Tel: 7676775624 | Mail: info@yellowandred.in

Language: EN KAN

    Follow us :


ಕ್ಯಾನ್ಸರ್ ಮುಕ್ತ ಭಾರತ ಮಾಡಲು ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ಉಚಿತ ಶಿಬಿರ ಏರ್ಪಡಿಸಲಾಗಿತ್ತು

Posted date: 29 Mar, 2021

Powered by:     Yellow and Red

ಕ್ಯಾನ್ಸರ್ ಮುಕ್ತ ಭಾರತ ಮಾಡಲು ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ಉಚಿತ ಶಿಬಿರ ಏರ್ಪಡಿಸಲಾಗಿತ್ತು

ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ವತಿಯಿಂದ 'ಕ್ಯಾನ್ಸರ್ ಮುಕ್ತ ಭಾರತ' ಅಭಿಯಾನದಡಿ ಭಾನುವಾರ ನಗರದ ಸರ್ಕಾರಿ ಬಾಲಕರಕಾಲೇಜು ಮೈದಾನದಲ್ಲಿ ಮಹಿಳೆಯರಿಗಾಗಿ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಯುವ ಮುಖಂಡ ಚಂದುಕರಿಯಪ್ಪ ನೇತೃತ್ವದಲ್ಲಿ ನಡೆದ ಈ ಶಿಬಿರದಲ್ಲಿ ನೂರಾರು ಮಹಿಳೆಯರು ತಪಾಸಣೆಗೆ ಒಳಗಾದರು. ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ತನಕ ನಡೆದ ಈ ಶಿಬಿರದಲ್ಲಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಸಂಸ್ಥೆಯ ಖ್ಯಾತವೈದ್ಯರಾದ ಡಾ.ಸಿ.ರಾಮಚಂದ್ರ, ಡಾ.ಸಿ.ರಮೇಶ್, ಡಾ.ಎ.ಎಸ್.ಮಹಂತೇಶ್, ಡಾ.ಅರುಣ್‌ಕುಮಾರ್ ಮೋದಿ, ಡಾ.ಸತ್ಯನಾರಾಯಣ, ಎಂ.ಆರ್. ವಸಪ್ಪ ಬಸಪ್ಪೂರ್, ಡಾ.ರಾಜಲಕ್ಷ್ಮಿ, ಡಾ.ವಿಜಯಲಕ್ಷ್ಮಿ, ಡಾ.ರಸ್ಲ, ಡಾ.ಪ್ರಶಾಂತ್‌ ಜೆ. ಸೇರಿದಂತೆ ನುರಿತ ಸಿಬ್ಬಂದಿ ತಜ್ಞರುಗಳು ಭಾಗವಹಿಸಿದ್ದರು.


ಈ ವೇಳೆ ಕಾರ್ಯಕ್ರಮಆಯೋಜಕ ಹಾಗೂ ಯುವ ಮುಖಂಡ ಚಂದುಕರಿಯಪ್ಪ ಮಾತನಾಡಿ, ಭಾರತವನ್ನು 'ಕ್ಯಾನ್ಸರ್ ಮುಕ್ತ' ಮಾಡುವ ಸಲುವಾಗಿ ಈ ಒಂದು ಆರೋಗ್ಯಕರ ಯೋಜನೆಯನ್ನು ರಾಜ್ಯಾಧ್ಯಂತ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಹಮ್ಮಿಕೊಂಡು ಬರುತ್ತಿದೆ. ತಾಲೂಕಿನ ಜನತೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನನ್ನ ಮನವಿಯ ಮೇರೆಗೆ ನಗರದಲ್ಲಿ ಈ ಶಿಬಿರ ಹಮ್ಮಿಕೊಂಡ ಸೊಸೈಟಿಗೆತಾಲೂಕಿನಜನತೆಯ ಪರವಾಗಿಕೃತಜ್ಞನೆ ಸಲ್ಲಿಸುತ್ತೇನೆಎಂದು ತಿಳಿಸಿದರು.

ಕ್ಯಾನ್ಸರ್ ಎಂಬ ಮಾರಣಾಂತಿಕ ಖಾಯಿಲೆಯ ಬಗ್ಗೆ ಎಚ್ಚರ ವಹಿಸುವ ಅಗತ್ಯವಿದೆ. ಗ್ರಾಮೀಣ ಭಾಗದ ಜನತೆ ಈ ಬಗ್ಗೆ ನಿರ್ಲಕ್ಷ್ಯ ವಹಿಸುವ ಕಾರಣದಿಂದ ಸಾವುನೋವುಗಳು ಸಂಭವಿಸುತ್ತಿದೆ. ತಾಲೂಕಿನ ಮಹಿಳೆಯರಿಗಾಗಿ ಇದೇ ಮೊದಲ ಬಾರಿಗೆ ನಗರದಲ್ಲಿ ಈ ಶಿಬಿರ ಆಯೋಜಿಸಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಳ್ಳಲು ಮುಂದಾಗುತ್ತೇವೆ. ಮಹಿಳೆಯರು ಆರೋಗ್ಯವಾಗಿದ್ದರೆ ಮಾತ್ರ ಆ ಕುಟುಂಬ ಆರೋಗ್ಯವಾಗಿರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.


ಈ ವೇಳೆ ಆಸ್ಪತ್ರೆಯ ವೈದ್ಯರು ರೋಗದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಿದರು. ಬಾಯಿ ಅಥವಾ ದೇಹದ ಇತರ ಭಾಗದಲ್ಲಿ ವಾಸಿಯಾಗದ ಹುಣ್ಣು, ಗಂಟು, ಆಹಾರ ಸೇವಿಸಲು ಕಷ್ಟವಾಗುವುದು, ಬಾಯಿ ತೆರೆಯಲು ಕಷ್ಟವಾಗುವುದು, ಸ್ತ್ರೀಯರಿಗೆ ಸ್ತನದಲ್ಲಿ ಗಂಟು ಮೂಡುವುದು, ತೂಕ ಕಡಿಮೆಯಾಗುವುದು ಹಾಗೂ ಹಸಿವು ಇಲ್ಲದಿರುವುದು ಕ್ಯಾನ್ಸರ್‌ನ ಲಕ್ಷಣಗಳಾಗಿವೆ. ಧೂಮಪಾನ, ಗುಟ್ಕಾ, ತಂಬಾಕಿನ ಸೇವನೆ ಅಧಿಕವಾಗಿರುವವರು ತಪ್ಪದೇ ತಪಾಸಣೆಗೆ ಒಳಗಾಗಬೇಕು ಹಾಗೂ ತಂಬಾಕು ಉತ್ಪನ್ನಗಳಿಂದ ದೂರವಿರಬೇಕು ಎಂದು ಮಾಹಿತಿ ನೀಡಿದರು.


ಜೆಡಿಎಸ್ ಮುಖಂಡ ಎಂ.ಸಿ.ಕರಿಯಪ್ಪ, ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ ಅಧ್ಯಕ್ಷರಮೇಶ್ (ಕಿಟ್ಟಿ), ಕರವೇ ರಾಜ್ಯ ಕಾರ್ಯದರ್ಶಿ ಎಂ.ಎನ್.ಸತ್ಯನಾರಾಯಣ, ಜೆಡಿಎಸ್‌ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಖಾಉಮಾಶಂಕರ್, ಎಚ್‌ಡಿಕೆ ಆಪ್ತ ಸಹಾಯಕ ಪಟ್ಲುಕೆಂಚೇಗೌಡ ಸೇರಿದಂತೆ ತಾಲೂಕು ಕಿಚ್ಚ ಸುದೀಪ್ ಅಭಿಮಾನಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑