Tel: 7676775624 | Mail: info@yellowandred.in

Language: EN KAN

    Follow us :


ಆಧುನಿಕ ಅವಳಿ ನಗರಗಳಾಗಿ ರಾಮನಗರ- ಚನ್ನಪಟ್ಟಣ ಅಭಿವೃದ್ಧಿ ಬೆಂಗಳೂರಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಡಾ.ಸಿ.ಎನ್.ಅಶ್ವತ್ಥನಾರಾಯಣ

Posted date: 06 Apr, 2021

Powered by:     Yellow and Red

ಆಧುನಿಕ ಅವಳಿ ನಗರಗಳಾಗಿ ರಾಮನಗರ- ಚನ್ನಪಟ್ಟಣ ಅಭಿವೃದ್ಧಿ ಬೆಂಗಳೂರಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ರಾಜಧಾನಿ ಬೆಂಗಳೂರು ಹಾಗೂ ಆರಮನೆ ನಗರಿ ಮೈಸೂರು ಮಾರ್ಗದ ಆಯಕಟ್ಟಿನ ಜಾಗದಲ್ಲಿರುವ ರಾಮನಗರ ಮತ್ತು ಚನ್ನಪಟ್ಟಣಗಳನ್ನು ಅತ್ಯಾಧುನಿಕ ಸೌಲಭ್ಯಗಳುಳ್ಳ ಆಧುನಿಕ ಅವಳಿ ನಗರಗಳನ್ನಾಗಿ ಅಭಿವೃದ್ಧಿಪಡಿಸಲು ಸರಕಾರ ಮುಂದಾಗಿದೆ. 


ರಾಮನಗರ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಂಗಳವಾರ‌ದಂದು ಬೆಂಗಳೂರಿನಲ್ಲಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. 


ಬೆಂಗಳೂರು ಅಭಿವೃದ್ಧಿಯ ಮಾದರಿಯನ್ನು ಇಟ್ಟುಕೊಂಡು ಇವೆರಡೂ ಪಟ್ಟಣಗಳನ್ನು ಅಭಿವೃದ್ಧಿಪಡಿಸುವುದು ಸರಕಾರದ ಉದ್ದೇಶವಾಗಿದೆ. ಅತ್ಯುತ್ತಮ ಮೂಲಸೌಕರ್ಯ, ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ವ್ಯವಸ್ಥೆ, ಆಕರ್ಷಕ ವಿಶಾಲ ಉದ್ಯಾನವನಗಳ ನಿರ್ಮಾಣ, ಎಲ್ಲ ರಸ್ತೆಗಳು ಇತಿಹಾಸ ದಾಖಲಿಸಿವುದು, ಕ್ರೀಡಾಂಗಣಗಳ ನಿರ್ಮಾಣ ಸೇರಿದಂತೆ ಅಗತ್ಯವಾದ ಎಲ್ಲಾ ಕೆಲಸಗಳನ್ನು ಕಾಲಮಿತಿಯೊಳಗೆ ಕೈಗೊಂಡು ಮುಗಿಸುವ ಬಗ್ಗೆ ಡಿಸಿಎಂ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. 


ಸಭೆಯ ನಂತರ ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಅವರು; "ಈಗಾಗಲೇ ಸಮಗ್ರ ಅಭಿವೃದ್ಧಿ ಯೋಜನಾ ವರದಿ ಸಿದ್ಧಪಡಿಸಲು 37 ಲಕ್ಷ ರೂ. ಕೊಡಲಾಗಿದೆ.  ಆರೇಳು ತಿಂಗಳಲ್ಲಿ ಈ ಕೆಲಸ ಆಗಲಿದೆ. ಈ ಮೂಲಕ ಸುಸಜ್ಜಿತ ನಗರಗಳ ನಿರ್ಮಾಣಕ್ಕೆ ನಾಂದಿ ಹಾಡಲಿದ್ದೇವೆ" ಎಂದರು. 


*ಪ್ರಾಧಿಕಾರಗಳಿಗೆ ಇನ್ನಷ್ಟು ಶಕ್ತಿ:* 


ರಾಮನಗರ ಮತ್ತು ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರಗಳಿಗೆ ಇನ್ನಷ್ಟು ಶಕ್ತಿ ತುಂಬಲಾಗುವುದು. ಎರಡೂ ಪಟ್ಟಣಗಳ ಆಮೂಲಾಗ್ರ ಅಭಿವೃದ್ಧಿಗೆ ಏನೆಲ್ಲಾ ಅಗತ್ಯವೋ ಎಲ್ಲವನ್ನೂ ಸರಕಾರ ಒದಗಿಸುತ್ತಿದೆ ಎಂದ ಅವರು, ಚನ್ನಪಟ್ಟಣದಲ್ಲಿ ಇನ್ನೊಂದು ಬಸ್‌ ನಿಲ್ದಾಣದ ಅಗತ್ಯವಿದೆ ಎಂಬ ಬೇಡಿಕೆ ಬಂದಿದೆ. ಅದನ್ನೂ ತ್ವರಿತವಾಗಿ ಕಾರ್ಯಗತ ಮಾಡಲಾಗುವುದು ಎಂದರು.


ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸ್ವಚ್ಛಭಾರತ ಪರಿಕಲ್ಪನೆಯಂತೆ ಅವಳಿ ನಗರಗಳ ಸ್ವಚ್ಛತೆಗೆ ಅದ್ಯತೆ ನೀಡಲಾಗುವುದು. ಕಸ ವಿಂಗಡಣೆ ಮತ್ತು ವಿಲೇವಾರಿಗೆ ಒತ್ತು ನೀಡುವುದರ ಜತೆಗೆ, ನಗರಗಳ ಸೌಂದರ್ಯ ಸಂರಕ್ಷಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಶಾಲವಾದ ಉದ್ಯಾನವನಗಳನ್ನು ನಿರ್ಮಾಣ ಮಾಡುವುದರ ಜತೆಗೆ, ಅವುಗಳ ನಿರ್ವಹಣೆಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು. 


ಮುಖ್ಯವಾಗಿ, ಎರಡೂ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಂಪೂರ್ಣವಾಗಿ ಜಾರಿ ಮಾಡಲಾಗುವುದು. ಬೆಂಗಳೂರು ಮಾದರಿಯಲ್ಲಿ ಒಳಚರಂಡಿ ವ್ಯವಸ್ಥೆ ಮಾಡಲಾಗುವುದು. ಇನ್ನು, ನದಿ ಮೂಲಗಳಿಂದ ರಾಮನಗರ-ಚನ್ನಪಟ್ಟಣ ಮಾತ್ರವಲ್ಲದೆ ಇಡೀ ಜಿಲ್ಲೆಯ ಎಲ್ಲಾ ಗ್ರಾಮಗಳ ಎಲ್ಲಾ ಮನೆಗಳಿಗೂ ಪೈಪುಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಪ್ರಗತಿಯಲ್ಲಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು. 


ಸಭೆಯಲ್ಲಿ ಉಪ ಮುಖ್ಯಮಂತ್ರಿಗಳ ಕಾರ್ಯದರ್ಶಿಯೂ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಮುಖ್ಯ ಎಂಜಿನಿಯರ್‌ ಎಸ್.ಎನ್. ದಿನೇಶ್‌  ಇದ್ದರು.


ಸಭೆಯಲ್ಲಿ ಚನ್ನಪಟ್ಟಣ-ರಾಮನಗರ ನಗರ ಸಭೆಗಳ ಆಯುಕ್ತರು, ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರು, ತಾಂತ್ರಿಕ ಅಧಿಕಾರಿಗಳು ಹಾಗೂ ನಗರಸಭೆಗಳ ಅಧಿಕಾರಿಗಳೂ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑