Tel: 7676775624 | Mail: info@yellowandred.in

Language: EN KAN

    Follow us :


ರಾಮನಗರದಲ್ಲಿ ರೋಟರಿ-ಬಿಜಿಎಸ್ ಆಸ್ಪತ್ರೆ ಲೋಕಾರ್ಪಣೆ

Posted date: 17 Jun, 2021

Powered by:     Yellow and Red

ರಾಮನಗರದಲ್ಲಿ ರೋಟರಿ-ಬಿಜಿಎಸ್ ಆಸ್ಪತ್ರೆ ಲೋಕಾರ್ಪಣೆ

ರಾಮನಗರ: ಕೋವಿಡ್‌ ಹೊರತುಪಡಿಸಿ ಸಾಮಾನ್ಯ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ರಾಮನಗರ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಿರುವ ನವೀಕೃತ ರೋಟರಿ ಬಿಜಿಎಸ್ ಆಸ್ಪತ್ರೆಯನ್ನು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ ಗುರುವಾರ ಲೋಕಾರ್ಪಣೆ ಮಾಡಿದರು. 


ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅವರು, "ಈ ಆಸ್ಪತ್ರೆ ಮೊದಲೇ ಇತ್ತು. ಈಗ ಅದನ್ನು ಮತ್ತಷ್ಟು ಉತ್ತಮಪಡಿಸಲಾಗಿದೆ. ಸೌಲಭ್ಯಗಳನ್ನು ಹೆಚ್ಚಿಸಲಾಗಿದೆ" ಎಂದರು. 


"ಇಲ್ಲಿ ಈಗ ಐಸಿಯು, ವೆಂಟಿಲೇಟರ್‌ ವ್ಯವಸ್ಥೆ ಇಲ್ಲಿದೆ. ಈ ಆಸ್ಪತ್ರೆಗೆ 15 ವೆಂಟಿಲೇಟರ್‌, ಮಾನಿಟರ್‌ಗಳನ್ನು ನೀಡಲಾಗಿದೆ. ಇನ್ನು 15 ಮಾನೀಟರ್‌ಗಳು ಬೇಕೆಂದು ಕೇಳಿದ್ದಾರೆ. ಅದನ್ನೂ ವೈಯಕ್ತಿಕವಾಗಿ ಒದಗಿಸುತ್ತೇನೆ. ಇನ್ನು ಮುಂದೆ ರಾಮನಗರ ಜಿಲ್ಲೆಯ ಜನರು ಅನಾರೋಗ್ಯ ಉಂಟಾದ ಕೂಡಲೇ ಬೆಂಗಳೂರು ಕಡೆ ಓಡುವ ಅಗತ್ಯವಿಲ್ಲ" ಎಂದು ಉಪ ಮುಖ್ಯಮಂತ್ರಿ ಹೇಳಿದರು. 


ಪ್ರಸ್ತುತ ರಾಮನಗರ ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಪ್ರತ್ಯೇಕ ಕೋವಿಡ್‌ ಆಸ್ಪತ್ರೆ ಇದೆ. ತಾಯಿ ಮಕ್ಕಳ ಅಸ್ಪತ್ರೆ ಆರಂಭಿಸಲಾಗುತ್ತಿದೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬಂದಿದೆ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿ ಅವರಿಗೂ ಜಿಲ್ಲಾ ಕೇಂದ್ರದಲ್ಲಿ ಒಂದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದೇನೆ.

ಬೆಂಗಳೂರಿನಲ್ಲಷ್ಟೇ ಅಲ್ಲ, ವಿದೇಶದಲ್ಲೂ ಸಿಗುವಂಥ ಉತ್ತಮ ಆರೋಗ್ಯ ಸೇವೆ ರಾಮನಗರದಲ್ಲೂ ಸಿಗುತ್ತದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. 


ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀ ಶೇಖರ ಸ್ವಾಮೀಜಿ, ಅನ್ನದಾನೇಶ್ವರನಾಥ ಸ್ವಾಮೀಜಿ, ಬಿಜೆಪಿ ಜಿಲ್ಲಾಧ್ಯಕ್ಷ ಹುಲುವಾಡಿ ದೇವರಾಜು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 


ಜಿಲ್ಲಾಧಿಕಾರಿ ರಾಕೇಶ ಕುಮಾರ, ಸಿಇಒ ಇಕ್ರಂ, ಎಸ್ ಪಿ ಗಿರೀಶ್ ಇದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑