Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್-19 ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ವಸತಿ ಸಚಿವ ವಿ. ಸೋಮಣ್ಣ ಅವರಿಂದ ಚಾಲನೆ

Posted date: 21 Nov, 2020

Powered by:     Yellow and Red

ಕೋವಿಡ್-19 ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ವಸತಿ ಸಚಿವ ವಿ. ಸೋಮಣ್ಣ ಅವರಿಂದ ಚಾಲನೆ

ರಾಮನಗರ:ನ/21/20/ಶನಿವಾರ. : ಕೋವಿಡ್-19 ವೈರಸ್ ಸೋಂಕು ಹರಡುವಿಕೆ ತಡೆಗಟ್ಟಲು ಕೈಗೊಳ್ಳಬೇಕಾದ  ಮುಂಜಾಗೃತಾ ಸುರಕ್ಷತಾ ಕ್ರಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಶ್ರವ್ಯ ಮತ್ತು ದೃಶ್ಯ ಮಾಧ್ಯಮದ ಮೂಲಕ ಬೃಹತ್ ಎಲ್.ಇ.ಡಿ. ಪರದೆ ಹೊಂದಿರುವ ಮೊಬೈಲ್ ವಾಹನದ ಮೂಲಕ ನೀಡುವ ಪ್ರಚಾರ ಕಾರ್ಯಕ್ರಮಕ್ಕೆ ಬಿಡದಿ ಹೋಬಳಿಯ ತಾಳಗುಪ್ಪದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರು ಇಂದು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. 


ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು, ಎಲ್.ಇ.ಡಿ ಪರದೆ ಹೊಂದಿರುವ ವಾಹನಗಳ ಮೂಲಕ ಕೋವಿಡ್-19 ತಡೆಗಟ್ಟಲು ಗ್ರಾಮೀಣ ಭಾಗದ ಜನರು ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳನ್ನು ಕುರಿತು ಅರಿವು ಮೂಡಿಸುವ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಸತಿ ಸಚಿವರು ತಿಳಿಸಿದರು.


*ಎಚ್ಚರವಿರಲಿ:* ಕೋವಿಡ್ ಕುರಿತು ಜನರು ಹೆಚ್ಚು ಜಾಗೃತಿ ವಹಿಸಬೇಕು. ಚಳಿಗಾಲದ ಸಂದರ್ಭದಲ್ಲಿ ಕೋವಿಡ್ ವೈರಾಣು ಹೆಚ್ಚು ಅಪಾಯಕಾರಿಯಾಗಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೈಹಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಕಾಲಕಾಲಕ್ಕೆ ಕೈತೊಳೆದುಕೊಳ್ಳಬೇಕು ಎಂದು ಸೋಮಣ್ಣ ಅವರು ತಿಳಿಸಿದರು.


*ಹತ್ತು ದಿನಗಳ ಪ್ರಚಾರ:* ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಎಲ್.ಇ.ಡಿ  ವಾಹನಗಳ ಮೂಲಕ ಕೋವಿಡ್-19 ಕುರಿತ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಒಂದು ತಿಂಗಳುಗಳ ಕಾಲ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಹಮ್ಮಿಕೊಂಡಿದೆ. ಇದರ ಭಾಗವಾಗಿ ರಾಮನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ 127 ಗ್ರಾಮ ಪಂಚಾಯತಿ ವ್ಯಾಪ್ತಿಯ 180 ಗ್ರಾಮಗಳನ್ನು ಅರಿವಿನ ಪ್ರಚಾರಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.


ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ತಲಾ 45 ಗ್ರಾಮಗಳಂತೆ, ಪ್ರತಿ ಗ್ರಾಮ ಪಂಚಾಯತಿಯಲ್ಲಿ 2 ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಪ್ರತಿ ಗ್ರಾಮ ಪಂಚಾಯತಿಗಳ ತಲಾ ಎರಡು ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು, ಪ್ರತಿದಿನ 10 ಗ್ರಾಮಗಳಲ್ಲಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಲಾಗುವುದು. 18 ದಿನಗಳ ಜಾಗೃತಿ ಕಾರ್ಯಕ್ರಮ ಇದಾಗಿದ್ದು, ಜಿಲ್ಲೆಯಲ್ಲಿ 2 ಎಲ್.ಇ.ಡಿ ವಾಹನಗಳ ಸಂಚರಿಸಲಿದ್ದು, ಪ್ರತಿದಿನ ತಲಾ 5 ಗ್ರಾಮಗಳಂತೆ ಎರಡು ವಾಹನಗಳಿಂದ 10 ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ನ್ಯಾಯಾಧೀಶರಿಂದ ಮಾಸ್ಕ್ ವಿತರಣೆ
ನ್ಯಾಯಾಧೀಶರಿಂದ ಮಾಸ್ಕ್ ವಿತರಣೆ

ರಾಮನಗರ:ಡಿ/03/20/ಗುರುವಾರ: ಮಾಸ್ಕ್ ಧರಿಸುವುದರಿಂದ  ಕೋವಿಡ್-19 ನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ. ರಮಾ ಅವರು ತಿಳಿಸಿದ

\'ಸಕಾಲ\' ದಲ್ಲಿ ದೊರೆಯುವ ಸೌಲಭ್ಯಗಳನ್ನು ರೈತರು ಮತ್ತು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಿ ತಹಶಿಲ್ದಾರ್ ನಾಗೇಶ್
\'ಸಕಾಲ\' ದಲ್ಲಿ ದೊರೆಯುವ ಸೌಲಭ್ಯಗಳನ್ನು ರೈತರು ಮತ್ತು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಿ ತಹಶಿಲ್ದಾರ್ ನಾಗೇಶ್

ಚನ್ನಪಟ್ಟಣ:ಡಿ/02/20/ಬುಧವಾರ. ರಾಜ್ಯ ಸರ್ಕಾರದ ವತಿಯಿಂದ \'ಸಕಾಲ ಸಪ್ತಾಹ\' ಸೇವೆಗಳು ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಸಾರಿಗೆ ಇಲಾಖೆ, ಆಹಾರ, ನಾಗ

ಕೊರೊನಾ : ಇಂದು 4 ಪ್ರಕರಣ ದೃಢ
ಕೊರೊನಾ : ಇಂದು 4 ಪ್ರಕರಣ ದೃಢ

ರಾಮನಗರ, ಡಿ 1  (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಚನ್ನಪಟ್ಟಣ 3 ಹಾಗೂ  ಕನಕಪುರ 1 ಪ್ರಕರಣಗಳು ಸೇರಿ ಇಂದು ಒಟ್ಟು  4 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನ

ಚನ್ನಪಟ್ಟಣ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಡಿಕೆ ಬ್ರದರ್ಸ್‌ಗೆ ಎಚ್ಚರಿಕೆ ಕೊಟ್ಟ ಡಾ.ಅಶ್ವತ್ಥನಾರಾಯಣ
ಚನ್ನಪಟ್ಟಣ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಡಿಕೆ ಬ್ರದರ್ಸ್‌ಗೆ ಎಚ್ಚರಿಕೆ ಕೊಟ್ಟ ಡಾ.ಅಶ್ವತ್ಥನಾರಾಯಣ

ಚನ್ನಪಟ್ಟಣ:ಡಿ/01/20/ಮಂಗಳವಾರ. ಇಷ್ಟು ದಿನ ಅಭಿವೃದ್ಧಿ ಕೆಲಸಗಳು ಕೇವಲ ಕಾಗದದ ಮೇಲಿದ್ದವು. ಈಗ ಅನುಷ್ಠಾನ ಆಗಿ ಕಣ್ಣಿಗೆ ಕಾಣುತ್ತಿವೆ. ಇದಕ್ಕೆ ಕಾರಣ ದೇಶ

ಅರವಿಂದ್ ಫ್ಯಾಷನ್ ಲಿ, ಲಾಕ್ ಔಟ್. ಬೀದಿಗೆ ಬಂದ ಅರವತ್ತಾರು ಕುಟುಂಬ. ನ್ಯಾಯಕ್ಕಾಗಿ ಹೋರಾಡುತ್ತಿರುವ ಕಾರ್ಮಿಕರು
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ, ನಗರದ ರೌಡಿ ಶೀಟರ್ ಗಳ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಎಸ್ಐ ರವೀಂದ್ರ
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ, ನಗರದ ರೌಡಿ ಶೀಟರ್ ಗಳ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಎಸ್ಐ ರವೀಂದ್ರ

ಚನ್ನಪಟ್ಟಣ:ನ/29/20/ಭಾನುವಾರ. ಮುಂಬರುವ ಗ್ರಾಮ ಪಂಚಾಯತಿ ಚುನಾವಣೆ ಹಾಗೂ ಸಮಾಜದ ಸ್ವಾಸ್ಥ್ಯ ಕದಡಬಾರದು ಎಂಬ ಹಿನ್ನೆಲೆಯಲ್ಲಿ ನಗರದ ರೌಡಿ ಶೀಟರ

ಭೂಮಾಲೀಕರು ಸಾಂತ್ವನ ನಿವೇಶನವನ್ನು ಮಾರಾಟ ಮಾಡಬೇಡಿ : ವಿ ಸೋಮಣ್ಣ
ಭೂಮಾಲೀಕರು ಸಾಂತ್ವನ ನಿವೇಶನವನ್ನು ಮಾರಾಟ ಮಾಡಬೇಡಿ : ವಿ ಸೋಮಣ್ಣ

ರಾಮನಗರ:ನ/28/20/ಶನಿವಾರ. ಕರ್ನಾಟಕ ಗೃಹ ಮಂಡಳಿಯಿಂದ ರಾಯಸಂದ್ರ ವಸತಿ ಬಡಾವಣೆಗೆ ಭೂಮಿ ನೀಡಿರುವ ಭೂಮಾಲೀಕರಿಗೆ ನೀಡಲಾಗುವ ಸಾಂತ್ವನ ನಿವೇಶನವನ್

ಉಪಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ
ಉಪಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಚನ್ನಪಟ್ಟಣ:ನ/26/20/ಗುರುವಾರ. ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಸಿಎನ್ ಅಶ್ವಥ್ ನಾರಾಯಣ ಅವರು ಇಂದು ಮಾಗಡಿ ತಾಲ್ಲ

ಮಾಗಡಿ ತಾಲೂಕಿನಲ್ಲಿ ಡಿಸಿಎಂ ರೌಂಡ್ಸ್;‌ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಅಡಿಗಲ್ಲು
ಮಾಗಡಿ ತಾಲೂಕಿನಲ್ಲಿ ಡಿಸಿಎಂ ರೌಂಡ್ಸ್;‌ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಅಡಿಗಲ್ಲು

ರಾಮನಗರ:ನ/26/20/ಗುರುವಾರ. ರಾಮನಗರ: ಜಿಲ್ಲಾ ಉಸುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರದಂದು ಜಿಲ್ಲೆಯ ವಿವ

Top Stories »  


Top ↑