Tel: 7676775624 | Mail: info@yellowandred.in

Language: EN KAN

    Follow us :


ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೂತನ ವರ್ಷದ ಕ್ಯಾಲೆಂಡರ್‌ ಬಿಡುಗಡೆ

Posted date: 19 Dec, 2020

Powered by:     Yellow and Red

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೂತನ ವರ್ಷದ ಕ್ಯಾಲೆಂಡರ್‌ ಬಿಡುಗಡೆ

ರಾಮನಗರ:ಡಿ/19/20/ಶನಿವಾರ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ ರಾಮನಗರ ಜಿಲ್ಲೆ , ಸರ್ವ ಸದಸ್ಯರ ಮಹಾಸಭೆ, ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ಜನವರಿ-2021 ರ ಮಾಹೆಯಲ್ಲಿ  ನಗರದ ಡಾ// ಬಿ.ಆರ್.  ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ  ಆರ್.ಕೆ ಭೈರಲಿಂಗಯ್ಯ, ಅವರು ತಿಳಿಸಿದರು.


ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ(ರಿ) ದಿಂದ ನಗರದ ಸ್ಪೂರ್ತಿ ಭವನದ  ಶ್ರೀ ಮರಿದೇವರು ಸಭಾಂಗಣದಲ್ಲಿಂದು ಜರುಗಿತು. ಜಿಲ್ಲಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.


ರಾಜ್ಯ ಸರ್ಕಾರಿ ನೌಕರರ ಸಂಘವು ಸದಸ್ಯರ ಹಿತಾಸಕ್ತಿಯ ಜತೆಗೆ,  ನಾಡಿನ ನೆಲ, ಜಲ, ಭಾಷೆ, ಗಡಿಸಮಸ್ಯೆ, ಭೂಕಂಪ ಪ್ರವಾಹ ಮತ್ತಿತರ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ಥರ ಸಮಸ್ಯೆಗೆ ಪೂರಕವಾಗಿ ಸ್ಪಂದಿಸಿದ ಹಿರಿಮೆ ಹೊಂದಿದೆ.

ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿರುವ ಜಾಗತಿಕ ಮಹಾಮಾರಿ ಕೋವಿಡ್-19  ವಿರುದ್ಧ ಹೋರಾಡುತ್ತಿರುವ  ಸರ್ಕಾರಿ ನೌಕರರ ಸಂಕಲ್ಪ ಮತ್ತು ಸಂಯಮ ಮಹತ್ವದ್ದು , ಕೋವಿಡ್ 19 ಮಹಾಮಾರಿಯ ವಿರುದ್ಧ ನೌಕರರು ದೈರ್ಯವಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿದ್ದಾರೆಂದು  ಹೇಳಿದರು.


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ ದ ಪ್ರತಿಭಾ ಪುರಸ್ಕಾರ ಸಮಾರಂಭವು ಜನವರಿ-2021 ರ ಮಾಹೆಯಲ್ಲಿ  ನಗರದ ಡಾ// ಬಿ.ಆರ್.  ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿವಿಧ ಇಲಾಖೆಗಳಲ್ಲಿ ಅಪೂರ್ವ ಸೇವೆ ಸಲ್ಲಿಸಿ ಸರ್ವೋತ್ತಮ ಸೇವಾ ಪುರಸ್ಕಾರಕ್ಕೆ ಬಾಜನರಾದ ನೌಕರರಿಗೆ ಅಭಿನಂದನೆ,   ಕೊರೋನ ನಿಯಂತ್ರಣ ಕಾರ್ಯದಲ್ಲಿ ಅವಿರತವಾಗಿ ಶ್ರಮಿಸಿದ  ನೌಕರರು ಹಾಗೂ ಕೊರೋನ ವಾರಿಯರ್ಸ್‌ಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಹಾಗೂ ಇದೇ ಸಂದರ್ಭದಲ್ಲಿ  ನೌಕರರ ಸಂಘದ ಪದಾಧಿಕಾರಿಗಳಿಗೆ ಅಭಿನಂದಿಸಲಾಗುವುದು ಎಂದರು.


ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಸಿದ್ಧಪಡಿಸಲಾದ ನೂತನ ವರ್ಷದ ಕ್ಯಾಲೆಂಡರ್‌ನ್ನು ಲೋಕಾರ್ಪಣೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಕಾರ್ಯಧ್ಯಕ್ಷ  ಸಿ ಭೈರಪ್ಪ, ಕ.ರಾ.ನಿ.ನೌ.ಸಂ.ದ  ಕಾರ್ಯದರ್ಶಿ ರಾಜೇಗೌಡ, ಖಜಾಂಚಿ ಟಿ.ನರಸಯ್ಯ,  ಸಂಘದ  ರಾಜ್ಯ ಪರಿಷತ್ ಸದಸ್ಯರಾದ ಕೆ ಸತೀಶ್, ತಾಲ್ಲೂಕು ಸಂಘಗಳ ಅಧ್ಯಕ್ಷರಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ನಿರ್ದೇಶಕರು ಮತ್ತಿತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑