Tel: 7676775624 | Mail: info@yellowandred.in

Language: EN KAN

    Follow us :


ಹುಟ್ಟಿದ ಮರುಕ್ಷಣವೇ ಹಸುಗೂಸನ್ನು ಬೀದಿಗೆಸೆದ \"ಮಹಾ\"ತಾಯಿ

Posted date: 22 Oct, 2020

Powered by:     Yellow and Red

ಹುಟ್ಟಿದ ಮರುಕ್ಷಣವೇ ಹಸುಗೂಸನ್ನು ಬೀದಿಗೆಸೆದ \

ಚನ್ನಪಟ್ಟಣ:ಅ/22/20/ಗುರುವಾರ. ಆಗತಾನೇ ಜನಿಸಿರುವ ನವಜಾತ ಗಂಡು ಶಿಶುವೊಂದನ್ನು ಪಾಪಿ ತಾಯಿಯೊಬ್ಬಳು (ಅಥವಾ ಸಂಬಂಧಿಸಿದ ಇತರರು ಇರಬಹುದು) ನಗರದ ಹೌಸಿಂಗ್ ಬೋರ್ಡ್ ಬಡಾವಣೆಯ ಖಾಲಿ ನಿವೇಶನವೊಂದರಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಬಿಸಾಡಿ ಹೋಗಿರುವ ಹೃದಯ ವಿದ್ರಾವಕ ಘಟನೆ ನಿನ್ನೆ ರಾತ್ರಿ 09:00 ಗಂಟೆಯ ಸಮಯದಲ್ಲಿ ನಡೆದಿದೆ.


ಕರುಳಬಳ್ಳಿಯನ್ನು ಕತ್ತರಿಸದ ಗಂಡು ಶಿಶುವು ಮಳೆಯಲ್ಲಿ ನೆನೆಯುತ್ತಾ, ಆಳುತ್ತಿದ್ದ ಮಗುವಿನ ಶಬ್ಧ ಕೇಳಿದ ಸ್ಥಳೀಯ ನಿವಾಸಿ ವಕೀಲ ನಾರಾಯಣಸ್ವಾಮಿ ಎಂಬುವವರು, ಈ ವಿಚಾರವನ್ನು ಗ್ರಾಮಾಂತರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಿವಕುಮಾರ್ ರವರಿಗೆ ಮುಟ್ಟಿಸಿದ್ದಾರೆ. ಶಿವಕುಮಾರ್ ರವರು ಮೊದಲು ಮಗುವನ್ನು ರಕ್ಷಿಸಿ ಎಂದು ಧೈರ್ಯ ನೀಡಿದ ನಂತರ ನಾರಾಯಣ ಸ್ವಾಮಿ ಯವರು ಮಗುವನ್ನು ಪೊದೆಯಿಂದ ಎತ್ತಿಕೊಂಡು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದಾರೆ.


ಕೂಡಲೇ ಸ್ಥಳಕ್ಕಾಗಮಿಸಿದ ಪಿಎಸ್ ಐ ಶಿವಕುಮಾರ್, ಸ್ಥಳೀಯರ ನೆರವಿನಿಂದ ಮಗುವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ, ಸಾರ್ವಜನಿಕ ಆಸ್ಪತ್ರೆಯ ಅಧೀಕ್ಷಕ ಡಾ ವಿಜಯನರಸಿಂಹ ಮತ್ತು ತಂಡದವರು ಚಿಕಿತ್ಸೆ ನೀಡಿದ್ದು, ವೈದ್ಯರ ಕರ್ತವ್ಯ ಪ್ರಜ್ಞೆಯಿಂದ ಮುದ್ದಾದ ಮಗು ಬದುಕುಳಿದಿದೆ.


ಹೆತ್ತಕೂಸನ್ನು ಕರುಳಬಳ್ಳಿಯ ಸಮೇತ ಬಿಸಾಕಿ ಹೋಗಿದ್ದ ಪಾಪಿಗಳಿಗೆ ಸಾರ್ವಜನಿಕರು ಹಿಡಿಶಾಪ ಹಾಕಿದ್ದು, ತಕ್ಷಣ ಸ್ಪಂದಿಸಿದ ವಕೀಲರು, ಪೋಲಿಸರು ಮತ್ತು ವೈದ್ಯರಿಗೆ ಶಹಬ್ಬಾಸ್ ನೀಡಿದ್ದಾರೆ. ಇದೇ ವೇಳೆ ಸ್ಥಳೀಯ ಸಿ ಸಿ ಟಿವಿಗಳನ್ನು ಸುಪರ್ದಿಗೆ ಪಡೆದು ವೀಕ್ಷಿಸಿ ಗುರುತು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪ್ರಜ್ಞಾವಂತರು ಪೋಲೀಸರನ್ನು ಆಗ್ರಹಪಡಿಸಿದ್ದಾರೆ.


ಈ ಸಂಬಂಧ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 317 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ಕೈಗೊಂಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑