Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲೆಯ ಮನೆಗಳಿಗೆ ನದಿ ನೀರು ಪೂರೈಕೆ: ಯೋಜನೆಗೆ 3 ತಿಂಗಳಲ್ಲಿ ಡಿಪಿಆರ್‌: ಡಿಸಿಎಂ

Posted date: 16 Jun, 2021

Powered by:     Yellow and Red

ರಾಮನಗರ ಜಿಲ್ಲೆಯ ಮನೆಗಳಿಗೆ ನದಿ ನೀರು ಪೂರೈಕೆ: ಯೋಜನೆಗೆ 3 ತಿಂಗಳಲ್ಲಿ ಡಿಪಿಆರ್‌: ಡಿಸಿಎಂ

ಬೆಂಗಳೂರು: ಪ್ರತಿ ಮನೆಗಳಿಗೂ ನದಿ ಮೂಲದ‌ ನೀರೊದಗಿಸುವ ಜಲಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ಕಾರ್ಯಗತವಾಗುತ್ತಿರುವ ಯೋಜನೆಗೆ ಅಗತ್ಯ ಇರುವ ಜಲಮೂಲಗಳು ರಾಮನಗರ ಜಿಲ್ಲೆಯಲ್ಲಿ ಇವೆ. ಹೀಗಾಗಿ ಯೋಜನೆಯನ್ನು  ಎರಡು ವರ್ಷದೊಳಗೆ ಜಾರಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು. 


ಬೆಂಗಳೂರಿನಲ್ಲಿ ಮಂಗಳವಾರ ಜಲಜೀವನ್‌ ಮಿಷನ್‌ ಅಧಿಕಾರಿಗಳು ಹಾಗೂ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆಗೂಡಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಜಿಲ್ಲೆಗೆ ಯೋಜನೆ ಅಡಿಯಲ್ಲಿ ಪೂರೈಸಬಹುದಾದಷ್ಟು ನದಿ ಜಲ ಸಂಪತ್ತು ಲಭ್ಯವಿದೆ ಎಂಬ ಅಂಶವನ್ನು ಕೇಂದ್ರದ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು. 


ಜಿಲ್ಲೆಯ ನಾಲ್ಕು ತಾಲೂಕುಗಳ 127 ಗ್ರಾಮ ಪಂಚಾಯಿತಿಗಳ 850 ಗ್ರಾಮಗಳಿಗೆ ನೀರೊದಗಿಸಲಾಗುತ್ತದೆ. ಇದರಿಂದ‌ 2,08,544 ಮನೆಗಳ 8,85,520 ಜನರಿಗೆ ಶುದ್ಧ ಕುಡಿಯುವ ನೀರು ಸಿಗಲಿದೆ. 675 ಕೋಟಿ ರೂ. ಬೇಕಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು. 


*3 ತಿಂಗಳಲ್ಲಿ ಡಿಪಿಆರ್* 


ಹದಿನೈದು ದಿನಗಳ ಒಳಗಾಗಿ ಯೋಜನಾ ಸಮೀಕ್ಷಾ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಮೂರು ತಿಂಗಳಲ್ಲಿ ಸಮಗ್ರ ಯೋಜನಾ ವರದಿ (ಡಿಪಿಆರ್)‌ ಸಲ್ಲಿಸುವಂತೆ ಸೂಚಿಸಲಾಗಿದೆ. ಇನ್ನು ಒಂದೂವರೆ ವರ್ಷದೊಳಗೆ ಈ ಯೋಜನೆಯನ್ನು ಪೂರ್ಣಗೊಳಿಸುವ ಉದ್ದೇಶ ಇದೆ. ಇದಕ್ಕೆ ಪೂರಕವಾಗಿ ಮೂಲ ಆದಾಯವಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. 


ಈ ಯೋಜನೆಗೆ ಅಗತ್ಯವಾದ ಜಲಮೂಲವು ನದಿಗಳಿಂದ ಸಿಗುವ ಬಗ್ಗೆ ಕೆಲ ಪ್ರಶ್ನೆಗಳನ್ನು ಜಲಮಿಷನ್‌ ಅಧಿಕಾರಿಗಳು ಎತ್ತಿದ್ದರು. ಆ ಎಲ್ಲ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಾಗಿದ್ದು, ನೀರಿನ ಲಭ್ಯತೆಯ ಬಗ್ಗೆ ವಿವರಣೆ ನೀಡಲಾಗಿದೆ ಎಂದು ಡಿಸಿಎಂ ಹೇಳಿದರು. 


ಮುಖ್ಯವಾಗಿ ರಾಮನಗರ ಮತ್ತು ಮಾಗಡಿ ತಾಲೂಕುಗಳು, ಕನಕಪುರ ತಾಲೂಕಿನ ದೊಡ್ಡ ಮರಳವಾಡಿ ವ್ಯಾಪ್ತಿಯಲ್ಲಿ ಯೋಜನೆ ಕಾರ್ಯಗತವಾಗುತ್ತಿದೆ. ಜಿಲ್ಲೆಯ 2,08,544 ಮನೆಗಳ ಬಳಿಕ ಉಳಿಯುವ ಚನ್ನಪಟ್ಟಣ ತಾಲೂಕಿನ 12,764, ರಾಮನಗರ ತಾಲೂಕಿನ 91,984 ಮನೆಗಳಿಗೆ ನೀರೊದಿಗಿಸುವ ಯೋಜನೆಯನ್ನು ಈ ವರ್ಷವೇ ʼಏಕ ಕಣಿವೆ ಯೋಜನೆʼ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು. 


ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ, ರಾಮನಗರ ಜಿಲ್ಲಾ ಪಂಚಾಯಿತಿ ಸಿಇಓ ಇಕ್ರಂ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಇದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑