Tel: 7676775624 | Mail: info@yellowandred.in

Language: EN KAN

    Follow us :


ಡಾಃ ಬಿ.ಆರ್ ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶ ರೂಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ.

Posted date: 15 Apr, 2021

Powered by:     Yellow and Red

ಡಾಃ ಬಿ.ಆರ್ ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶ ರೂಡಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ.

ಡಾ: ಬಿ.ಆರ್. ಅಂಬೇಡ್ಕರ್ ಅವರು ಜೀವನದಲ್ಲಿ ಬಹಳ ಕಷ್ಟ ಅನುಭವಿಸಿ ಭಾರತಕ್ಕೆ ಸಂವಿಧಾನ ನೀಡಿದ್ದಾರೆ. ಅವರು ನೀಡಿರುವ ತತ್ವ  ಮತ್ತು ಆದರ್ಶ ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ 

: ಡಾ: ರಾಕೇಶ್ ಕುಮಾರ್ ಕೆ. ಅವರು ತಿಳಿಸಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಾ: ಬಿ.ಆರ್. ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.


ಶಿಕ್ಷಣವೇ ಅಭಿವೃದ್ಧಿಯ ಮೂಲ ಮಂತ್ರ. ಜೀವನದ ಸಂಕಷ್ಟಕ್ಕೆ  ಶಿಕ್ಷಣ ದಾರಿ ನೀಡುತ್ತದೆ ಎಂದು ನಂಬಿದ್ದ, ಡಾ: ಬಿ.ಆರ್. ಅಂಬೇಡ್ಕರ್ ಅವರು ಜ್ಞಾನರ್ಜನೆಗೆ ಹೆಚ್ಚಿನ ಸಮಯ ಮೀಸಲಿಟ್ಟಿದ್ದರು. ಆಧುನಿಕ ಭಾರತವನ್ನು ಜಾತಿ ಮತ್ತು ಮೇಲು-ಕೀಳುಗಳಂತ ವ್ಯವಸ್ಥೆಯನ್ನು ಮೀರಿ ಕಟ್ಟುವ ಹಾಗೂ ಸಮಾನತೆಯನ್ನು ಎತ್ತಿ ಹಿಡಿಯುವ ಮೂಲಕ ಸಮಾನತೆಯ ಕನಸನ್ನು ಕಂಡಿದ್ದರು. ದೇಶದಲ್ಲಿ ಅಸ್ಪೃಶ್ಯತೆ ಯನ್ನು ದೂರಮಾಡಲು ಶ್ರಮಿಸಿದರು ಎಂದು ತಿಳಿಸಿದರು.


ಭಾರತಕ್ಕೆ 1947 ರಲ್ಲಿ ಸ್ವಾತಂತ್ರ್ಯ ದೊರಕಿತು ಆದರೆ ಅಸ್ಪೃಶ್ಯತೆ ಯಿಂದ  ಸ್ವಾತಂತ್ರ್ಯ ಸಂವಿಧಾನ ನೀಡಿತು.  ಸಂವಿಧಾನವನ್ನು ತಿಳಿದುಕೊಂಡು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. : ಡಾ; ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ, ಬರಹಗಳನ್ನು ಯುವ ಪೀಳಿಗೆ ತಿಳಿದುಕೊಳ್ಳಬೇಕು.ಪ್ರತಿಯೊಬ್ಬರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು,  ಜ್ಞಾನ ಗಳಿಸಬೇಕು ಎಂದರು.


ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಅವರು ಮಾತನಾಡಿ ಡಾ: ಬಿ.ಆರ್. ಅಂಬೇಡ್ಕರ್ ಅವರು ಮಹಾರಾಷ್ಟ್ರ ದ  ಅಂಬೇವಾಡ ಗ್ರಾಮದಲ್ಲಿ ಜನಿಸಿದರು ಅವರು ಬಾಲ್ಯದಲ್ಲಿ ಅಸಮಾನತೆ ಪಿಡುಗನ್ನು ಎದುರಿಸಿದಾಗ ಅವರು ಮೌನಕ್ಕೆ ಜಾರಿ ಸದಾ ಜ್ಞಾನ ಪಡೆಯುವಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಇದಕ್ಕೆ ಸಹಾಯಕವಾಗಿ ನಿಂತ ಅವರ ತಂದೆ ಅವರಿಗೆ ಬಹಳಷ್ಟು ಪುಸ್ತಕಗಳನ್ನು ಗ್ರಂಥಾಲಯದಿಂದ ತಂದುಕೊಡುತ್ತಿದ್ಧರು. ಅವರ ತಂದೆ ಅವರಿಗೆ ವಿದ್ಯಾಭ್ಯಾಸಕ್ಕೆ  ನೀಡಿದ ಪೂರಕ ವಾತಾವರಣ ಅವರನ್ನು ಮಹಾನ್ ವ್ಯಕ್ತಿ, ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ ಯಾಗಿ ರೂಪಿಸಿತು.ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.


ವ್ಯಾಪಾರಿಗಳಿಗೆ ಸಮಯ ಎಂದರೆ ಹಣ, ಅಂಬೇಡ್ಕರ್ ಅವರಿಗೆ ಸಮಯ ಎಂದರೆ ಜ್ಞಾನಾರ್ಜನೆ. 

ಅವರಿಗೆ ಪ್ರಾಣಿಗಳು ಎಂದರೆ ತುಂಬಾ  ಪ್ರೀತಿ, ಪ್ರಾಣಿಗಳು ಮನುಷ್ಯನ ಮೇಲೆ ತೋರಿಸುವ ಪ್ರೀತಿಯನ್ನು ಮನುಷ್ಯ, ಮನುಷ್ಯನ ಮೇಲೆ ತೋರಿಸಿದ್ದರೆ ಯಾವುದೇ ಜನಾಂಗೀಯ ಬೇದ ಬಾವ ಇರುತ್ತಿರಲಿಲ್ಲ ಎಂದು ಡಾ: ಬಿ.ಆರ್. ಅಂಬೇಡ್ಕರ್ ಅವರು ಹೇಳುತ್ತಿದ್ದರು ಎಂದರು. 


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್ ಅವರು ಮಾತನಾಡಿ ಶ್ರೀಮಂತರಾಗಲಿ ಬಡವರಾಗಲಿ ಅವರು ಯಾವುದಾದರೂ ಒಂದು ಪರಿಸ್ಥಿತಿಯಲ್ಲಿ ಅಸಮಾನತೆಯನ್ನು ಎದುರಿಸುತ್ತಾರೆ. ಅಂತಹ ಸಂದರ್ಭದಲ್ಲಿ ಎಲ್ಲರಿಗೂ ನೆನಪಿಗೆ ಬರುವುದೇ ಡಾ: ಬಿ.ಆರ್.ಅಂಬೇಡ್ಕರ್  ಹಾಗೂ ಅವರು ಅಸಮಾನತೆ ವಿರುದ್ದ ನಡೆಸಿದ ಹೋರಾಟ ಎಂದರು.


ಕಾರ್ಯಕ್ರಮದಲ್ಲಿ ‌ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ‌ಇಕ್ರಂ, , ಉಪ ವಿಭಾಗಾಧಿಕಾರಿ ಮಂಜುನಾಥ್ ನಗರಸಭೆ ಆಯುಕ್ತ ನಂದ ಕುಮಾರ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑