Tel: 7676775624 | Mail: info@yellowandred.in

Language: EN KAN

    Follow us :


ವೃತ್ತ ನಿರೀಕ್ಷಕ, ಸಂಚಾರಿ ನಿರೀಕ್ಷಕ ಸೇರಿ ನಾಲ್ಕು ಮಂದಿ ಪೋಲೀಸರನ್ನು ಅಮಾನತುಗೊಳಿಸಿದ ಎಸ್ಪಿ ಗಿರೀಶ್

Posted date: 12 Nov, 2020

Powered by:     Yellow and Red

ವೃತ್ತ ನಿರೀಕ್ಷಕ, ಸಂಚಾರಿ ನಿರೀಕ್ಷಕ ಸೇರಿ ನಾಲ್ಕು ಮಂದಿ ಪೋಲೀಸರನ್ನು ಅಮಾನತುಗೊಳಿಸಿದ ಎಸ್ಪಿ ಗಿರೀಶ್

ಆರು ತಿಂಗಳ ಹಿಂದೆ ನಡೆದ ಅಪಘಾತ ಪ್ರಕರಣವೊಂದರಲ್ಲಿ ಕರ್ತವ್ಯಲೋಪವೆಸಗಿದ ಆರೋಪದಡಿ ನಗರದ ಸಿಪಿಐ, ಪಿಎಸ್‍ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತ್ತುಪಡಿಸಿರುವ ಘಟನೆ ನಡೆದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅಮಾನತ್ತಿಗೆ ಒಳಗಾದವರು ನಗರ ವೃತ್ತ ನಿರೀಕ್ಷಕ ಗೋವಿಂದರಾಜು, ಸಂಚಾರಿ ಪೊಲೀಸ್ ಠಾಣೆಯ ಪಿಎಸ್‍ಐ ಕುಮಾರಸ್ವಾಮಿ, ಠಾಣೆಯ ಪೇದೆಗಳಾದ ನಂದೀಶ್, ಶಿವರುದ್ರಪ್ಪ ಎಂದು ಹೇಳಲಾಗಿದೆ.


ಆರು ತಿಂಗಳ ಹಿಂದೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ  ವಾಹನ ಅಪಘಾತ ಪ್ರಕರಣದಲ್ಲಿ ಅಪಘಾತ ಮಾಡಿದ ವಾಹನಗಳ ಬದಲಾಗಿ ದೂರುದಾರರ ಆಮಿಷಕ್ಕೊಳಗಾಗಿ ಬೇರೆ ವಾಹನಗಳನ್ನು ಅಪಘಾತಕ್ಕೆ ಸೇರಿಸಿದ ಹಿನ್ನೆಲೆಯಲ್ಲಿ ಈ ಪೊಲೀಸರ ತಲೆದಂಡ ಎಂದು ತಿಳಿದು ಬಂದಿದೆ.

ವಂದಾರಗುಪ್ಪೆಯ ವ್ಯಕ್ತಿಯೋರ್ವರು ಸಂಚಾರಿ ಪೊಲೀಸ್ ಠಾಣೆಯಲ್ಲಿ ನಡೆಯುವ ಹಲವಾರು ರೀತಿಯ ಭ್ರಷ್ಟಚಾರಗಳ ಬಗ್ಗೆ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ಸಲ್ಲಿಸುವುದರ ಜೊತೆಯಲ್ಲಿ ಗೃಹ ಇಲಾಖೆಗೂ ದೂರು ನೀಡಿದ್ದರು ಎಂದು ಹೇಳಲಾಗಿದೆ.


ಸಂಚಾರಿ ಪೊಲೀಸ್ ಠಾಣೆಯ ಶಿಸ್ತು ಆಯೋಮಯವಾಗಿದ್ದು, ಹೇಳುವವರು, ಕೇಳುವವರು ಯಾರು ಇಲ್ಲದಂತಾಗಿದ್ದೆ ಇಂತಹ ಅಮಾನತ್ತು ಘಟನೆಗೆ  ಸಾಕ್ಷಿಯಾಗಿದೆ  ಎಂದು ಹೆಸರೇಳಲಿಚ್ಛಿಸದ ಪೊಲೀಸರ ಮಾತಾಗಿದೆ.

ಘಟನೆ  ನಡೆದು ಆರು ತಿಂಗಳು ಕಳೆದರೂ ಮೇಲ್ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಯುತ್ತಿತ್ತು. ಕೆಲ ದಿನಗಳ ಹಿಂದೆ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಂದೀಶ್, ಶಿವರುದ್ರಯ್ಯರವರನ್ನು ವರ್ಗಾವಣೆ ಮಾಡಲಾಗಿತ್ತಾದರೂ ಅಮಾನತ್ತು ಆದೇಶ ಬಂದಿರಲಿಲ್ಲ.

ಆದರೆ ಮಂಗಳವಾರ ರಾತ್ರಿ ಪೊಲೀಸ್ ಇಲಾಖೆಯ ಅಮಾನತ್ತು ಆದೇಶದಲ್ಲಿ ವೃತ್ತ ನಿರೀಕ್ಷಕ ಗೋವಿಂದರಾಜು, ನಗರ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‍ಐ ಕುಮಾರಸ್ವಾಮಿ ಹಾಗೂ ಇಬ್ಬರು ಪೇದೆ ಸೇರಿದ್ದಾರೆ ಎಂದು ತಿಳಿದುಬಂದಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑