Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣದಲ್ಲಿ ಅಂತರರಾಜ್ಯ ಕಾರು ಕಳ್ಳರ ಪತ್ತೆ, ಬಂಧನ

Posted date: 11 Nov, 2020

Powered by:     Yellow and Red

ಚನ್ನಪಟ್ಟಣದಲ್ಲಿ ಅಂತರರಾಜ್ಯ ಕಾರು ಕಳ್ಳರ ಪತ್ತೆ, ಬಂಧನ

ಚನ್ನಪಟ್ಟಣ:ನ/10/20/ಮಂಗಳವಾರ.


ದೆಹಲಿಯ ಕಿಶಾನ್ ಗರ್ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ದೆಹಲಿ ನೋಂದಣಿ ಇರುವ ಮಾರುತಿ ಸುಜುಕಿ ಯವರ ಬ್ರೀಜಾ ಕಾರೊಂದು ಕಳ್ಳತನವಾಗಿದ್ದು, ಸದರಿ ಕಾರು ಚನ್ನಪಟ್ಟಣದ ದೊಡ್ಡಮಳೂರು ಗ್ರಾಮದಲ್ಲಿರುವ ಕಲ್ಯಾಣಿ ಮೋಟಾರ್ ಷೋರೂಂ ನಲ್ಲಿ ಸರ್ವೀಸ್ ಗೆ ಬಂದಾಗ ದೆಹಲಿ ಪೋಲೀಸರು ಪತ್ತೆಹಚ್ಚಿ ಚನ್ನಪಟ್ಟಣ ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ದೆಹಲಿ ಪೋಲೀಸರ ಮಾಹಿತಿ ಮೇರೆಗೆ ಗ್ರಾಮಾಂತರ ಪೋಲೀಸರು ಕಾರನ್ನು ತಮ್ಮ ವಶಕ್ಕೆ ಪಡೆದಿದ್ದು, ಮಳವಳ್ಳಿ ಮೂಲದ ಜೋಧರಾಮ್ ಬಿನ್ ಮಂಜರಾಮ್ ಹಾಗೂ ಚನ್ನಪಟ್ಟಣ ನಗರದ ಮಥೀನ್ ಖಾನ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ.


ದೆಹಲಿಯ ಕಿಶಾನ್ ನಗರದ ಪೋಲಿಸ್ ಠಾಣೆಯಲ್ಲಿ ಡಿ ಎಲ್ 12 ಸಿ ಎನ್ 6441 ವಿತರಾ ಬ್ರೀಜಾ ಕಾರು ಕಳುವಾಗಿರುವ ಬಗ್ಗೆ ಮೊಕದ್ದಮೆ ಸಂಖ್ಯೆ 19546/2020 ರಲ್ಲಿ ಪ್ರಕರಣ ದಾಖಲಾಗಿದ್ದು, ಚನ್ನಪಟ್ಟಣದಲ್ಲಿ ಸಿಕ್ಕಿರುವ ಕಾರಿನ ನೋಂದಣಿ ಸಂಖ್ಯೆಯನ್ನು ಯುಪಿ 31 ಬಿಎಫ್ 0051 ಎಂಬ ನಕಲಿ ನೋಂದಣಿ ನಂಬರ್ ಪ್ಲೇಟ್ ಬದಲಿಸಿ ಚಲಾಯಿಸುತ್ತಿದ್ದರೆಂದು ಹಾಗೂ ಚಾರ್ಸಿ ಮತ್ತು ಇಂಜಿನ್ ನಂಬರ್ ದೆಹಲಿ ನೋಂದಣಿ ಯ ಕಾರಿಗೆ ಹೊಂದಾಣಿಕೆಯಾಗಿದೆ ಎಂದು ಪ್ರಥಮ ತನಿಖಾ ವರದಿಯಲ್ಲಿ ಗ್ರಾಮಾಂತರ ಪೋಲೀಸರು ಉಲ್ಲೇಖಿಸಿದ್ದಾರೆ.


ದೆಹಲಿಯಲ್ಲಿ ಇತ್ತೀಚೆಗೆ ಹತ್ತು ಕಾರುಗಳು ಕಳ್ಳತನವಾಗಿದ್ದು, ಕರ್ನಾಟಕದಲ್ಲಿಯೇ ಹೆಚ್ಚು ಕಾರುಗಳು ಇರಬಹುದೆಂದು ನಂಬಲರ್ಹ ಮೂಲಗಳ ಮಾಹಿತಿಯಾಗಿದ್ದು, ದೆಹಲಿ ಪೋಲೀಸರ ನೆರವು ಮತ್ತು ಬಂಧಿಸಿರುವ ಕಳ್ಳರ ತೀವ್ರ ವಿಚಾರಣೆಯ ನಂತರ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ದೆಹಲಿ ಪೋಲೀಸರ ಆಗಮನದ ನಂತರ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಬಹುದೆಂದು ಮೂಲಗಳು ತಿಳಿಸಿವೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑