ಶ್ರಮದಿಂದ ಉದ್ಯೋಗ ಪಡೆದುಕೊಳ್ಳಲು ಸಾಧ್ಯ: ಅಪರ ಜಿಲ್ಲಾಧಿಕಾರಿ ಜವರೇಗೌಡ
ಪರಿಶ್ರಮದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಉದ್ಯೋಗ ಪಡೆಯಲು ವಿದ್ಯಭ್ಯಾಸದ ಜೊತೆ ಜೊತೆಗೆ ಕೌಶಲ್ಯಗಳನ್ನು ರೂಢಿಸಿಕೊಂಡು ಶ್ರಮ ಪಟ್ಟರೆ ಉದ್ಯೋಗ ಪಡೆದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಮದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಯೋಗ ಪ್ರತಿಯೊಬ್ಬರ ಮೂಲಭೂತ ಅವಶ್ಯಕತೆಯಾಗಿದೆ. ಅದೃಷ್ಟದಿಂದ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಿಲ್ಲ. ಉದ್ಯೋಗ ಪಡೆಯಲು ಶೇ 99 ಶ್ರಮ ಇರಲೇಬೇಕು. ಅದೃಷ್ಟದ ಪಾತ್ರ ಕೇವಲ 1% ಎಂದರು.
ಉದ್ಯೋಗ ಪಡೆದುಕೊಳ್ಳಲು ಬೇಕಿರುವ ಹಲವಾರು ರೀತಿಯ ತರಬೇತಿಗಳನ್ನು ಸರ್ಕಾರದ ವತಿಯಿಂದ ಆಯೋಜಿಸಲಾಗುತ್ತಿದೆ. ಖಾಸಗಿ ಸಂಸ್ಥೆಯ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಸಂಘಟಿಸಲಾಗುತ್ತಿದೆ. ಇಂತಹ ಅವಕಾಶಗಳು ಹಿಂದೆ ಇರಲಿಲ್ಲ. ಇಂದು ಸರ್ಕಾರ ನಿಮಗೆ ನೀಡಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.
ಮಹಾನ್ ವ್ಯಕ್ತಿಗಳಾದ ಅಬ್ದುಲ್ ಕಲಾಂ, ಥಾಮಸ್ ಆಲ್ವ ಎಡಿಷನ್ ಮುಂತಾದವರ ಹೆಸರು ಚಿರಪರಿಚಿತವಾಗಿ ಉಳಿಯಲು ಕಾರಣ ಅವರಲಿದ್ದ ಶ್ರದ್ಧೆ, ಪ್ರಯತ್ನ, ಹೆಚ್ಚಿನ ಜ್ಞಾನರ್ಜನೆ, ಪರಿಶ್ರಮ. ಇವುಗಳನ್ನು ಇಂದಿನ ಯುವಜನತೆ ರೂಢಿಸಿಕೊಳ್ಳಬೇಕು ಎಂದರು.
*221 ಜನರಿಗೆ ಉದ್ಯೋಗ:* ಜಿಲ್ಲೆಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ 108 ಪುರುಷರು, 113 ಮಹಿಳೆಯರು ಸೇರಿ ಒಟ್ಟು 221 ಜನರು ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉದ್ಯೋಗ ಅಧಿಕಾರಿ ಶಿವಮೂರ್ತಿ .ಕೆ ಅವರು ತಿಳಿಸಿದ್ದಾರೆ.
ಉದ್ಯೋಗ ಮೇಳಕ್ಕೆ 27 ಸಂಸ್ಥೆಗಳನ್ನು ಸಂಘಟಿಸಲಾಗಿತ್ತು, ಉದ್ಯೋಗ ಮೇಳದಲ್ಲಿ 362 ಪುರುಷರು ಹಾಗೂ 209 ಮಹಿಳೆಯರು ಒಟ್ಟು 571 ಜನರು ಭಾಗವಹಿಸಿದ್ದರು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಶೇಖರ್ ಗಡದ್ ಎಸ್, ಜಿಲ್ಲಾ ಕೌಶಲ್ಯಾಧಿಕಾರಿ ಸಿ.ಪಿ.ಲಕ್ಷ್ಮಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕಿಶೋರ ಎಂ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು