ಮಂಡ್ಯದಲ್ಲಿ ಹನಿಟ್ರ್ಯಾಪ್ ದಂಧೆ. ಮಹಿಳೆ ಮತ್ತು ಚನ್ನಪಟ್ಟಣ ದ ಯುವಕ ಸೇರಿ ಐದು ಮಂದಿ ಪೋಲೀಸರ ಅತಿಥಿ
ಮಂಡ್ಯ ನಗರದಲ್ಲಿ ನಡೆಯುತ್ತಿದ್ದ ಹನಿಟ್ರಾಪ್ ದಂಧೆಯನ್ನು ಕ್ಷಣಾರ್ಧದಲ್ಲಿ ಭೇಧಿಸುವಲ್ಲಿ ಮಂಡ್ಯ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.
ದಂಧೆಯಲ್ಲಿ ತೊಡಗಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಯುವಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಶನಿವಾರ ವರದಿಯಾಗಿದೆ.
ನಗರದ ಚಾಮುಂಡೇಶ್ವರಿ ನಗರ 11 ನೇ ಕ್ರಾಸ್ ನ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಹಿಳೆಯೊಬ್ಬರು ಪ್ರೀತಿ-ಪ್ರೇಮದ ನಾಟಕವಾಡಿ ಸ್ವರ್ಣಸಂದ್ರ ಬಳಿಯಿರುವ ಸರ್ವಿಸ್ ಸೆಂಟರ್ ಉದ್ಯೋಗಿಯೊಬ್ಬರಿಂದ 30 ಸಾವಿರ ಹಣ ದೋಚಿದ್ದಳು.
ಘಟನೆ ಸಂಬಂಧ ಗಿರೀಶ್ ಎಂಬುವವರು ನೀಡಿದ ದೂರಿನ ಮೇರೆಗೆ ಗುತ್ತಲು ಬಡಾವಣೆಯ ರವಿಚಂದ್ರ ಉ ನಾಯಿರವಿ, ಕಾರ್ತಿಕ್, ಕಿರಣ್ ಹಾಗೂ ಚನ್ನಪಟ್ಟಣದ ಮಂಜು ಹಾಗೂ ಮಹಿಳೆಯನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಹಾಗೂ ರವಿಚಂದ್ರ ಇಬ್ಬರು ದಂಪತಿಗಳೆಂದು ಪರಿಚಯಿಸಿಕೊಂಡು ಚಾಮುಂಡೇಶ್ವರಿ ನಗರದ 11 ನೇ ಕ್ರಾಸಿನಲ್ಲಿ ಮನೆಯೊಂದನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರೆಂದು ತಿಳಿದು ಬಂದಿದೆ.
ಮಹಿಳೆ ಗಿರೀಶ್ ಎಂಬುವವರನ್ನು ಪರಿಚಯಿಸಿಕೊಂಡು ಪ್ರೀತಿಪ್ರೇಮದ ನೆಪದಲ್ಲಿ ಕೊತ್ತತ್ತಿ ಬಳಿಯ ದೇವಸ್ಥಾನದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ.
ಅಲ್ಲಿಗೆ ಬಂದ ನಾಲ್ವರು ಆರೋಪಿಗಳು ಬೆದರಿಸಿ ಗಿರೀಶ್ ಬಳಿಯಿದ್ದ ಮೂವತ್ತು ಸಾವಿರ ನಗದು, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೆ ಕಾರ್ಯಾಚರಣೆಗಿಳಿದ ಪೊಲೀಸರು ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದಾರೆ.
ಬೃಹತ್ ನಗರದಲ್ಲೇ, ಅದರಲ್ಲೂ ಜನವಸತಿ ಪ್ರದೇಶಗಳಲ್ಲಿ ಇಂತಹ ದಂಧೆ ನಡೆಯುತ್ತಿರುವುದರಿಂದ ಸುಸಂಸ್ಕೃತರು ಆತಂಕಕ್ಕೀಡಾಗಿದ್ದಾರೆ. ಬೇರೆ ತಾಲ್ಲೂಕಿನಲ್ಲಿ ಇವರು ಈ ದಂಧೆ ನಡೆಸಿದ್ದಾರೆಯೇ ಎಂಬುದನ್ನು ಪೋಲಿಸರು ಪತ್ತೆ ಹಚ್ಚಬೇಕಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು