Tel: 7676775624 | Mail: info@yellowandred.in

Language: EN KAN

    Follow us :

ರಾಮನಗರ ಜಿಲ್ಲೆಗೆ ತಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನ ನೀಡಲು ಟೊಯೋಟಾ ಕಿರ್ಲೋಸ್ಕರ್‌ ಒಪ್ಪಿಗೆ

Posted date: 30 Apr, 2021

Powered by:     Yellow and Red

ರಾಮನಗರ ಜಿಲ್ಲೆಗೆ ತಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನ ನೀಡಲು ಟೊಯೋಟಾ ಕಿರ್ಲೋಸ್ಕರ್‌ ಒಪ್ಪಿಗೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆಯನ್ನು ಹತ್ತಿಕ್ಕುವ ಉದ್ದೇಶದಿಂದ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಟೊಯೋಟಾ ಕಿರ್ಲೋಸ್ಕರ್‌ ಕಂಪನಿ ಜತೆ ಶುಕ್ರವಾರ ಮಹತ್ವದ ಸಮಾಲೋಚನೆ ನಡೆಸಿದರು. 

ವರ್ಚುಯಲ್‌ ವೇದಿಕೆ ಮೂಲಕ ಕಂಪನಿಯ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್‌ ಜತೆ ಚರ್ಚೆ ನಡೆಸಿದ ಡಿಸಿಎಂ, ರಾಮನಗರ ಜಿಲ್ಲೆಯಲ್ಲಿ ಕೋವಿಡ್‌ ನಿರ್ವಹಣೆಗೆ ಅಗತ್ಯವಾದ ನೆರವನ್ನು ಕಂಪನಿ ವತಿಯಿಂದ ನೀಡುವಂತೆ ಕೋರಿದರು. 

ಈ ಮನವಿಗೆ ಕೂಡಲೇ ಸ್ಪಂದಿಸಿದ ವಿಕ್ರಂ ಕಿರ್ಲೋಸ್ಕರ್‌ ಅವರು, ತತ್‌ಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನಗಳನ್ನು ರಾಮನಗರ ಜಿಲ್ಲೆಗೆ ನೀಡುವುದಾಗಿ ಡಿಸಿಎಂ ಅವರಿಗೆ ತಿಳಿಸಿದರು. 

ಕಂಪನಿಯ ಜತೆ ರಾಮನಗರ ಜಿಲ್ಲಾಡಳಿತ ನಿರಂತರವಾಗಿ ಸಂಪರ್ಕದಲ್ಲಿರುತ್ತದೆ ಎಂದು ಈ ಸಂದರ್ಭದಲ್ಲಿ ಡಿಸಿಎಂ ಅವರು ಟೊಯೋಟಾ ಕಿರ್ಲೋಸ್ಕರ್‌ ಪ್ರತಿನಿಧಿಗಳಿಗೆ ತಿಳಿದರು. 

ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಕೋವಿಡ್‌ ನಿರ್ವಹಣೆಯಲ್ಲಿ ಖಾಸಗಿ ಸಹಭಾಗಿತ್ವವನ್ನು ಹೆಚ್ಚಿಸುವ ಪ್ರಯತ್ನದ ಹಿನ್ನೆಲೆಯಲ್ಲಿ ಈ ಸಭೆ ನಡೆಸಲಾಗಿದೆ. ಟೊಯೋಟಾ ಕಿರ್ಲೋಸ್ಕರ್‌ ಕಡೆಯಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ರಾಮನಗರ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸಲು ಅವರ ನೆರವು ಕೇಳಿದ್ದೇವೆ" ಎಂದರು. 

*ಮಾಗಡಿ ಮತ್ತು ಕನಕಪುರದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷಾ ಘಟಕಗಳ ಸ್ಥಾಪನೆ* ರಾಮನಗರ ಜಿಲ್ಲೆಗೆ 50 ವೆಂಟಿಲೇಟರ್‌ಗಳು ಮತ್ತು 50 ಪ್ಯಾರಾ ಮಲ್ಟಿ ಮಾನಿಟರ್‌ಗಳು, ಆಕ್ಸಿಜನ್‌ ಜನರೇಟರ್‌ಗಳು, 200 ಆಕ್ಸಿಜನ್‌ ಬೆಡ್‌ಗಳು ಬೇಕೆಂದು ನಾವು ಮನವಿ ಮಾಡಿದ್ದೇವೆ. ಈ ಎಲ್ಲ ಬೇಡಿಕೆಗಳಿಗೆ ಕಂಪನಿ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಡಿಸಿಎಂ ತಿಳಿಸಿದರು. 

ನಗರದ ಎಂ.ಎಸ್.ರಾಮಯ್ಯ, ಮೈಸೂರು ರಸ್ತೆಯ ರಾಜರಾಜೇಶ್ವರಿ ಮತ್ತು ಕನಕಪುರ ರಸ್ತೆಯ ದಯಾನಂದ ಸಾಗರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗಳಿಗೆ ತುರ್ತಾಗಿ ಆಕ್ಸಿಜನ್‌ ಬೆಡ್‌ಗಳ ಅಗತ್ಯವಿದೆ. ಈ ಆಸ್ಪತ್ರೆಗಳಲ್ಲಿ ನುರಿತ ವೈದ್ಯಕೀಯ ಸಿಬ್ಬಂದಿ ಇದ್ದು, ಇಂಥ ಹಾಸಿಗೆಗಳ ಮೇಲೆ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಉತ್ತಮ ಚಿಕಿತ್ಸೆ ದೊರೆಯಲಿದೆ. ಸಾರ್ವಜನಿಕರಿಗೆ ಇಂಥಹ ಕಡೆ ಉತ್ತಮ ಚಿಕಿತ್ಸೆ ಕೊಡಿಸುವುದು ಸರಕಾರದ ಉದ್ದೇಶವಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು. 

ಸಭೆಯಲ್ಲಿ ಟೊಯೋಟಾ ಕಿರ್ಲೋಸ್ಕರ್‌ ವತಿಯಿಂದ ಸಂದೀಪ್‌ ಶಾಂತಾರಾಂ ದಲ್ವಿ, ಬಿಡದಿ ಕೈಗಾರಿಕಾ ಪ್ರದೇಶದ ಅಧ್ಯಕ್ಷ ಹೆಗಡೆ ಮುಂತಾದವರು ಇದ್ದರು. 

ಇದಾದ ನಂತರ ಡಿಸಿಎಂ ಅವರು ವರ್ಚುಯಲ್‌ ಮೂಲಕವೇ ಪ್ಲಿಪ್‌ಕಾರ್ಟ್‌ ಪ್ರತಿನಿಧಿಗಳ ಜತೆಯೂ ಮಾತುಕತೆ ನಡೆಸಿದರು.

ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ:  ಉಚಿತ ಕಾನೂನು ನೆರವು ನೀಡಲು ಸಹಾಯವಾಣಿ ಆರಂಭ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ: ಉಚಿತ ಕಾನೂನು ನೆರವು ನೀಡಲು ಸಹಾಯವಾಣಿ ಆರಂಭ

ಕೋವಿಡ್-19 ರ ಎರಡನೇ ಅಲೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನೊಂದವರಿಗೆ ಕಾನೂನು ನೆರವು ಒದಗಿಸಲು ಉಚಿತ ಸಹಾಯವಾಣಿಯನ್ನು ಆರಂಭಿಸಿದೆ.

ಜಿಲ್ಲಾ ಕಾನೂ

ರಾಮನಗರ ಜಿಲ್ಲೆಗೆ ತಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನ ನೀಡಲು ಟೊಯೋಟಾ ಕಿರ್ಲೋಸ್ಕರ್‌ ಒಪ್ಪಿಗೆ
ರಾಮನಗರ ಜಿಲ್ಲೆಗೆ ತಕ್ಷಣವೇ 1 ಕೋಟಿ ರೂ. ಮೌಲ್ಯದ ವೈದ್ಯಕೀಯ ಉತ್ಪನ್ನ ನೀಡಲು ಟೊಯೋಟಾ ಕಿರ್ಲೋಸ್ಕರ್‌ ಒಪ್ಪಿಗೆ

ಬೆಂಗಳೂರು: ಕೋವಿಡ್‌ ಎರಡನೇ ಅಲೆಯನ್ನು ಹತ್ತಿಕ್ಕುವ ಉದ್ದೇಶದಿಂದ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ

ಚನ್ನಪಟ್ಟಣ ನಗರಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದ್ದು, ಅಧಿಕಾರದ ಗದ್ದುಗೆ ತಪ್ಪಿಸಿಕೊಂಡ ಕಾಂಗ್ರೆಸ್ ಹಾಗೂ ತೃಪ್ತಿ ಪಟ್ಟು ಕೊಂಡ ಬಿಜೆಪಿ
ಚನ್ನಪಟ್ಟಣ ನಗರಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆದ್ದು ಬೀಗಿದ್ದು, ಅಧಿಕಾರದ ಗದ್ದುಗೆ ತಪ್ಪಿಸಿಕೊಂಡ ಕಾಂಗ್ರೆಸ್ ಹಾಗೂ ತೃಪ್ತಿ ಪಟ್ಟು ಕೊಂಡ ಬಿಜೆಪಿ

ನಗರಸಭೆಯಲ್ಲಿ 32 ವಾರ್ಡ್ಗಳಿದ್ದು, ಚುನಾವಣಾ ಅವಧಿ ಮುಗಿದ 2 ವರ್ಷಗಳ ನಂತರ ಚುನಾವಣೆ ನಡೆದಿತ್ತು. 31 ವಾರ್ಡ್ಗಳಲ್ಲಿ ಕಾಂಗ್ರೆಸ್, ಜನತಾದಳ, ಬಿಜೆಪಿ, ಆಮ್ ಆದ್ಮಿ, ಎಸ್ ಡಿ ಪಿ ಐ, ಪಕ್ಷೇತರ, ಬಂಡಾಯ ಸೇ

ರಾಮನಗರ ಶೇ 75. ಚನ್ನಪಟ್ಟಣ ಶೇ 70:99 ಮತದಾನ. ಶಾಂತಿಯುತ ಮತದಾನ. ಫಲಿತಾಂಶಕ್ಕಾಗಿ ಕಾದು ನಿಂತ ಚಾತಕ ಪಕ್ಷ(ಕ್ಷಿ)ಗಳು
ರಾಮನಗರ ಶೇ 75. ಚನ್ನಪಟ್ಟಣ ಶೇ 70:99 ಮತದಾನ. ಶಾಂತಿಯುತ ಮತದಾನ. ಫಲಿತಾಂಶಕ್ಕಾಗಿ ಕಾದು ನಿಂತ ಚಾತಕ ಪಕ್ಷ(ಕ್ಷಿ)ಗಳು

ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ನಗರ ಸಭೆಗಳ 62 ವಾರ್ಡ್ಗ ಳಿಗೆ ಇಂದು ಚುನಾವಣೆಯು ನಡೆಯಿತು, ಒಟ್ಟು 1.38 ಲಕ್ಷ ಮತದಾರರು ಮತ ಚಲಾವಣೆಯ ಹಕ್ಕು ಹೊಂದಿದ್ದು, 236 ಅಭ್ಯರ್ಥಿಗಳು ಕಣದಲ್ಲಿ ಇದ್ದರು.

ಮಗಳ ಜನ್ಮ ದಿನಾಚರಣೆಯ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ
ಮಗಳ ಜನ್ಮ ದಿನಾಚರಣೆಯ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ

ರಾಮನಗರ : ಸಾರ್ವಜನಿಕರು ಮಾಸ್ಕ್ ಧರಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹಿರಿಯ ಸಾಹಿತಿ ಪ್ರೊ.ಎಂ. ಶಿವನಂಜಯ್ಯ ತಿಳಿಸಿದರು.

ಸಂಶೋಧಕ ಎಸ್. ರುದ್ರೇಶ್ವರ ಹಾಗೂ ಶಿಕ್ಷಕಿ ಡಿ.ಆರ್. ನೀಲಾಂಬಿಕಾ ದಂಪತಿ ತಮ್ಮ ಮಗಳಾದ ಆರ್. ಯಶ

ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ಚುನಾವಣೆ ನಡೆಸಲು ಮುಂಜಾಗ್ರತ ಕ್ರಮ
ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ಚುನಾವಣೆ ನಡೆಸಲು ಮುಂಜಾಗ್ರತ ಕ್ರಮ

ನಗರ ಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2021 ರ ರಾಮನಗರ ಮತ್ತು ಚನ್ನಪಟ್ಟಣ ನಗರಸಭಾ ವ್ಯಾಪ್ತಿಯಲ್ಲಿ ಏಪ್ರಿಲ್ 27  ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ಕಾರ್ಯ

ನಗರಸಭೆ ಚುನಾವಣೆ: ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಅವಕಾಶ
ನಗರಸಭೆ ಚುನಾವಣೆ: ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಅವಕಾಶ

ಚುನಾವಣಾ ಆಯೋಗವು ಹೊರಡಿಸಿರುವ ವೇಳಾಪಟ್ಟಿಯಂತೆ ರಾಮನಗರ ಹಾಗೂ ಚನ್ಬಪಟ್ಟಣ ನಗರಸಛೆಗೆ ಏಪ್ರಿಲ್ 27 ರಂದು ಮತದಾನವು ನಡೆಯಲಿದೆ. ಮತದಾನಕ್ಕೆ ಒಂದು ಗಂಟೆ ಹೆಚ್ಚುವರಿ ಸಮಯವನ್ನು ಕಲ್ಪಿಸಿದ್ದು, ಮತದಾನವು

ಜನುಮ ದಿನಾಚರಣೆ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ
ಜನುಮ ದಿನಾಚರಣೆ ಅಂಗವಾಗಿ ಮಾಸ್ಕ್ ಹಾಗೂ ಸೋಪ್ ವಿತರಣೆ

ರಾಮನಗರ : ಸಂಶೋಧಕ ಎಸ್. ರುದ್ರೇಶ್ವರ ಹಾಗೂ ಶಿಕ್ಷಕಿ ಡಿ.ಆರ್. ನೀಲಾಂಬಿಕಾ ಅವರು ತಮ್ಮ ಮಗಳಾದ ಆರ್. ಯಶಿಕಾ ಅವಳ ಜನ್ಮ ದಿನದ ಅಂಗವಾಗಿ ತಾಲ್ಲೂಕಿನ ಕೂಟಗಲ್ ಬಳಿ ಇರುವ ಇರುಳಿಗರ ಕಾಲೋನಿಯಲ್ಲಿ ದಿನಾಂಕ

ಅರ್ಹ ಮತದಾರರಿಗೆ ವೇತನ ಸಹಿತ ರಜೆ, ಆದೇಶ ಹೊರಡಿಸಿದ ಸರ್ಕಾರ
ಅರ್ಹ ಮತದಾರರಿಗೆ ವೇತನ ಸಹಿತ ರಜೆ, ಆದೇಶ ಹೊರಡಿಸಿದ ಸರ್ಕಾರ

ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 2 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 2  ಸದಸ್ಯ ಸ್ಥಾನಗಳಿಗೆ

ಕೊರೊನಾ ಹಿನ್ನೆಲೆಯಲ್ಲಿ ಕರ್ಫ್ಯೂ, ಸಂಪೂರ್ಣ ಸ್ತಬ್ಧವಾದ ನಗರ
ಕೊರೊನಾ ಹಿನ್ನೆಲೆಯಲ್ಲಿ ಕರ್ಫ್ಯೂ, ಸಂಪೂರ್ಣ ಸ್ತಬ್ಧವಾದ ನಗರ

ಕೊರೊನಾ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರವೂ ಶುಕ್ರವಾರ ರಾತ್ರಿಯಿಂದ, ಸೋಮವಾರ ಬೆಳಿಗ್ಗೆ ತನಕ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ

Top Stories »  

Top ↑