Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರಿ ಹಳ್ಳ ಮುಚ್ಚಿ ಪಟ್ಟಭದ್ರರಿಗೆ ರಸ್ತೆ ಮಾಡಿದ ಕಂದಾಯ ಅಧಿಕಾರಿಗಳು ದೂರು

Posted date: 09 Apr, 2021

Powered by:     Yellow and Red

ಸರ್ಕಾರಿ ಹಳ್ಳ ಮುಚ್ಚಿ ಪಟ್ಟಭದ್ರರಿಗೆ ರಸ್ತೆ ಮಾಡಿದ ಕಂದಾಯ ಅಧಿಕಾರಿಗಳು ದೂರು

ಚನ್ನಪಟ್ಟಣ ತಾಲ್ಲೂಕು, ವಿರೂಪಾಕ್ಷಿಪುರ ಹೋಬಳಿ, ಮಂಗಾಡಹಳ್ಳಿ ಮತ್ತು ಬಲ್ಲಾಪಟ್ಟಣ ಗ್ರಾಮಗಳ ಗಡಿ ಮಧ್ಯೆ ಇರುವ ಸರ್ಕಾರಿ ಹಳ್ಳವನ್ನು ಮುಚ್ಚಿ ರಸ್ತೆ ಮಾಡಿ ಶಿಕ್ಷಾರ್ಹ ಅಪರಾಧ ಎಸೆಗಿರುವ ತಹಸೀಲ್ದಾರ್ ನಾಗೇಶ್, ಡಿ.ಟಿ. ದಿನಕರ್, ಆರ್.ಐ.ರಜತ್, ವಿ.ಎ. ಭರತ್, ಗ್ರಾಮ ಸಹಾಯಕ ಚಿನ್ನಪ್ಪ ಮತ್ತು ಇತರರ ವಿರುದ್ಧ ಕಲಂ 143-120(ಬಿ)-431-434 ಐ.ಪಿ.ಸಿ. ಸೆಕ್ಷನ್ ಅಡಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲು ಮಾಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲು ಸಿ.ಆರ್.ಪಿ.ಸಿ 177 ರ ಅಡಿ ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಿರುವುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಕಂಚನಹಳ್ಳಿ ರವಿಕುಮಾರ್ ಮಾಧ್ಯಮದವರಿಗೆ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಾಡಹಳ್ಳಿ ಗ್ರಾಮದ ಸರ್ವೆ ನಂ. 21 ಮತ್ತು ಸರ್ವೆ ನಂ. 70 ರಲ್ಲಿ ಇರುವ ವಿಶಾಲವಾದ ಗೋಮಾಳ ಮತ್ತು ಗುಡ್ಡಗಾಡು ಪ್ರದೇಶದಿಂದ ಕಣ್ವ ನದಿಯವರೆಗೆ ವಿಶಾಲವಾದ ಸರ್ಕಾರಿ ಹಳ್ಳವಿದ್ದು, ಈ ಭಾಗದಿಂದ ಮಳೆ ನೀರನ್ನು ಶೇಖರಣೆ ಮಾಡಲು ಈ ಹಳ್ಳಕ್ಕೆ ನಾಲ್ಕು ಚೆಕ್‌ಡ್ಯಾಂಗಳನ್ನು ನಿರ್ಮಿಸಲಾಗಿದೆ.

ಈ ಹಳ್ಳಕ್ಕೆ ಹೊಂದಿಕೊಂಡಂತೆ ಇರುವ ಸರ್ವೆ ನಂ. 53 ರ ಜಮೀನಿನ ಮಾಲೀಕರುಗಳಾದ ಶಿವರಾಮು, ಬೊಮ್ಮೇಗೌಡ, ಕಪನಿಗೌಡ ಮತ್ತು ಪುಟ್ಟಸ್ವಾಮಿ ರವರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ವ್ಯವಸಾಯ ಮತ್ತು ಸಾರ್ವಜನಿಕ ಉಪಯೋಗಕ್ಕೆ ಇದ್ದ ಸರ್ಕಾರಿ ಹಳ್ಳವನ್ನು ಈ ಹಿಂದೆ ಆಗಸ್ಟ್-2020 ರಲ್ಲಿ ಈ ಸರ್ಕಾರಿ ಹಳ್ಳವನ್ನು ಮುಚ್ಚಿದ್ದು, ಕ್ರಮಗೊಳ್ಳುವಂತೆ ಚನ್ನಪಟ್ಟಣ ತಹಶೀಲ್ದಾರ್ ಮತ್ತು ಡಿ.ವೈ.ಎಸ್.ಪಿ.ರವರಿಗೆ ಅರ್ಜಿ ಸಲ್ಲಿಸಿರುತ್ತೇನೆ. ಈ ಬಗ್ಗೆ ಯಾವುದೇ ಕ್ರಮಕೈಗೊಳ್ಳದೇ ದಿನಾಂಕ 01-02-2021 ರಂದು ಹಳ್ಳದ ಸುಮಾರು 200 ಮೀಟರ್‌ಗಳಷ್ಟು ಭಾಗವನ್ನು ಸಂಪೂರ್ಣವಾಗಿ ಕಂದಾಯ ಇಲಾಖೆಯ ಅಧಿಕಾರಿಗಳೇ ಮುಂದೆ ನಿಂತು ಸಂಪೂರ್ಣವಾಗಿ ಮುಚ್ಚಿ ಶಿಕ್ಷಾರ್ಹ ಅಪರಾಧ ಎಸಗಿರುತ್ತಾರೆ.

ಆದುದರಿಂದ  ತಹಸೀಲ್ದಾರ್ ನಾಗೇಶ್, ಡಿ.ಟಿ. ದಿನಕರ್, ಆರ್.ಐ.ರಜತ್, ವಿ.ಎ. ಭರತ್, ಗ್ರಾಮ ಸಹಾಯಕ ಚಿನ್ನಪ್ಪ ಮತ್ತು ಇತರರ ವಿರುದ್ಧ ಕಲಂ 143-120(ಬಿ)-431-434 ಐ.ಪಿ.ಸಿ. ಸೆಕ್ಷನ್ ಅಡಿ ಕ್ರಿಮಿನಲ್ ಮೊಕ್ಕದ್ದಮೆ ದಾಖಲು ಮಾಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲು ಸಿ.ಆರ್.ಪಿ.ಸಿ 197 ರ ಅಡಿ ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಅರ್ಜಿ ಸಲ್ಲಿಸಿರುತ್ತೇನೆ ಎಂದು ಅವರು ಉಲ್ಲೇಖಿಸಿದ್ದಾರೆ.

ಸುಪ್ರಿಂ ಕೋರ್ಟ್ ಆದೇಶದಂತೆ 90 ದಿನಗಳ ಒಳಗಾಗಿ ಅನುಮತಿ ನೀಡಲು ಕ್ರಮಕೈಗೊಂಡು ಮುಚ್ಚಿ ರಸ್ತೆ ಮಾಡಿರುವ ಹಳ್ಳವನ್ನು ತೆರವುಗೊಳಿಸಿ ಈ ಭಾಗದಲ್ಲಿ ಚೆಕ್‌ಡ್ಯಾಂಗಳನ್ನು ನಿರ್ಮಾಣ ಮಾಡಿ ನೀರು ಸಂಗ್ರಹಣೆ ಆಗಲು ಕ್ರಮಕೈಗೊಳ್ಳುವಂತೆ ಪತ್ರಿಕಾ ಪ್ರಕಟಣೆ ಮೂಲಕ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಅವರು ಬರೆದದ್ದಾರೆ.

ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑