ಡಿಸಿ ಆದೇಶವಿದ್ದರೂ ಸಾರಿಗೆ ನಿಲ್ದಾಣಕ್ಕೆ ತೆರಳದ ಖಾಸಗಿ ಬಸ್ಸುಗಳು. ಟ್ರಾಫಿಕ್ ಜಾಮ್ ಆಗುತ್ತಿರುವ ನಗರದ ಹೈವೇ
- ತಮ್ಮ ಬೇಡಿಕೆಯ ಈಡೇರಿಕೆಗಾಗಿ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಇಂದಿಗೆ ಮೂರು ದಿನಗಳು ಕಳೆದಿವೆ. ಸಾರ್ವಜನಿಕರ ಅನುಕೂಲ ದೃಷ್ಟಿಯಿಂದ ಪರ್ಯಾಯ ವಾಗಿ ಖಾಸಗಿ ಬಸ್ಗಳ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಖಾಸಗಿ ಬಸ್ಗಳು ಹಾಗೂ ಕ್ಯಾಬ್ಗಳು ಸಾರಿಗೆ ಬಸ್ ನಿಲ್ದಾಣದಲ್ಲಿಯೇ ಪ್ರಯಾಣಿಕರನ್ನು ಕರೆದೊಯ್ಯಲು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಆದರೂ ಸಹ ಇದನ್ನು ಗಣನೆಗೆ ತೆಗೆದುಕೊಳ್ಳದ ಖಾಸಗಿ ಬಸ್ ಹಾಗು ಕ್ಯಾಬ್ ಮಾಲೀಕರು ಬಸ್ ನಿಲ್ದಾಣದ ಹೈವೆಯ ರಸ್ತೆ ಯಲ್ಲಿಯೇ ಪ್ರಯಾಣಿಕರನ್ನು ಕರೆದೊಯ್ಯಲು ಸಾಲು ಗಟ್ಟಿ ನಿಲ್ಲಿಸಿಕೊಂಡಿದ್ದಾರೆ.
ಬೆಂಗಳೂರು ಮೈಸೂರು ಹೈವೆಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಖಾಸಗಿ ಬಸ್ಗಳ ನಿಲುಗಡೆಯಿಂದ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಅಲ್ಲದೆ ರಸ್ತೆ ದಾಟುವ ಪ್ರಯಾಣಿಕರು ಹಾಗೂ ಬೇರೆ ವಾಹನ ಸವಾರರಿಗೂ ಸಹ ತೊಂದರೆ ಉಂಟಾಗುತ್ತಿದೆ.
ಸಾರಿಗೆ ನಿಲ್ದಾಣದಲ್ಲಿ ಈ ಕಾರಣಕ್ಕಾಗಿಯೇ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರನ್ನು ನಿಯೋಜಿಸಿದ್ದರೂ ಸಹ ಯಾವುದೇ ಕ್ರಮವನ್ನು ಕೈಗೊಳ್ಳುತ್ತಿಲ್ಲ.
ಸಂಬಂಧಿಸಿದ ಅಧಿಕಾರಿಗಳು ಸಾರಿಗೆ ನೌಕರರ ಮುಷ್ಕರ ಮುಗಿಯುವವರೆಗೂ ಖಾಸಗಿ ಬಸ್ಗಳನ್ನು ಸಾರಿಗೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡಿ, ಪ್ರಯಾಣಿಕರನ್ನು ಕರೆದೊಯ್ಯವಂತೆ ನಿರ್ದೇಶಿ ಸಬೇಕಾಗಿದೆ.
ಈ ನಡುವೆ ಬೆಂಗಳೂರಿಗೆ ಮಾತ್ರ ಹೆಚ್ಚಿನ ವಾಹನಗಳು ಓಡಾಡುತ್ತಿದ್ದು, ಮೈಸೂರು ಕಡೆಗೆ ಕಡಿಮೆ ವಾಹನಗಳಿವೆ. ಮುಖ್ಯವಾಗಿ ನಗರ ಪ್ರದೇಶ ಕಳೆಗಟ್ಟುವುದೇ ಗ್ರಾಮೀಣ ಪ್ರದೇಶದಿಂದ ಬರುವ ಜನರಿಂದ. ಗ್ರಾಮೀಣ ಪ್ರದೇಶಗಳಿಗೆ ಅತಿ ಕಡಿಮೆ ವಾಹನಗಳಿದ್ದು, ಅನೇಕ ಪ್ರಯಾಣಿಕರು ಆಫೆ ಆಟೋಗಳನ್ನು ಅವಲಂಬಿಸಿದ್ದಾರೆ. ಸಂಪೂರ್ಣ ಮಾಹಿತಿ ಪಡೆದು, ಹಳ್ಳಿಗಳ ಕಡೆಯೂ ಖಾಸಗಿ ವಾಹನಗಳ ಸಂಚಾರವನ್ನು ಪ್ರಾರಂಭಿಸಬೇಕಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು