Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ನಡುವೆಯೂ ಕೆಂಗಲ್ ದೇವಾಲಯದ ಹುಂಡಿಯಲ್ಲಿ 9,90,632 ರೂಪಾಯಿ ಸಂಗ್ರಹ

Posted date: 03 Nov, 2020

Powered by:     Yellow and Red

ಕೊರೊನಾ ನಡುವೆಯೂ ಕೆಂಗಲ್ ದೇವಾಲಯದ ಹುಂಡಿಯಲ್ಲಿ 9,90,632 ರೂಪಾಯಿ ಸಂಗ್ರಹ

ಚನ್ನಪಟ್ಟಣ:ನ/03/20/ಮಂಗಳವಾರ. ತಾಲೂಕಿನ ಹಿರಿಮೆಯ ಗರಿ, ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಹುಂಡಿಯನ್ನು ದಂಡಾಧಿಕಾರಿ ನಾಗೇಶ್ ರವರ ನೇತೃತ್ವದಲ್ಲಿ ಇಂದು ತೆರೆಯಲಾಯಿತು.

ದೇವಾಲಯದ ಕಾಣಿಕೆ ಹುಂಡಿಗಳು ಮತ್ತು ದಾಸೋಹದ ಹುಂಡಿ ಸೇರಿದಂತೆ ಮಾರ್ಚಿ ತಿಂಗಳಿನಿಂದೀಚೆಗೆ ಕೊರೊನಾ ನಡುವೆಯೂ ಭಕ್ತರು 9,90,632 ರೂಪಾಯಿಗಳ ಹಣವನ್ನು ಹುಂಡಿಗೆ ಹಾಕುವ ಮೂಲಕ ತಮ್ಮ ಹರಕೆಯನ್ನು ತೀರಿಸಿ ಕೃತಾರ್ಥರಾಗಿದ್ದಾರೆ.


ಇದೇ ಸಾಲಿನ ಮಾರ್ಚ್ ತಿಂಗಳಿನಲ್ಲಿ ಹುಂಡಿ ತೆರೆದಿದ್ದು, 24 ಲಕ್ಷ ಹಣ ಸಂಗ್ರಹವಾಗಿತ್ತು. ಕಳೆದ ಏಳು ತಿಂಗಳಲ್ಲಿ, ಕೊರೊನಾ ನಡುವೆಯೂ ಹತ್ತಿರತ್ತಿರ ಹತ್ತು ಲಕ್ಷ ಹಣ ಹಣ ಸಂಗ್ರಹವಾಗಿರುವುದು ಜನರು ದೇವರ ಮೇಲಿಟ್ಟಿರುವ ನಂಬಿಕೆಯಾಗಿದೆ ಎಂದು ಅರ್ಚಕರು ಅಭಿಪ್ರಾಯಪಡುತ್ತಾರೆ.


ತಹಶಿಲ್ದಾರ್ ನಾಗೇಶ್ ರವರ ನೇತೃತ್ವದಲ್ಲಿ, ವೀಡಿಯೋ ಚಿತ್ರೀಕರಿಸಿ ಹುಂಡಿ ತೆರೆದು ಹಣ ಎಣಿಕೆ ಮಾಡಲಾಯಿತು. ಆರು ತಾಸಿಗೂ ಹೆಚ್ಚು ಸಮಯ ಹಣ ಎಣಿಕೆ ಮಾಡಿ ದೇವಾಲಯದ ಹೆಸರಿನ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಯಿತು ಎಂದು ಅವರು ತಿಳಿಸಿದರು.


ಎಣಿಕೆಯ ನಡುವೆಯೇ ನಮ್ಮ ಪತ್ರಿಕೆಯ ವರದಿಗಾರರ ಜೊತೆ ಮಾತನಾಡಿದ ತಹಶಿಲ್ದಾರ್ ನಾಗೇಶ್ ರವರು, ಈ ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದಲೂ ಭಕ್ತಾಧಿಗಳು ಬರುತ್ತಾರೆ. ಮದುವೆಗಳು ನಡೆಯುತ್ತವೆ. ಕೆಲ ಭಕ್ತಾಧಿಗಳು ಬುಕ್ತಿ ಮಾಡುತ್ತಾರೆ. ಹೆಚ್ಚಾಗಿ ಇದೊಂದು ಪುರಾಣ ಪ್ರಸಿದ್ಧ ದೇವಾಲಯವಾಗಿದೆ. ಆದರೆ ಶುದ್ದ ಕುಡಿಯುವ ನೀರಿನ ಘಟಕ ಇಲ್ಲದಿರಿವುದು ನನ್ನ ಗಮನಕ್ಕೆ ಬಂದಿದೆ. ಶುದ್ಧ ನೀರಿನ ಘಟಕ ನಿರ್ಮಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಇಂದೇ ಪತ್ರ ಬರೆಯುತ್ತೇನೆ. ಶುಕ್ರವಾರ ಭೇಟಿ ಮಾಡಿ ಚರ್ಚಿಸಿ ಘಟಕ ನಿರ್ಮಿಸಲು ಕ್ರಮ ಕೈಗೊಳ್ಳುತ್ತೇನೆ ಎಂದರು.


ಹುಂಡಿ ಎಣಿಕೆ ಸಮಯದಲ್ಲಿ ಮುಜರಾಯಿ ಇಲಾಖೆಯ ತಹಶಿಲ್ದಾರ್ ದಯಾನಂದ, ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ರಾಜಸ್ವ ನಿರೀಕ್ಷಕ ಕಾಂತರಾಜು, ಕಸಬಾ ಹೋಬಳಿಯ ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮಸಹಾಯಕರು, ದೇವಾಲಯದ ಸಿಬ್ಬಂದಿಗಳು ಭಾಗಿಯಾಗಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑