ ಟ್ರೇಡ್‌ಮಾರ್ಕ್ ಆಟಿಕೆಗಳನ್ನು ಒಳಗೊಂಡ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲು ಸಿದ್ಧತೆಗಳನ್ನು ನಡೆಸಿದೆ.


ಅಕ್ಟೋಬರ್ 01 ರಂದು ನಡೆಯಲಿರುವ 151 ನೇ ವಿಶ್ವ ಅಂಚೆಕಾರ್ಡ್ ದಿನಾಚರಣೆ ಅಂಗವಾಗಿ ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾದ ಕೋರಿಕೆಯ ಮೇರೆಗೆ ಟಾಯ್ಸ್ ಆಫ್ ಇಂಡಿಯಾ ವಿಷಯದ ಮೇಲೆ 11 ರಾಜ್ಯಗಳ ಬಾರತೀಯ ಸಂಪ್ರಾದಾಯಿಕ ಗೊಂಬೆಗಳ ವಿಶೇಷ ಅಂಚೆ ಲಕೋಟೆ ಬೆಂಗಳೂರಿನ ಜನರಲ್ ಅಂಚೆ ಕಚೇರಿ (ಜಿಪಿಒ)ಯ ಮೇಘದೂತ ಸಭಾಂಗಣ ಹಾಗೂ ವಿವಿಧ ಅಂಚೆ ವಲಯಗಳಲ್ಲಿ ಬಿಡುಗಡೊಗೊಳ್ಳಲಿದೆ.


ಕರ್ನಾಟಕದ ಚನ್ನಪಟ್ಟಣ ಗೊಂಬೆಯ ವಿಶೇಷ ಅಂಚೆ ಲಕೋಟೆಯನ್ನು ಕರ್ನಾಟಕ ವಲಯದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್ ಅ.1ರಂದು ಬಿಡುಗಡೆಗೊಳಿಸಲಿದ್ದಾರೆ. ಹಿರಿಯ ಫಿಳಾಟೆಲಿಸ್ಟ್ ಜಗನ್ನಾಮಣಿ, ಎಆರ್'ಪಿಎಸ್‌ಎಲ್'ನ ರಾಮು ಶ್ರೀನಿವಾಸನ್, ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾದ ಸದಸ್ಯ ಅಖಿಲೇಶ್ ಕುಮಾರ್ ಮತ್ತಿರರರು ಪಾಲ್ಗೊಳ್ಳಲಿದ್ದಾರೆ. ಅಂತೆಯೇ ಆಯಾ ರಾಜ್ಯಗಳಲ್ಲಿ ಅಲ್ಲಿನ ಮುಖ್ಯ ಪೋಸ್ಟ್ ಮಾಸ್ಟರ್ ಜನರ್'ಗಳು ಅಂಚೆ ಲಕೋಟೆಗಳನ್ನು ಬಿಡುಗಡೆ ಮಾಡಲಿದ್ದಾರೆ.


"ನಾವು ಎಂದಿನಂತೆ ಪೋಸ್ಟ್‌ಕಾರ್ಡ್‌ಗಳೊಂದಿಗೆ ದೇಶದ ಪ್ರಸಿದ್ಧ ತಾಣಗಳು ಸೇರಿದಂತೆ ವಿವಿಧ ವಲಯಗಳನ್ನು ಉತ್ತೇಜಿಸುವ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತೇವೆ. ಅದರಂತೆ ಪಕ್ಷಿಗಳು, ನೃತ್ಯಗಳು, ಪ್ರವಾಸಿ ತಾಣಗಳು ಮತ್ತು ಮುಂತಾದವುಗಳನ್ನು ಪ್ರದರ್ಶಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಉತ್ತೇಜನ ನೀಡಿರುತ್ತಿದ್ದೇವೆ. ಈ ಬಾರಿ ಪ್ರಧಾನಮಂತ್ರಿಯವರ ಮಾತುಗಳ ಬಳಿಕ ದೇಶದಲ್ಲಿ ತಯಾರಿಸಿದ ಆಟಿಕೆಗಳನ್ನು ಉತ್ತೇಜಿಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ಆಟಿಕೆಗಳನ್ನು ಅಂಚೆ ಲಕೋಟೆಗೆ ಸೇರ್ಪಡೆಗೊಳಿಸಲಾಗಿದೆ ಎಂದು ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾದ ಸದಸ್ಯ ಅಖಿಲೇಶ್ ಕುಮಾರ್ ಅವರು ಹೇಳಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑