ಉಪಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ
ಚನ್ನಪಟ್ಟಣ:ನ/26/20/ಗುರುವಾರ. ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಸಿಎನ್ ಅಶ್ವಥ್ ನಾರಾಯಣ ಅವರು ಇಂದು ಮಾಗಡಿ ತಾಲ್ಲೂಕಿನಲ್ಲಿ ಗುರುವಾರ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಕೌಶಲ್ಯಭಿವ್ಯದ್ಧಿ ಇಲಾಖೆ ವತಿಯಿಂದ
ಮಾಗಡಿ ತಾಲ್ಲೂಕಿನ ಮಾಡಬಾಳ್ ಗ್ರಾಮ ಪಂಚಾಯತ್ನ ಮೇಲನಹಳ್ಳಿಯಲ್ಲಿ4.15 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಉಪಮುಖ್ಯಮಂತ್ರಿಗಳು
ನೆರವೇರಿಸಿದರು.
ಪಶುಪಾಲನಾ ಮತ್ತು ಪಾಶುವೈದ್ಯ ಸೇವಾ ಇಲಾಖೆ ವತಿಯಿಂದ 34 ಲಕ್ಷ ರೂ ವೆಚ್ಚದಲ್ಲಿ ಹುಲಿಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವ ಪಶು ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯಿಂದ 2.50 ಕೋಟಿ ರೂ ವೆಚ್ಚದಲ್ಲಿ ನಡೆಸಲಾಗುತ್ತಿರುವ ತಿಪ್ಪಸಂದ್ರ ಹೋಬಳಿಯ ಎನ್.ಎಚ್.-75 ಮುಖ್ಯ ರಸ್ತೆಯಿಂದ ಚಿಕ್ಕಕಲ್ಯಾ, ಸಂಕಿಘಟ್ಟ, ನಾರಾಯಣಪುರ, ಅಡಲಿಂಗಯ್ಯನಪಾಳ್ಯ, ಮುಳ್ಳಕಟ್ಟಮ್ಮನ ಪಾಳ್ಯ, ಸಣ್ಣೇನಹಳ್ಳಿ ಮಾರ್ಗವಾಗಿ ತಾವರೆಕೆರೆ ಸೇರುವ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 2 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ತಿಪ್ಪಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ, 2 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕುದೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 1.80 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡವನ್ನು ಉದ್ಘಾಟಿಸಿದರು.
ಜೇನುಕಲ್ಲುಪಾಳ್ಯದಲ್ಲಿ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಬಡಜನರಿಗೆ ಸ್ವಂತ ಸೂರು ಕಟ್ಟಿಕೊಳ್ಳಲು ಅನುಕೂಲವಾಗುವಂತೆ 94 ಸಿ ಹಕ್ಕು ಪತ್ರ ವಿತರಿಸಿದರು.
ಏಳಿಗೇಹಳ್ಳಿ ಕಾಲೋನಿಯಲ್ಲಿ 40 ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಿಸಿದರು.
ಮಾಗಡಿ ತಾಲ್ಲೂಕಿನಲ್ಲಿ 3.99 ಕೋಟಿ ರೂ ವೆಚ್ಚದಲ್ಲಿ ಹಮ್ಮಿಕೊಂಡಿರುವ ಚಕ್ರಬಾವಿ ಹಾಗೂ ಇತರೆ 12 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಯನ್ನು ಪರಿಶೀಲಿಸಿದರು.
ಬೃಹತ್ ನೀರಾವರಿ ಇಲಾಖೆ ವತಿಯಿಂದ ಸೋಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಶ್ರೀರಂಗ ಏತ ನೀರವಾರಿ ಕಾಮಗಾರಿಯನ್ನು ಪರಿಶೀಲಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎ.ಮಂಜುನಾಥ್, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು