Tel: 7676775624 | Mail: info@yellowandred.in

Language: EN KAN

    Follow us :


ಕನ್ನಡ ಮತ್ತು ಕನ್ನಡಿಗರನ್ನು ತುಚ್ಚವಾಗಿ ಕಾಣುವ ರಾಜಕಾರಣಿಗಳಿಗೆ ಬುದ್ದಿ ಕಲಿಸಬೇಕಾಗಿದೆ. ರಮೇಶ್ ಗೌಡ

Posted date: 06 Dec, 2020

Powered by:     Yellow and Red

ಕನ್ನಡ ಮತ್ತು ಕನ್ನಡಿಗರನ್ನು ತುಚ್ಚವಾಗಿ ಕಾಣುವ ರಾಜಕಾರಣಿಗಳಿಗೆ ಬುದ್ದಿ ಕಲಿಸಬೇಕಾಗಿದೆ. ರಮೇಶ್ ಗೌಡ

ಚನ್ನಪಟ್ಟಣ:ಡಿ/05/20/ಶನಿವಾರ.
ತನ್ನ ರಾಜಕೀಯ ಬೆಳೆ ಬೇಯಿಸಿಕೊಳ್ಳುವ ಸಲುವಾಗಿ, ಅಧಿಕಾರದ ಲಾಲಸೆಗಾಗಿ, ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ರಾಜ್ಯ ಮತ್ತು ರಾಷ್ಟ್ರಸ ಬಿಜೆಪಿ ನಾಯಕರುಗಳು ಮುಂದಿನ ದಿನದಲ್ಲಿ ತಕ್ಕ ಪಾಠ ಕಲಿಯಲಿದ್ದಾರೆ. ಕನ್ನಡಿಗರೇ ಕಲಿಸಲಿದ್ದಾರೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‍ಗೌಡ ಅಭಿಪ್ರಾಯಪಟ್ಟರು.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ನಗರದ ಅಂಚೆ ಕಚೇರಿ ರಸ್ತೆಯ ಕಾವೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ತನ್ನ ರಾಜಕೀಯ ಲಾಭಕ್ಕಾಗಿ ಅನ್ಯಭಾಷಿಕರನ್ನು ಓಲೈಸುವ ರಾಜಕಾರಣಕ್ಕೆ ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರು ಮುಂದಾಗಿದ್ದಾರೆ. ತಮ್ಮ ಓಲೈಕೆ ರಾಜಕಾರಣದ ಮುಂದುವರೆದ ಭಾಗವಾಗಿ ಕನ್ನಡ ಚಳುವಳಿಗಾರರನ್ನೆ ಅವಮಾನಿಸುವ ಮಟ್ಟಕ್ಕೆ ಇಳಿದಿದ್ದಾರೆ. ಈ ಎಲ್ಲದಕ್ಕೂ ತಕ್ಕ ಪ್ರಾಯಶ್ಚಿತ ಅನುಭವಿಸಲಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದರು.

ನಾಲ್ಕು ದಶಕಗಳಿಂದ ಕನ್ನಡ ನಾಡು ನುಡಿಗಾಗಿ ವಾಟಾಳ್ ನಾಗರಾಜ್‍ರವರು ಅಪಾರವಾದ ಸೇವೆ ಸಲ್ಲಿಸಿದ್ದಾರೆ. ಆದರೆ, ಮರಾಠ ಪ್ರಾಧಿಕಾರದ ವಿರುದ್ಧ ಧ್ವನಿ ಎತ್ತಿದರು ಎಂಬ ಕಾರಣಕ್ಕೆ ಅವರನ್ನು ವೈಯುಕ್ತಿಕವಗಿ ಟೀಕಿಸುವುದು ಬಿಜೆಪಿ ನಾಯಕರಿಗೆ ತರವಲ್ಲ. ಕನ್ನಡ ಚಳುವಳಿಗಾರರ ಬಗ್ಗೆ ಅವಹೇಳನದ ಮಾತನಾಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಕನ್ನಡಿಗರ ಕ್ಷಮೆಯಾಚಿಸಬೇಕು. ಹಲವು ಆಕ್ರಮಗಳ ಸರದಾರನಾಗಿರುವ ಕಾಳಿಮಠದ ಋಷಿಕುಮಾರನನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ತಮಿಳು ಪ್ರಾಧಿಕಾರವನ್ನು ಮಾಡಿದರೆ ತಪ್ಪೇನು ಎಂದಿರುವ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಹೇಳಿಕೆ ಆಶ್ಚರ್ಯ ಉಂಟುಮಾಡಿದೆ. ಬಿಜೆಪಿಗರ ಮನಃಸ್ಥಿತಿ ಹೀಗೆ ಮುಂದುವರೆದರೆ ರಾಜ್ಯವನ್ನು ಮೂರು ಭಾಗಗಳನ್ನಾಗಿ ಮಾಡುವುದರಲ್ಲಿ ಸಂದೇಹವಿಲ್ಲ. ಬಂದ್ ನಡೆಸಿದರೆ, ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂಬ ಉದ್ದೇಶದಿಂದ ಬಂದ್ ಕೈಬಿಟ್ಟು ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕಸಾಪ ಜಿಲ್ಲಾಧ್ಯಕ್ಷ ಸಿಂ.ಲಿಂ.ನಾಗರಾಜು ಮಾತನಾಡಿ, ಕನ್ನಡ ನಾಡು, ನುಡಿ, ಸಂಸ್ಕೃತಿ  ಹಾಗೂ ಕನ್ನಡ ಚಳುವಳಿಗಾರರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿ ಮಾತನಾಡುವ ರಾಜಕಾರಣಗಳಿಗೆ ಜನತೆ ಸಾರ್ವಜನಿಕವಾಗಿ ಛೀಮಾರಿ ಹಾಕಬೇಕು. ಸರ್ಕಾರ ನಾಡವಿರೋಧಿ ಕಾರ್ಯಕ್ರಮಗಳಿಂದ ದೂರ ಸರಿಯಬೇಕು. ಅಲ್ಲಿಯವರೆವಿಗೂ ಕನ್ನಡಪರ ಚಳುವಳಿಗಾರರು ಹಿಂದೆ ಸರಿಯುವುದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಯತ್ನಾಳ್, ಋಷಿಕುಮಾರ ಹಾಗೂ ಕೇಂದ್ರ ಕೃಷಿ ಸಚಿವರ ಪ್ರತಿಕೃತಿ ದಹಿಸಲಾಯಿತು. ವೇದಿಯ ಜಿಲ್ಲಾಧ್ಯಕ್ಷ ಬೇವೂರು ಯೋಗೇಶ್‍ಗೌಡ, ಪದಾಧಿಕಾರಿಗಳಾದ ರಂಜಿತ್‍ಗೌಡ. ಬೆಂಕಿ ಶ್ರೀಧರ್, ಕನ್ನಡಪರ ಹೋರಾಟಗಾರರಾದ ಬಾಬ್‍ಜಾನ್, ವೆಂಕಟೇಶ್ (ಶೇಠು) ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಇದೇ ಸಮಯದಲ್ಲಿ ಕರ್ನಾಟಕ ಬಂದ್ ಬೆಂಬಲಿಸಿ ಕದಂಬ ಸೇನೆ ವತಿಯಿಂದಲೂ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಶಿವಕುಮಾರ್, ತಾಲೂಕು ಅಧ್ಯಕ್ಷ ರಾಂಪುರ ಉಮೇಶ್ ಉಪಸ್ಥಿತರಿದ್ದರು.

ಬಂದ್ ಸಂಪೂರ್ಣ ವಿಫಲ:.
ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶಕ್ಕೆ ಬೆದರಿದ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಲಿಲ್ಲ. ಬಂದ್ ಎಂಬ ಮಾತಂತು ದೂರವೇ ಉಳಿಯಿತು. ಪ್ರತಿಭಟನೆಗಳು ಸಹ ನಿಮಿಷಗಳ ಅವಧಿಗೆ ಸೀಮಿತವಾಗಿತ್ತು. ಸಂಚಾರ ಎಂದಿನಂತೆ ಸುಗಮಾಗಿ ಸಾಗಿದರೆ ವ್ಯಾಪಾರ ವಹಿವಾಟು ಸಹ ಭರ್ಜರಿಯಾಗಿ ನಡೆದವು. ಒಟ್ಟಾರೆ ಇಂದಿನ ಬಂದ್ ಸಂಪೂರ್ಣ ವಿಫಲವಾಯಿತು.
ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑