ಸರಗಳ್ಳರ ಸೆರೆ ಹಿಡಿದ ಎಂ ಕೆ ದೊಡ್ಡಿ ಪೋಲೀಸರು
ಚನ್ನಪಟ್ಟಣ.ಅ.21/21: ತಾಲ್ಲೂಕಿನ ಎಂ ಕೆ ದೊಡ್ಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಾಯಕನಹಳ್ಳಿ ಬಳಿ ತಾಯಿ ಮಗಳು ದ್ವಿಚಕ್ರ ವಾಹನದಲ್ಲಿ ತೆರಳುವಾಗ ದ್ವಿಚಕ್ರ ವಾಹನದಲ್ಲಿ ಬಂದ ಕಳ್ಳರು ಚಿನ್ನದ ಸರವನ್ನು ಕಿತ್ತು ಪರಾರಿಯಾದ ಘಟನೆ ಇತ್ತೀಚಿಗೆ ನಡೆದಿತ್ತು. ಕಳ್ಳತನ ನಡೆದ ಕೆಲ ದಿನಗಳಲ್ಲಿ ಕಾರ್ಯ ಪ್ರವೃತ್ತರಾದ ಚನ್ನಪಟ್ಟಣ ಗ್ರಾಮಾಂತರ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತು ಎಂ ಕೆ ದೊಡ್ಡಿ ಪೋಲೀಸ್ ಠಾಣೆಯ ಉಪನಿರೀಕ್ಷಕಿ ರತ್ನಮ್ಮ ರವರ ನೇತೃತ್ವದಲ್ಲಿ ಮೂರು ಮಂದಿ ಆರೋಪಿ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ಬಂಧನಕ್ಕೊಳ ಗಾಗಿರುವ ಆರೋಪಿಗಳು ನಯಾಜ್ (21) ಮದ್ದೂರು ತಾಲ್ಲೂಕಿನ ಬೆಸರಗಹಳ್ಳಿ, ಹಿಂಭಾಗದ ಆದಿಶಕ್ತಿ ದೇವಾಲಯದ ಬಾಬಾ ಎಂಬುವರ ಮಗ, ಅಯಾಜ್ ಬೇಗ್ ಅಲಿಯಾಸ್, ಅಲಿಯಾಸ್ ತೋಪಿ (21), ಇದೇ ಗ್ರಾಮದ ಮಾನಸ ಹೈಸ್ಕೂಲ್ ರಸ್ತೆಯ ರಿಯಾಜ್ ಬೇಗ್ ಎಂಬುವರ ಮಗ, ತಬೇಜ್ ಬೇಗ್ (23), ವಾಸಿಮ್ ಬಂಧಿತರಾಗಿದ್ದು, ರಿಯಾಜ್ ಬೇಗ್ ಎಂಬ ಆರೋಪಿ ಪೊಲೀಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದಾನೆ. ಇದೇ ತಿಂಗಳು 3 ರಂದು ಈ ಘಟನೆ ನಡೆದಿತ್ತು.
ಹಿನ್ನಲೆ: ತಾಲ್ಲೂಕಿನ ಬೊಮ್ಮನಾಯಕನಹಳ್ಳಿ ಗ್ರಾಮದ ಪ್ರೇಮ ಎಂಬುವರು ತಮ್ಮ ಪುತ್ರಿ ಶ್ವೇತಾಳ ಜೊತೆ ದ್ವಿಚಕ್ರ ವಾಹನದಲ್ಲಿ ಕುಂಬಾರಕಟ್ಟೆಗೆ ಕೊಂಡಕ್ಕೆ ಬಂದು ದೇವಸ್ಥಾನದ ಬಳಿ ತೆರಳುವಾಗ ಒಂದು ದ್ವಿಚಕ್ರವಾಹನ ದಲ್ಲಿ ಬಂದ ಅಪರಿಚಿತರು ಏಕಾಏಕಿ ಪ್ರೇಮಳ ಕೊರಳಿಗೆ ಕೈ ಹಾಕಿ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು.
ಇದು ಸುಮಾರು 31 ಗ್ರಾಂ ಚಿನ್ನದ ಸರವಾಗಿದ್ದು ಇದರ ಬೆಲೆ, 1,15,000 ರೂ ಮೌಲ್ಯವೆಂದು ಅಂದಾಜಿಸ ಲಾಗಿತ್ತು. ಈ ಪ್ರಕರಣದ ಬಗ್ಗೆ ತಾಲ್ಲೂಕಿನ ಎಂ ಕೆ ದೊಡ್ಡಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೋಲೀಸ್ ಉಪವಿಭಾಗಾಧಿಕಾರಿ ಕೆ ಎನ್ ರಮೇಶ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಬಿ. ಶಿವಕುಮಾರ್, ಎಂ ಕೆ ದೊಡ್ಡಿ ಪೊಲೀಸ್ ಠಾಣೆಯ ಪಿಎಸ್ಐ ರತ್ನಮ್ಮ, ಎಎಸ್ಐ ರಾಜು, ಎಎಸ್ಐ ಪರಮಶಿವಯ್ಯ ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು