Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕಿನ ಸುಣ್ಣಘಟ್ಟ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ನಗನಗದು ಮತ್ತು ಮನೆಯ ಸಾಮಾನು ಕಳ್ಳತನ

Posted date: 29 Jul, 2021

Powered by:     Yellow and Red

ತಾಲ್ಲೂಕಿನ ಸುಣ್ಣಘಟ್ಟ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ನಗನಗದು ಮತ್ತು ಮನೆಯ ಸಾಮಾನು ಕಳ್ಳತನ

ಚನ್ನಪಟ್ಟಣ.ಜು.29: ತಾಲ್ಲೂಕಿನ ಸುಣ್ಣಘಟ್ಟ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ನಗನಗದು ಮತ್ತು ಮನೆಯ ಸಾಮಾನು ಕಳ್ಳತನವಾಗಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಸರ್ವೆನಂ 60/2 ಮತ್ತು 33/2 ರ ಜಮೀನಿನಲ್ಲಿ ಹೆಚ್.ಎನ್ ಶಿವಕುಮಾರ್ ಬಿನ್ ಲೇಟ್ ನಾಗರಾಜು ಎಂಬುವವರು ಮನೆ ನಿರ್ಮಿಸಿಕೊಂಡು ವಾಸವಾಗಿದ್ದಾರೆ.

ಜು.26 ರ ಬೆಳಿಗ್ಗೆ ಶಿವಕುಮಾರ್ ಅವರ ಹೆಂಡತಿಯ ತವರುಮನೆ ಕೆರೆಮೇಗಳದೊಡ್ಡಿಗೆ ಸಂಸಾರ ಸಮೇತ ಹೋಗಿದ್ದು, 28 ರ ಬೆಳಿಗ್ಗೆ ಮನೆಗೆ ಬಂದು ನೋಡಿದಾಗ ಬಾಗಿಲು ಮೀಟಿರುವುದು ಕಂಡು ಬಂದಿದ್ದು, ಗ್ರಾಮಾಂತರ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ.

ಪೊಲೀಸರ ಸಮಕ್ಷಮದಲ್ಲಿ ಮನೆಯನ್ನು ಪರಿಶೀಲಿಸಿದಾಗ, ಮನೆಯ ಮುಖ್ಯದ್ವಾರವನ್ನು ಮೀಟಲು ಪ್ರಯತ್ನಿಸಿದ್ದು, ಸಾಧ್ಯವಾಗದ ಕಾರಣ ಮೇಲಂತಸ್ಥಿನ ನೀರಿನ ಟ್ಯಾಂಕ್ ಬಾಗಿಲನ್ನು ಮೀಟಿ, ಒಳಗೆ ಬಂದು ಕಳ್ಳತನ ಮಾಡಲಾಗಿದೆ.


ಕೊಠಡಿಯೊಂದರಲ್ಲಿದ್ದ ಬೀರುವಿನ ಬಾಗಿಲನ್ನು ಒಡೆದು, 1 ಬೆಳ್ಳಿ ಚೊಂಬು, ಬೆಳ್ಳಿ ತಟ್ಟೆ, ಎರಡು ಬೆಳ್ಳಿ ದೀಪಾಲೆಕಂಬ  ಒಟ್ಟು 800 ಗ್ರಾಂ ಇದ್ದು, ಇದರ ಬೆಲೆ 30 ಸಾವಿರ ರೂಗಳಾಗಿದ್ದು. ಹಾಗೂ 50 ಸಾವಿರ ಬೆಲೆ ಬಾಳುವ 25 ಗ್ರಾಂನ ಚಿನ್ನದ 6 ಜೊತೆ ಸಣ್ಣ ಓಲೆಗಳು, 10 ಸಾವಿರ ಚಿಲ್ಲರೆ ಹಣ, 25 ಸಾವಿರ ರೂ ನಗದು, 10 ಸಾವಿರ ಬೆಲೆ ಬಾಳುವ 8 ರೇಷ್ಮೆಸೀರೆಗಳು, 2 ಸಾವಿರ ಬೆಲೆಯ ಹಿತ್ತಾಳೆ ಹಂಡೆ, 3 ಸಾವಿರ ಬೆಲೆಯ ಗ್ಯಾಸ್ ಸಿಲಿಂಡರ್ ನ್ನು ಕದ್ದೊಯ್ದಿದ್ದಾರೆ. ಇದರ ಜೊತೆಗೆ ಮನೆಯ ನಲ್ಲಿಗಳನ್ನೂ ಸಹ ಮುರಿದು, ವಿಕೃತಿ ಮೆರೆದಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶಿವಕುಮಾರ್ ದೂರು ನೀಡಿದ್ದಾರೆ.


ಗ್ರಾಮಾಂತರ ಪೊಲೀಸರು ಹಾಗೂ ಬೆರಳಚ್ಚು ತಜ್ಞರು, ಶ್ವಾನದಳದೊಂದಿಗೆ ಮನೆಯನ್ನು ಪರಿಶೀಲಿಸಿ, ಠಾಣಾ ಮೊಕದ್ದಮೆ 98/2021 ಕಲಂ 454,457,380 ಐಪಿಸಿ ಸೆಕ್ಷನ್ ಅಡಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑