Tel: 7676775624 | Mail: info@yellowandred.in

Language: EN KAN

    Follow us :


ಕೃಷಿ, ನೀರಾವರಿ ಯೋಜನೆಗಳ ಜಾರಿಯಲ್ಲಿ ರಾಜಿ ಇಲ್ಲ ಎಂದ ಡಿಸಿಎಂ

Posted date: 23 Dec, 2020

Powered by:     Yellow and Red

ಕೃಷಿ, ನೀರಾವರಿ ಯೋಜನೆಗಳ ಜಾರಿಯಲ್ಲಿ ರಾಜಿ ಇಲ್ಲ ಎಂದ ಡಿಸಿಎಂ

ರಾಮನಗರ:ಡಿ/23/20/ಬುಧವಾರ.

*ರೈತ ದಿನದ ಅಂಗವಾಗಿ ಇಡೀ ದಿನ  ಗ್ರಾಮ ಸಂಚಾರ; ಹಲವೆಡೆ ಅನ್ನದಾತರ ಜತೆ ಸಂವಾದ 

***:


ರೈತರಿಗೆ ಪೂರಕವಾದ ಕೃಷಿ ಮತ್ತು ನೀರಾವರಿ ಯೋಜನೆಗಳನ್ನು ಕಾರ್ಯಗತ ಮಾಡುವ ವಿಷಯದಲ್ಲಿ ರಾಜ್ಯ ಸರಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ತಿಳಿಸಿದರು.


ರೈತ ದಿನದ ಅಂಗವಾಗಿ ತಾಲ್ಲೂಕಿನ ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ಬುಧವಾರದಂದು ಇಡೀ ದಿನ ಸಂಚರಿಸಿ ಅನ್ನದಾತರನ್ನು ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ಭೇಟಿ ನೀಡಿ ಸಂವಾದ ನಡೆಸಿದ ನಂತರ ಹುಚ್ಚಹನುಮಗೌಡನ ಪಾಳ್ಯ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೃಷಿಗೆ ನೀರು ಓದಗಿಸುವುದು ಹಾಗೂ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದು ಸರಕಾರದ ಬದ್ಧತೆ ಎಂದರು.


211 ಗ್ರಾಮಗಳಿಗೆ ನದಿ ನೀರು:


ರಾಮನಗರ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಾಡಪ್ರಭು ಕೆಂಪೇಗೌಡರ ಮಾಗಡಿ ತಾಲ್ಲೂಕಿನಲ್ಲೂ ಕೃಷಿ, ನೀರಾವರಿಗೆ ಪೂರಕವಾದ ಅನೇಕ ಯೋಜನೆಗಳು ಭರದಿಂದ ಕಾರ್ಯಗತವಾಗುತ್ತಿವೆ. ಈ ಪೈಕಿ 66 ಕೆರೆಗಳನ್ನು ತುಂಬಿಸಿ 211 ಗ್ರಾಮಗಳಿಗೆ ನೀರು ಪೂರೈಸುವ ಶ್ರೀರಂಗ ಏತ ನೀರಾವರಿ ಯೋಜನೆಯೂ ಒಂದು. ಸುಮಾರು 175 ಕೋಟಿ ರೂ. ವೆಚ್ಚದಲ್ಲಿ ಹೇಮಾವತಿ ನದಿಯಿಂದ ನೀರು ತರಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.


ಸತ್ತೆಗಾಲ ನೀರಾವರಿ ಯೋಜನೆ:


ಕಾವೇರಿ ನದಿಯ ಸತ್ತೆಗಾಲ ಅಣೆಕಟ್ಟೆಯಿಂದ ಗುರುತ್ವಾಕರ್ಷಣೆ ತಂತ್ರಜ್ಞಾನದ ಮೂಲಕ ಇಗ್ಗಲೂರು ಬ್ಯಾರೇಜಿಗೆ ನೀರು ಹರಿಸಿ, ಅಲ್ಲಿಂದ ಮೊಗೇನಹಳ್ಳಿ ಕೆರೆ, ಕಣ್ವ ಮತ್ತು ಮಂಚನಬೆಲೆ ಜಲಾಶಯಗಳಿಗೆ ಹಾಗೂ ವೈ.ಜಿ.ಗುಡ್ಡ ಕೆರೆಗೆ ನೀರನ್ನು ತುಂಬಿಸಲಾಗುವುದು. ನಾಲ್ಕು ತಾಲ್ಲೂಕುಗಳಿಗೆ ನೀರೊದಗಿಸುವ ಈ ಯೋಜನೆಯನ್ನು 540 ಕೋಟಿ ರೂ. ವೆಚ್ಚದಲ್ಲಿ ಕಾರ್ಯಗತ ಮಾಡಲಾಗುತ್ತಿದೆ. ಈ ಮೂಲಕ ಜಿಲ್ಲೆಯ ಎಲ್ಲ ಮನೆಗಳಿಗೂ ಶಾಶ್ವತವಾಗಿ ನದಿ ನೀರನ್ನು ಪೂರೈಕೆ ಮಾಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು. 


ಇದರ ಜತೆಗೆ, ಕೆಂಪೇಗೌಡರ ವೀರ ಸಮಾಧಿಯನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಮಾಗಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲಾಗುತ್ತಿದೆ. ನರೇಗಾ ಯೋಜನೆಯಲ್ಲಿ ಕೆರೆಗಳ ಹೂಳೆತ್ತಿಸಲಾಗಿದೆ. ಎತ್ತಿನಹೊಳೆ ಯೋಜನೆಯಿಂದಲೂ ನಮಗೆ ನೀರು ಬರುವುದಿದೆ. ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಹೂಳೆತ್ತುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.


ಮುಖ್ಯವಾಗಿ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಕೊಳಚೆನೀರು ಹರಿದು ಬರುತ್ತಿದೆ. ಅದನ್ನು ತಪ್ಪಿಸಲಾಗುವುದು. ಆ ಜಲಾಶಯದ ತುಂಬಾ ನೀರು ತುಂಬಿದರೆ ಸುತ್ತಮುತ್ತ ರೈತರ ಜಮೀನಿನಲ್ಲಿರುವ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಉಕ್ಕಿ ಕೃಷಿಗೆ ಅನುಕೂಲವಾಗಲಿದೆ. ಇದಕ್ಕೆ ಸರಕಾರಕ್ಕೆ ಆದಷ್ಟು ಬೇಗ ಕ್ರಮ ಕೈಗೊಳ್ಳಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.


ರೈತರ ಸಂವಾದ:


ಇದೇ ಡಿಸಿಎಂ ಅವರು ರೈತರ ಜತೆ ಮಾತುಕತೆ ನಡೆಸಿದರಲ್ಲದೆ, ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾನೂನು ಉಂಟಾಗಿದ್ದ ಅನುಮಾನಗಳನ್ನು ನಿವಾರಿಸಿದರು.


ರೈತರು ಬೆಳೆ ತೆಗೆಯುತ್ತಾರೆ. ಆದರೆ ಉತ್ತಮ ಬೆಲೆ ಸಿಗುತ್ತಿಲ್ಲ. ಕಳೆದ ಎಪ್ಪತ್ತು ವರ್ಷಗಳಿಂದ ಇದೇ ಆಗಿಬಿಟ್ಟಿದೆ. ಇನ್ನು ಮುಂದೆ ರೈತರು ಇಂಥ ಕಷ್ಟವನ್ನು ಎದುರಿಸಬೇಕಾಗಿಲ್ಲ. ಮೊದಲಿನಿಂದ ಎಪಿಎಂಸಿ ಮಾರುಕಟ್ಟೆಗಳಲ್ಲಿ ಮಾರಬೇಕೆಂಬ ಅಲಿಖಿತ ನಿಯಮವೇನೂ ಇಲ್ಲ. ತಾವು ಬೆಳೆಯನ್ನು ರೈತರು ಯಾರಿಗೆ ಬೇಕಾದರೂ ಮಾರಿ ಉತ್ತಮ ಬೆಲೆ ಪಡೆಯಬಹುದು. ರಾಜ್ಯಗಳ ಗಡಿಗಳನ್ನು ಮೀರಿ ಎಲ್ಲಿ ಬೇಕಾದರೂ ವ್ಯವಹಾರ ಮಾಡಬಹುದು. ಕೃಷಿಕರ ಆರ್ಥಿಕ ಸ್ಥಿತಿಯನ್ನೇ ಬದಲಿಸಬಲ್ಲ ಇಂಥ ಕಾನೂನುಗಳನ್ನು ಬೆಂಬಲಿಸಬೇಕೇ ಹೊರತು ವಿರೋಧಿಸುವುದು ಸರಿಯಲ್ಲ ಎಂದು ಡಾ.ಅಶ್ವತ್ಥನಾರಾಯಣ ವಿವರಿಸಿದರು.


ಒಂದೇ ದಿನ ಹದಿನಾಲ್ಕು ಗ್ರಾಮಗಳಲ್ಲಿ ರೈತರೊಂದಿಗೆ ಮಾತುಕತೆ ನಡೆಸಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಕೃಷಿ ಕಾನೂನುಗಳಿಂದ ಆಗುತ್ತಿರುವ ಪ್ರಯೋಜನಗಳನ್ನು ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಹುಚ್ಚಹನುಮಗೌಡನ ಪಾಳ್ಯ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲ, ಕೆಂಚನಹಳ್ಳಿಯ ಕೆಂಚಾಳಮ್ಮನವರ ದೇವಾಲಯಗಳು ಸೇರಿ ವಿವಿಧ ಗ್ರಾಮಗಳಲ್ಲಿ ಇದ್ದ ದೇಗುಲಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಗುಮ್ಮಸಂದ್ರದ ರುದ್ರಮುನೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.


ವರದೇನಹಳ್ಳಿ, ಉಕ್ಕಡ ಗುಡದಹಳ್ಳಿ, ವೀರೇಗೌಡನದೊಡ್ಡಿ, ಕಲ್ಯ, ಹುಚ್ಚಹನುಮಗೌಡನ ಪಾಳ್ಯ, ಚಿಕ್ಕಮುದಿಗೆರೆ, ಡಿಸಿಎಂ ಅವರ ಹುಟ್ಟೂರು ಚಿಕ್ಕಲ್ಯ, ಬಾಜೇನಹಳ್ಳಿ, ತಿಪ್ಪಸಂದ್ರ, ಹೆಬ್ಬಳಲು, ಹೊನ್ನೇನಹಳ್ಳಿ, ಸುಗ್ಗನಹಳ್ಳಿ, ಕಣನೂರು ಮಾರಸಂದ್ರ, ಹುಲಿಕಲ್‌, ಕುದೂರು, ಬಿಸ್ಕೂರು,  ಮಂಚನಹಳ್ಳಿ, ಗುಮ್ಮಸಂದ್ರ, ಕೆಂಚನಹಳ್ಳಿ, ಸಂಕಿಘಟ್ಟ; ಡಿಸಿಎಂ ಅವರು ಪ್ರವಾಸ ಮಾಡಿದ ಗ್ರಾಮಗಳು.


ಪರಿಷತ್ ಸದಸ್ಯ ಅ.ದೇವೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್, ಮಾಗಡಿ ತಾಲ್ಲೂಕಿನ ಬಿಜೆಪಿ ಅಧ್ಯಕ್ಷ ಧನಂಜಯ, ಬಿಜೆಪಿ ಮುಖಂಡ ಎಚ್.ಎಂ.ಕೃಷ್ಣಮೂರ್ತಿ, ಪಕ್ಷದ ವಿವಿಧ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑