Tel: 7676775624 | Mail: info@yellowandred.in

Language: EN KAN

    Follow us :


ಸಮವಸ್ತ್ರ ತೊಟ್ಟು ಕಾವಿ ಕಾಲಿಗೆ ಬಿದ್ದು, ಬಿ ಎಸ್ ವೈ ಹೊಗಳಿದ ಡಿವೈಎಸ್ಪಿ

Posted date: 13 Sep, 2021

Powered by:     Yellow and Red

ಸಮವಸ್ತ್ರ ತೊಟ್ಟು ಕಾವಿ ಕಾಲಿಗೆ ಬಿದ್ದು, ಬಿ ಎಸ್ ವೈ ಹೊಗಳಿದ ಡಿವೈಎಸ್ಪಿ

ಚನ್ನಪಟ್ಟಣ: ತಾಲ್ಲೂಕಿನ ಕೆರೆಮೇಗಳದೊಡ್ಡಿ ಗ್ರಾಮದ ಕಲ್ಯಾಣ ಮಂಟಪದಲ್ಲಿ, ಶನಿವಾರ ನಡೆದ ವಿರಕ್ತಮಠದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ, ಚನ್ನಪಟ್ಟಣ ಮತ್ತು ಕನಕಪುರ ಉಪವಿಭಾಗದ ಪೋಲಿಸ್ ಅಧಿಕಾರಿ ಕೆ ಎನ್ ರಮೇಶ್ ರವರು ಸಮವಸ್ತ್ರದಲ್ಲೇ ಸ್ವಾಮೀಜಿಗಳ ಕಾಲಿಗೆರಗಿ,  ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರನ್ನು *ಯಡಿಯೂರಪ್ಪಾಜಿ* ಎಂದು ಕರೆಯುವ ಮೂಲಕ ಕಾನೂನನ್ನು ಗಾಳಿಗೆ ತೂರಿ, ಬಿಜೆಪಿ ಪಕ್ಷದ ವಕ್ತಾರನಂತೆ ವರ್ತಿಸಿದ್ದು, ಸಾರ್ವಜನಿಕರು ಮತ್ತು ಇನ್ನಿತರ ರಾಜಕಾರಣಿಗಳ ಪಿತ್ತ ನೆತ್ತಿಗೇರುವಂತೆ ಮಾಡಿರುವುದಲ್ಲದೆ, ಇವರು ರಾಜಕಾರಣಿಯೋ ಅಥವಾ ಪೋಲಿಸ್ ಅಧಿಕಾರಿಯೋ ಎಂಬ ಗೊಂದಲ ಉಂಟು ಮಾಡಿದ್ದಾರೆ.


ಕಳೆದ ಇಪ್ಪತ್ತೈದು ವರ್ಷಗಳ ಹಿಂದೆ ಸನ್ಯಾಸ ಸ್ವೀಕರಿಸಿ, ವಿರಕ್ತ ಮಠದ ಮಠಾಧಿಪತಿಗಳಾಗಿ, ಅಧಿಕಾರ ವಹಿಸಿಕೊಂಡ ಶ್ರೀ ಶಿವರುದ್ರ ಸ್ವಾಮೀಜಿಗಳು ತಮ್ಮ ಮಠದ ಕಲ್ಯಾಣ ಮಂಟಪದಲ್ಲಿ ರಜತಮಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಕೆ ಎನ್ ರಮೇಶ್ ರವರು ಸಮವಸ್ತ್ರದಲ್ಲೇ ಭಾಗವಹಿಸಿದ್ದರು. ಇವರ ಜೊತೆಯಲ್ಲಿ ಪುರ ಠಾಣೆಯ ಆರಕ್ಷಕ ಉಪನಿರೀಕ್ಷಕಿ ಮಮತಾ ರವರು ಸಹ ಕಾರ್ಯನಿಮಿತ್ತ ಪಾಲ್ಗೊಂಡಿದ್ದರು.


ಈ ವೇದಿಕೆಯಲ್ಲಿ ಬೇವೂರು ಮಠದ ಮೃತ್ಯುಂಜಯ ಸ್ವಾಮೀಜಿ, ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ವೇದಿಕೆಯಲ್ಲಿ ಆಸೀನರಾಗಿದ್ದು, ಸಿದ್ದಲಿಂಗ ಸ್ವಾಮೀಜಿಗಳ ಪಾದಕ್ಕೆ ಪೋಲಿಸ್ ಕ್ಯಾಪ್ ಹೊರತು ಪಡಿಸಿ ಸಂಪೂರ್ಣ ಸಮವಸ್ತ್ರದಲ್ಲೇ ಕಾಲಿಗೆ ಎರಗಿದ್ದಾರೆ. ಖಾಕಿಗೆ ಅದರದೇ ಆದಂತಹ ಜವಾಬ್ದಾರಿ ಮತ್ತು ಕಾನೂನುಗಳಿದ್ದು, ಸಮಾಜದ ಎಲ್ಲರೂ ಕಾನೂನಿನ ಕೆಳಗೆ ಬರುವುದರಿಂದ, ಇವರ ನಡೆ ಖಂಡನೀಯವಾಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಜ್ಞಾವಂತ ನಾಗರೀಕರು, ಅಧಿಕಾರಿಗಳು ಡಿವೈಎಸ್ಪಿ ರಮೇಶ್ ರವರ ಈ ನಡೆಯನ್ನು ಖಂಡಿಸಿದ್ದಾರೆ.


ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ರವರು ಜುಲೈ 31 ನೇ ತಾರೀಖಿನಂದು ಆದೇಶವೊಂದನ್ನು ಹೊರಡಿಸಿ, ಪೋಲೀಸರು ಯಾವುದೇ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು. ಸಮವಸ್ತ್ರದಲ್ಲಿ ಇರಬಾರದು. ಸಮಾಜಘಾತುಕ ವ್ಯಕ್ತಿಗಳೊಂದಿಗೆ ಪೋಟೋ ತೆಗೆಸಿಕೊಳ್ಳಬಾರದು, ಠಾಣೆಗಳಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳಬಾರದು. ಇವುಗಳು ಸಮಾಜಕ್ಕೆ ತಪ್ಪು ಸಂದೇಶ ತರುತ್ತವೆ. ಸಾರ್ವಜನಿಕರಿಗೆ ಪೋಲೀಸರ ಮೇಲೆ ಅಪನಂಬಿಕೆ ಉಂಟಾಗುತ್ತದೆ ಎಂಬ ಹಲವಾರು ನಿಬಂಧನೆಗಳನ್ನು ಹೇರಿ ಎಲ್ಲಾ ಠಾಣೆಗಳಿಗೆ ಸುತ್ತೋಲೆ ಹೊರಡಿಸಿದ್ದರು. ಇವರ ಆದೇಶವನ್ನು ಧಿಕ್ಕರಿಸಿದ ಡಿವೈಎಸ್ಪಿ ಕೆ ಎನ್ ರಮೇಶ್ ರವರು ಸಮವಸ್ತ್ರದಲ್ಲೇ ಸ್ವಾಮೀಜಿಗಳ ಕಾಲಿಗೆ ಬಿದ್ದು, ಸನ್ಮಾನ ಮಾಡಿಸಿಕೊಂಡು, ವೇದಿಕೆಯಲ್ಲಿ ಬಿಜೆಪಿ ಕಾರ್ಯಕರ್ತನಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರನ್ನು *ಯಡಿಯೂರಪ್ಪಾಜಿ* ಎಂದು ಹೊಗಳಿ ಹಾಸ್ಯಾಸ್ಪದಕ್ಕೊಳಗಾಗಿದ್ದು ಅಲ್ಲದೆ ಇಡೀ ಇಲಾಖೆಯ ಘನತೆಗೆ ಕುಂದು ತಂದಿದ್ದಾರೆ. ಮೇಲಾಧಿಕಾರಿಗಳು ಇತ್ತೀಚಿನ ಇವರ ನಡವಳಿಕೆಗಳನ್ನು ಗಮನಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑