Tel: 7676775624 | Mail: info@yellowandred.in

Language: EN KAN

    Follow us :


ಬೀಗರ ಔತಣ ಕೂಟದಲ್ಲಿ ಆಹಾರ ಸೇವಿಸಿದ 300 ಕ್ಕೂ ಹೆಚ್ಚು ಮಂದಿ ಅಸ್ವಸ್ಥ. ಮೋಳೆದೊಡ್ಡಿ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆ. ಸಾರ್ವಜನಿಕ ಆಸ್ಪತ್ರೆಗೆ ದಾಖಲ

Posted date: 09 Dec, 2020

Powered by:     Yellow and Red

ಬೀಗರ ಔತಣ ಕೂಟದಲ್ಲಿ ಆಹಾರ ಸೇವಿಸಿದ 300 ಕ್ಕೂ ಹೆಚ್ಚು ಮಂದಿ ಅಸ್ವಸ್ಥ. ಮೋಳೆದೊಡ್ಡಿ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆ. ಸಾರ್ವಜನಿಕ ಆಸ್ಪತ್ರೆಗೆ ದಾಖಲ

ಚನ್ನಪಟ್ಟಣ:ಡಿ/09/20/ಬುಧವಾರ. ತಾಲ್ಲೂಕಿನ ಮೋಳೆದೊಡ್ಡಿ ಗ್ರಾಮದಲ್ಲಿ ನಿನ್ನೆ ಬೀಗರ ಔತಣ ಕೂಟದಲ್ಲಿ ಮಾಂಸಾಹಾರ ಸೇವಿಸಿದ ಕಾರಣ ಮುನ್ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ವಧು ವರ ಇಬ್ಬರು ಮೋಳೆದೊಡ್ಡಿಯವರೇ ಆಗಿದ್ದು, ಭಾನುವಾರ ವಿವಾಹವಾಗಿತ್ತು. ನಿನ್ನೆ ಅಂದರೆ ಡಿಸೆಂಬರ್ 08 ನೇ ತಾರೀಖಿನ ಮಂಗಳವಾರದಂದು ವಧುವಿನ ಮನೆಯವರು ಬೀಗರ (ನೆರವಿ) ಔತಣ ಕೂಟ ಹಮ್ಮಿಕೊಂಡಿದ್ದರು.ಸರಿಸುಮಾರು 700 ರಿಂದ 800 ಮಂದಿ ಊಟ ಮಾಡಿದ್ದು ನಿನ್ನೆ ಸಂಜೆಯೇ ಕೆಲವರಿಗೆ ವಾಂತಿಬೇಧಿ ಆಗಿದ್ದು ಕೆಲ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.


ಇಂದು ಬೆಳಿಗ್ಗೆ ನೂರಾರು ಮಂದಿಗೆ ಸಾಮೂಹಿಕವಾಗಿ ವಾಂತಿಬೇಧಿ ಆದ ನಂತರ ಎಚ್ಚೆತ್ತ ತಾಲ್ಲೂಕು ಆಡಳಿತವೂ ಸ್ಥಳಕ್ಕೆ ಭೇಟಿ ನೀಡಿದ್ದರು. ಹೊಂಗನೂರು ಗ್ರಾಮದ ಕಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೋಳೆದೊಡ್ಡಿ ಗ್ರಾಮದ ಅಂಗನವಾಡಿಗೆ ತಾತ್ಕಾಲಿಕವಾಗಿ ಬದಲಾಯಿಸಿ ಸ್ಥಳದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಸಾರ್ವಜನಿಕ ಆಸ್ಪತ್ರೆಯಲ್ಲಿ ಇರುವುದೇ ನೂರು ಹಾಸಿಗೆಗಳು. ಹಾಸಿಗೆಗಳಿಲ್ಲದ ಕಾರಣ ಸಿಕ್ಕಕಡೆ ಮಲಗಿಸಿ, ಗ್ಲುಕೋಸ್ ಮತ್ತು ಓ ಆರ್ ಎಸ್ ನೀಡುತ್ತಿದ್ದು, ಸಿಬ್ಬಂದಿಗಳ ಕೊರತೆ ಇರುವುದರಿಂದ ಪೋಷಕರೇ ರೋಗಿಗಳನ್ನು ಕರೆತರುವುದು, ಮಲಗಿಸುವುದು, ಶುಶ್ರೂಕರಿಗೆ ಸಹಕರಿಸುವ ಕೆಲಸ ಮಾಡಿದರು. ಸದ್ಯ ಯಾವ ಅಸ್ವಸ್ಥತರಿಗೂ ಯಾವುದೇ ಪ್ರಾಣಾಪಾಯವಿಲ್ಲ ಎಂದು ಗ್ರಾಮದ ಹಿರಿಯ ಮುಖಂಡರು ತಿಳಿಸಿದರು.


ಸಾರ್ವಜನಿಕ ಆಸ್ಪತ್ರೆಯಲ್ಲಿ ನಾನೇ ಖುದ್ದು ನಿಂತು ಚಿಕಿತ್ಸೆ ನೀಡುತ್ತಿದ್ದೇನೆ. ಆಹಾರದಲ್ಲಿ ವ್ಯತ್ಯಾಸ ಆಗಿರುವುದರಿಂದ ಅಸ್ವಸ್ಥರಾಗಿದ್ದಾರೆ. ಈಗಿನ ಪರಿಸ್ಥಿತಿಯಲ್ಲಿ ಯಾವುದೇ ರೋಗಿಗೂ ಜೀವಕ್ಕೆ ತೊಂದರೆ ಇಲ್ಲ ಎಂದು ಆಡಳಿತ ವೈದ್ಯಾಧಿಕಾರಿ ವಿಜಯನರಸಿಂಹ ತಿಳಿಸಿದರು.


ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಕೊರೊನಾ ನಡುವೆಯೂ, ಅನುಮತಿ ಪಡೆಯದೇ ದೊಡ್ಡ ಮಟ್ಟದಲ್ಲಿ ಭೋಜನ ವ್ಯವಸ್ಥೆ ಮಾಡಿರುವುದು ಅಪರಾಧವಾಗಿದ್ದು, ಪೋಲೀಸರಿಗೆ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಹಶಿಲ್ದಾರ್ ನಾಗೇಶ್ ರವರು ತಿಳಿಸಿದರು.


ಹೊಂಗನೂರು ಗ್ರಾಮದ ಪ್ರಾಥಮಿಕ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಮೋಳೆದೊಡ್ಡಿ ಗೆ ಶಿಪ್ಟ್ ಮಾಡಿದ್ದು ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರನ್ನು ನಗರದ ಆಸ್ಪತ್ರೆಗೆ ಕರೆತರಲಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ದೂರಾಗಿದ್ದರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ರಾಜು ಮಾಹಿತಿ ನೀಡಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑