Tel: 7676775624 | Mail: info@yellowandred.in

Language: EN KAN

    Follow us :


ಪುರುಷ ವಿದ್ಯಾರ್ಥಿ ನಿಲಯದ ಮಕ್ಕಳಿಗೆ ಹಾಸ್ಟೆಲ್ ನಲ್ಲಿಯೇ ಕೊರೊನಾ ಟೆಸ್ಟ್ ಡಾ ವಿಜಯನರಸಿಂಹ

Posted date: 31 Mar, 2021

Powered by:     Yellow and Red

ಪುರುಷ ವಿದ್ಯಾರ್ಥಿ ನಿಲಯದ ಮಕ್ಕಳಿಗೆ ಹಾಸ್ಟೆಲ್ ನಲ್ಲಿಯೇ ಕೊರೊನಾ ಟೆಸ್ಟ್ ಡಾ ವಿಜಯನರಸಿಂಹ

ಇತ್ತೀಚೆಗೆ ಸಾರ್ವಜನಿಕರು ಆಸ್ಪತ್ರೆಗೆ ಬಂದು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುತ್ತಿರುವುದು ಕಡಿಮೆಯಾಗಿದೆ. ಹಾಗಾಗಿ ಹೆಚ್ಚು ವಿದ್ಯಾರ್ಥಿಗಳಿರುವ ಹಾಸ್ಟೆಲ್ ಗಳಿಗೆ ಲ್ಯಾಬ್ ಟೆಕ್ನಿಷಿಯನ್ ಹಾಗೂ ಸಿಬ್ಬಂದಿಗಳೊಡಗೂಡಿ ಅಲ್ಲಿಯೇ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸಾರ್ವಜನಿಕ ಆಸ್ಪತ್ರೆಯ ಅಧೀಕ್ಷಕ ಡಾ ವಿಜಯನರಸಿಂಹ ತಿಳಿಸಿದರು. ಅವರು ಇಂದು ನಗರದ ಮಹದೇಶ್ವರ ದೇವಾಲಯದ ಬಳಿ ಇರುವ ಡಿ ದೇವರಾಜ ಅರಸು‌ ಮೆಟ್ರಿಕ್ ನಂತರದ ಪುರುಷ ವಿದ್ಯಾರ್ಥಿ ನಿಲಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಸಮಯದಲ್ಲಿ ಖುದ್ದು ಹಾಜರಿದ್ದು ಪರೀಕ್ಷೆ ನಡೆಸಿದರು.


ಮುಂದಿನ ದಿನಗಳಲ್ಲಿ ನಗರದ ಎಲ್ಲಾ ಹಾಸ್ಟೆಲ್ ಗಳಲ್ಲೂ ಕೊರೊನಾ ಪರೀಕ್ಷೆ ಹಮ್ಮಿಕೊಳ್ಳಲಿದ್ದು, ಸ್ಥಳೀಯ ಸಾರ್ವಜನಿಕರು ಸಹ ಬಂದು ಪರೀಕ್ಷೆ ಮಾಡಿಸಿಕೊಳ್ಳಲು ಅವಕಾಶ ನೀಡುತ್ತೇವೆ. ನಂತರ ಶಾಲಾ ಕಾಲೇಜುಗಳಿಗೂ ತೆರಳಿ‌ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಪರೀಕ್ಷೆ ನಡೆಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.


ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಹುರುದುಂಬಿಸಿದ ಡಿವೈಎಸ್ಪಿ ಕೆ ಎನ್ ರಮೇಶ್ ರವರು, ಕೊರೊನಾ ಒಂದು ಮಹಾಮಾರಿಯಾಗಿ ಈಗ ಎಲ್ಲೆಡೆ ಉಲ್ಬಣಿಸುತ್ತಿದೆ. ನಮ್ಮ ಎಚ್ಚರಿಕೆಯಲ್ಲಿ ನಾವಿರಬೇಕು. ನೀವು ಕಾಲೇಜು ಮತ್ತು ಹಾಸ್ಟೆಲ್ ಗೆ ಪ್ರತಿನಿತ್ಯ ಓಡಾಡುತ್ತಿದ್ದು, ಯಾರಿಂದ, ಯಾವಾಗ ಬೇಕಾದರೂ ಕೊರೊನಾ ಬರಬಹುದು. ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.


ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಮೋಹನ್ ಎನ್ ರವರು ಮಾತನಾಡಿ ‌ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೇವೆ ಎಂದು‌ ಮುಕ್ತವಾಗಿ ಓಡಾಡಬಾರದು. ಕಾಲೇಜು, ಹಾಸ್ಟೆಲ್ ಹಾಗೂ ಸಾರ್ವಜನಿಕ ಜಾಗಗಳಲ್ಲೂ ಸಹ ಮಾಸ್ಕ್ ಮತ್ತು ಅಂತರ ಕಾಪಾಡಿಕೊಳ್ಳುವುದು ಮುಖ್ಯ. ಹೊರಗಿನಿಂದ ಬಂದ ತಕ್ಷಣ ತಾವು ಬಟ್ಟೆಗಳನ್ನು ತೊಳೆದು, ಸ್ನಾನ ಮಾಡಿಕೊಂಡು ಶುಭ್ರವಾಗಿ ಇರಬೇಕು. ಆಗ ಕೊರೊನಾ ಎಂಬ ಮಾರಿಯನ್ನು ತಡೆಯಲು ಸಾಧ್ಯವಾಗುತ್ತದೆ ಎಂದರು.


ಕೊರೊನಾ ಪರೀಕ್ಷಾ ಸಮಯದಲ್ಲಿ ಪ್ರಥಮ ದರ್ಜೆ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಂಜುಂಡ ಮತ್ತು ಪತ್ರಕರ್ತ ಗೋ ರಾ ಶ್ರೀನಿವಾಸ, ಶುಶ್ರೂಷಕರಾದ ಶಾಂತಾ, ನಾಝಿಮಾ, ಯೋಗೆಶ್, ಟೆಕ್ನಿಷಿಯನ್ ಸುನಿಲ್ ಮತ್ತು ಹಾಸ್ಟೆಲ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑