Tel: 7676775624 | Mail: info@yellowandred.in

Language: EN KAN

    Follow us :


ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ, 15 ನೇ ಹಣಕಾಸು ಯೋಜನೆಯಲ್ಲಿ ವೇತನ ನೀಡುವಂತೆ ಆಗ್ರಹ

Posted date: 17 Jun, 2021

Powered by:     Yellow and Red

ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ, 15 ನೇ ಹಣಕಾಸು ಯೋಜನೆಯಲ್ಲಿ ವೇತನ ನೀಡುವಂತೆ ಆಗ್ರಹ

ಚನ್ನಪಟ್ಟಣ: ತಮ್ಮನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸುವುದರ ಜತೆಗೆ 15 ನೇ ಹಣಕಾಸು ಯೋಜನೆಯಲ್ಲಿ ವೇತನವನ್ನು ಪಾವತಿಸುವಂತೆ ಆಗ್ರಹಿಸಿ, ರಾಜ್ಯ ಗ್ರಾ.ಪಂ. ನೌಕರರ ಸಂಘ ಮತ್ತು ಸಿಐಟಿಯು ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಅಯಾಯ ಗ್ರಾ.ಪಂ. ಪಿಡಿಓಗಳ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ‌ ಕಾರ್ಯದರ್ಶಿಗಳಿಗೆ  ಮನವಿ ಸಲ್ಲಿಸಿದ್ದಾರೆ.


ಕರ್ನಾಟಕ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿ ಹಳ್ಳಿಗಳಲ್ಲಿ   ಕೊರಾನ ವೈರಸ್  ಹರಡಿರುವುದರಿಂದ 'ಗ್ರಾಮ

ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕಾರ್ಯಪಡೆ ರಚಿಸಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಸ್ವೀಪರ್, ವಾಟರ್ ಮೆನ್, 

ಕಚೇರಿ ಸಹಾಯಕ, ಬಿಲ್ ಕಲೆಕ್ಟರ್/ಗುಮಾಸ್ತ, ಕಂಪ್ಯೂಟರ್ ಆಫರೇಟರ್ ಇತ್ಯಾದಿ ಸಿಬ್ಬಂದಿಗಳು ಪ್ರತಿ ದಿನ ರಾಜ್ಯದ 6024 ಗ್ರಾಮ

ಪಂಚಾಯತಿಗಳಲ್ಲಿ ಕೊರಾನ ವಾರಿಯರ್ಸ್ ಆಗಿ ಕೆಲಸ ಮಾಡುತ್ತಾ ಕೊರಾನಾಗೆ  ತುತ್ತಾಗಿ ಹಲವರು ಮರಣ ಹೊಂದಿದ್ದಾರೆ ಎಂದು‌ ಮನವಿ ಪತ್ರದಲ್ಲಿ‌ ತಿಳಿಸಿದ್ದಾರೆ.

ಆದ್ದರಿಂದ ಗ್ರಾಮ ಪಂಚಾಯತಿ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ವಿಮೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.


15 ನೇ ಹಣಕಾಸು, ಉದ್ಯೋಗ ಖಾತ್ರಿ ಯೋಜನೆ, ಗ್ರಾಮ  ಪಂಚಾಯಿತಿ ಸ್ವಂತ  ಸಂಪನ್ಮೂಲದಿಂದ ಸಿಬ್ಬಂದಿಗಳಿಗೆ ವೇತನ ನೀಡಲು 25/11/2020 ಮತ್ತು  03/03/2021 ರಂದು ಸರ್ಕಾರ ಆದೇಶ ನೀಡಿದ್ದರೂ ಈ ಅನುದಾನಗಳಿಂದ ಸಾಕಷ್ಟು ಗ್ರಾಮ ಪಂಚಾಯತಿಗಳಲ್ಲಿ ವೇತನ ಪಾವತಿ ಮಾಡದಿರುವ ಕಾರಣ ಸಿಬ್ಬಂದಿಗಳಿಗೆ 8,10 ತಿಂಗಳು ವೇತನ ಸಿಗದೇ ಜೀವನಕ್ಕೆ ಬಹಳ ತೊಂದರೆಯಾಗಿದೆ.


ಬಿಲ್ ಕಲೆಕ್ಟರ್ /ಗುಮಾಸ್ತರಿಂದ ಗ್ರೇಡ್-2  ಕಾರ್ಯದರ್ಶಿ ಮತ್ತು ಲೆಕ್ಕ ¸ ಸಹಾಯಕರ ನೇಮಕಾತಿ ತಡೆ ಹಿಡಿದಿರುವ ಆದೇಶ ವಾಪಸ್ ಪಡೆದು ಬಡ್ತಿ ನೀಡಬೇಕೆಂದು‌ ಒತ್ತಾಯಿಸಿದ್ದಾರೆ.


 ಕೊರಾನಾಗೆ ಒಳಗಾದ ಸಿಬ್ಬಂದಿಗಳಿಗೆ ಔಷಧಿ ವೆಚ್ಚ ಬರಿಸಬೇಕು. ಸುರಕ್ಷಿತ ಕಿಟ್ ನೀಡಬೇಕು, ಕೊರಾನ ವಾರಿಯರ್ ಎಂದು ಘೋಷಿಸಿ ವಿಮೆಗೆ ಒಳಪಡಿಸಬೇಕು. ೧೫ನೇ ಹಣಕಾಸು, ಉದ್ಯೋಗ ಖಾತ್ರಿ ಯೋಜನೆ, ಗ್ರಾಮ ಪಂಚಾಯತಿ ಸ್ವಂತ ಸಂಪನ್ಮೂಲದಿಂದ ಸರ್ಕಾರದ  

ಆದೇಶದಂತೆ ತಕ್ಷಣವೇ ವೇತನ ಪಾವತಿಸಬೇಕು.  ಬಿಲ್ ಕಲೆಕ್ಟರ್ ಗುಮಾಸ್ತ ಸಿಬ್ಬಂದಿಗಳಿಗೆ ಬಡ್ತಿ ನೇಮಕಾತಿ ಆದೇಶವನ್ನು ವಾಪಸ್ ಪಡೆದು ಬಡ್ತಿ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು‌ ಈಡೇರಿಸುವಂತೆ ಮನವಿ ಪತ್ರದಲ್ಲಿ‌ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑