Tel: 7676775624 | Mail: info@yellowandred.in

Language: EN KAN

    Follow us :


ಖಾತೆ ರಹಿತ ನೂತನ ಸಚಿವ ಸಿ ಪಿ ಯೋಗೇಶ್ವರ್ ರವರಿಗೆ ಅದ್ದೂರಿ ಸ್ವಾಗತ ಕೋರಿದ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು

Posted date: 18 Jan, 2021

Powered by:     Yellow and Red

ಖಾತೆ ರಹಿತ ನೂತನ ಸಚಿವ ಸಿ ಪಿ ಯೋಗೇಶ್ವರ್ ರವರಿಗೆ ಅದ್ದೂರಿ ಸ್ವಾಗತ ಕೋರಿದ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು

ಚನ್ನಪಟ್ಟಣ/ಜ/18/21/ಸೋಮವಾರ. ರಾಜ್ಯದ ಮಂತ್ರಿಯಾಗಿ ಇವತ್ತಿಗೂ ಸಹ ಖಾತೆ ಗಳಿಸದ, ಆಧುನಿಕ ಭಗಿರಥ ಎಂದೇ ಹೆಸರು ಮಾಡಿರುವ ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ, ರಾಜ್ಯ ಕಲಾವಿದರ ಕೋಟಾದಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಸಿ.ಪಿ ಯೋಗೇಶ್ವರ್ ಅವರು ಇಲ್ಲಿನ ಅಯ್ಯನ ಗುಡಿ ಎಂದೇ ಹೆಸರುವಾಸಿಯಾಗಿರುವ ಕೆಂಗಲ್ ಆಂಜನೇಯ ಸ್ವಾಮಿಗೆ, ಕುಟುಂಬ ಸಮೇತ ಆಗಮಿಸಿ ಪೂಜೆ ಸಲ್ಲಿಸಿದರು.


ಪೂರ್ವ ನಿಗಧಿಯಂತೆ ಅವರು ೧೦ ಗಂಟೆಗೆ ಕೆಂಗಲ್ ದೇವಸ್ಥಾನಕ್ಕೆ ಬರುವುದು, ಅಲ್ಲಿ ಸೇರಿರುವ ಸಾವಿರಾರು ಅಭಿಮಾನಿಗಳ ಮುಂದೆ ಪೂಜೆ ಸಲ್ಲಿಸುವುದು, ನಂತರ ಪ್ರಸಾದ ವಿತರಣೆ, ಆಮೇಲೆ ಬೈಕ್ ರ‍್ಯಾಲಿಯಲ್ಲಿ  ಅವರನ್ನು ಮಂಗಳವಾರಪೇಟೆಯ ಬಸವೇಶ್ವರ ದೇವಸ್ಥಾನದ ವರೆಗೆ ಕರೆತಂದು, ಆನಂತರ ಅಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಲಾಗುವುದು ಎಂಬ ವಿಚಾರವು ಇತ್ತು.


ಆದರೆ, ಅವರು ಕೆಂಗಲ್ ದೇವಸ್ಥಾನಕ್ಕೆ ಸುಮರು 3 ಗಂಟೆ ತಡವಗಿ ಆಗಮಿಸಿದರು.

ವೇಗವಾಗಿ ಕೆಂಗಲ್ ಆಂಜನೇಯನ ದರ್ಶನವನ್ನು ಪಡೆದು, ಮೆರವಣಿಗೆ ಹೊರಡುವ ಹೊತ್ತಿಗೆ ಅವರ ಅಭಿಮಾನಿಗಳು ಕೆಲವರು ಬೃಹತ್ ಆದ ಕೇಕ್ ಅನ್ನು ಹೊತ್ತು ತಂದು,  ಕೇಕ್ ಕತ್ತರಿಸಿ ಎಲ್ಲರಿಗೂ ಹಂಚಿದರು. ಮಂತ್ರಿಗಿರಿಯ ಪಟ್ಟಕಟ್ಟಿಕೊಂಡು, ಯಾವ ಖಾತೆ ಕೊಡಲಾಗಿದೆ ಎಂಬ ಮಾಹಿತಿ ಇಲ್ಲದ ನಡುವೆಯೂ ಅವರು ಜನರ ಮಧ್ಯೆ ಬಂದು, ಜನರು ಇಷ್ಟೊಂದು ಅಭಿಮಾನದಿಂದ ನನ್ನನ್ನು ಸ್ವಾಗತ ಮಾಡಿದ್ದು, ನನಗೆ ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ, ಅವರನ್ನು ನಾನು ಅಭಿನಂದಿಸಲೇಬೇಕು ಎಂದು ಹೇಳಿದರು.


ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ

ನನ್ನ ಪಾಲಿಗೆ ಈ ಹೊತ್ತಿಗೂ ಸಹ ಯಾವ ಖಾತೆಯೂ ಲಭ್ಯವಾಗಿಲ್ಲ, ಯಾವ ಖಾತೆ ಕೊಡಬೇಕು ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ, ನನಗೆ ಯಾವ ಖಾತೆಯನ್ನು ಕೊಟ್ಟರೂ ಸಹ ನಿಭಾಯಿಸಿತ್ತೇನೆ, ನನ್ನ ಕ್ಷೇತ್ರದ ಜನರ ಹಿತಕಾಪಾಡುವಲ್ಲಿ ನಾನು ಯಾವಾಗಲೂ ಮುಂದು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.


ಬೈಕ್ ರ‍್ಯಾಲಿಯು ಕೆಂಗಲ್ ದೇವಸ್ಥಾನದ ಆವರಣದಿಂದ ಇಲ್ಲಿನ ಕುವೆಂಪು ಕಾಲೇಜಿನ ಮುಂಭಾಗದವರೆಗೂ ಇತ್ತು.

ಕಾಲೇಜಿನ ವಿದ್ಯಾ ರ್ಥಿಗಳೂ ಸಹ ತಮ್ಮ ನಾಯಕನನ್ನು ಕಣ್ಣು ತುಂಬಿ ಕೊಳ್ಳುವ ಹಿನ್ನೆಲೆಯಲ್ಲಿ ಕಾಲೇಜಿನ ಮುಂಭಾಗದಲ್ಲಿ ಕಾದಿದ್ದರು.

ವಂದಾರಗುಪ್ಪೆ ಸೇರಿದಂತೆ ದಾರಿಯ ಉದ್ಧಕ್ಕೂ ಪಕ್ಷದ ಅಭಿಮಾನಿಗಳು ಪಕ್ಷದ ಬಾವುಟವನ್ನು ಹಿಡಿದು ಸ್ವಾಗತಿಸುವ ಕೆಲಸವನ್ನು ಮಾಡುತ್ತಿದ್ದರು.

ಕೆಲವು ಕಡೆ ಜೈಕಾರ ಹಾಕುವ ಕೆಲಸವನ್ನು ಮಾಡುತ್ತಿದ್ದರು. ಈ ರೀತಿಯ ಜನಸಂದಣಿಯನ್ನು ಕಂಡ ಯೋಗೇಶ್ವ ರ್‌ಗೆ ನಾನು ಯಾಕೆ ಸೋತೆ ಎಂದು ಅರ್ಥವಾಗಬೇಕಾಗಿದೆ.


ಕೆಂಗಲ್ ದೇವಾಲಯದಿಂದ ಹೊರಟ ಮೆರವಣಿಗೆಯು, ಕುವೆಂಪು ಕಾಲೇಜು, ವಂದಾರಗುಪ್ಪೆ ಗ್ರಾಮ, ಹನುಂಮತನಗರ, ಷೇರು ಹೋಟೆಲ್, ಸಾತನೂರು ಸರ್ಕಲ್, ಬಸ್ ನಿಲ್ದಾಣ, ಗಾಂಧಿಭವನ, ಕುವೆಂಪು ನಗರ, ಮಂಗಳವಾರಪೇಟೆ ಯ ತನಕ ಕೊಂಬು ಕಹಳೆ, ಜೈಕಾರ, ಪುಷ್ಪನಮನದೊಟ್ಟಿಗೆ ನಡೆಯಿತು.


ಹನುಮಂತ ನಗರದಲ್ಲಿ ರಸ್ತೆ ಬದಿಯಲ್ಲಿ ಬಸ್ಸುಗಳನ್ನು ನಿಲ್ಲಿಸಿಕೊಂಡು ಅಭಿಮಾನಿಗಳು ಬಸ್ಸಿನ ಮೇಲಿನಿಂದ ಹೂವಿನ ಮಳೆ ಸುರಿಸಿದರು. ಷೇರು ಹೋಟೆಲ್ ಮತ್ತು ಸಾತನೂರು ಸರ್ಕಲ್ ಬಳಿ ಬೃಹತ್ ಹೂವಿನ ಹಾರಗಳನ್ನು ಹಾಕುವ ಮೂಲಕ ತಮ್ಮ ನಾಯಕನನ್ನು ಸ್ವಾಗತಿಸಿದರೇ ಬಸ್ ನಿಲ್ದಾಣದಲ್ಲಿ 500 ಕಿಲೋ ಇರುವ ಬೃಹತ್ ಸೇಬಿನ ಹಣ್ಣುಗಳ ಹಾರವನ್ನು ಕ್ರೇನ್ ಮೂಲಕ ಹಾಕಿ ಅಭಿನಂದಿಸಿದರು. ಅವರು ತೆರಳಿದ ನಂತರ ಸೇಬು ಹಣ್ಣಿಗಾಗಿ ಕಾರ್ಯಕರ್ತರು ಮುಗಿಬಿದ್ದರು.


ಗಾಂಧಿ ಭವನದ ಬಳಿ ಬಂದ ಸಚಿವರು ಡಾ ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಇದೇ ಸಮಯದಲ್ಲಿ ದಲಿತ ಮುಖಂಡರು ಯೋಗೇಶ್ವರ್ ಮತ್ತು ಅವರ ಪುತ್ರ ಶ್ರವಣ್ ರವರನ್ನು ಅಭಿನಂದಿಸಿದರು. ಅದೇ ವೃತ್ತದಲ್ಲಿದ್ದ ರಾಷ್ಟ್ರಕವಿ ಕುವೆಂಪು, ಅಂತರಾಷ್ಟ್ರ ಖ್ಯಾತಿಯ ಅರ್ಥ ಶಾಸ್ತ್ರಜ್ಞ ಪ್ರೊ ವೆಂಕಟಗಿರಿಗೌಡ ಮತ್ತು ರಾಜ್ಯದ ಮೊದಲ ವಿದ್ಯಾಮಂತ್ರಿ ವೆಂಕಟಪ್ಪ ನವರ ಪುತ್ಥಳಿ ಗಳಿಗೂ ಸಹ ಸಚಿವರು ಹೂವಿನ ಹಾರ ಹಾಕಿ ನಮಿಸಿದರು. ಮಂಗಳವಾರಪೇಟೆ ಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಮೆರವಣಿಗೆ ಮುಕ್ತಾಯಗೊಂಡಿತು.


ಮೆರವಣಿಗೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು, ಉಪಾಧ್ಯಕ್ಷ ರವೀಶ್ ಎಲೆಕೇರೆ, ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ ಟಿ ಜಯರಾಮು, ಮಾಜಿ ಅಧ್ಯಕ್ಷ ಆನಂದಸ್ವಾಮಿ, ಪತ್ನಿ, ಪುತ್ರಿ, ಪುತ್ರರು ಜೊತೆಯಲ್ಲಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑