Tel: 7676775624 | Mail: info@yellowandred.in

Language: EN KAN

    Follow us :


ಐಷಾರಾಮಿ ಕಳ್ಳನನ್ನು ಬಂಧಿಸಿದ ಮಾಗಡಿ ಪೋಲಿಸರು

Posted date: 26 Oct, 2021

Powered by:     Yellow and Red

ಐಷಾರಾಮಿ ಕಳ್ಳನನ್ನು ಬಂಧಿಸಿದ ಮಾಗಡಿ ಪೋಲಿಸರು

ರಾಮನಗರ:ಅ/26/21. ಒಂಟಿ ಮನೆಗಳನ್ನೇ ಗುರಿ ಮಾಡಿಕೊಂಡು ಕನ್ನ ಹಾಕಿ ಐಷಾರಾಮಿ ಜೀವನ ನಡೆಸುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬಂಧಿಸಿರುವ ಮಾಗಡಿ ಪೊಲೀಸರು 11 ಪ್ರಕರಣಗಳನ್ನು ಬೇಧಿಸಿ 36.5 ಲಕ್ಷ ವೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.


ತುಮಕೂರು ಜಿಲ್ಲೆ,  ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿಯ ಜ್ಯೋತಿಪುರ ಗ್ರಾಮದ ರಘು (29) ಬಂಧಿತ ಆರೋಪಿ. ಈತನಿಂದ ನಗದು ಸೇರಿದಂತೆ 36.5 ಲಕ್ಷ ರುಪಾಯಿ ವೌಲ್ಯದ 805 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಕಳೆದ ಜುಲೈ 29 ರಂದು ಮಾಗಡಿ ತಾಲೂಕು ಕೆ.ವಿ.ತಾಂಡ್ಯ ಗ್ರಾಮದ ವಾಸಿ ಶಾರದಮ್ಮ ಕೂಲಿ ಕೆಲಸ ಮುಗಿಸಿಕೊಂಡು ತಮ್ಮ ಮನೆಗೆ ಹಿಂದಿರುಗಿದ್ದಾರೆ. ಮಾಂಗಲ್ಯ ಸರ ಮತ್ತು ಒಂದು ಜೊತೆ ಕಿವಿ ಓಲೆ ಯನ್ನು ಟಿವಿ ಪಕ್ಕದಲ್ಲಿ ಬಿಚ್ಚಿಟ್ಟು ಸ್ನಾನಕ್ಕೆ ಹೋದಾಗ ಕಳ್ಳರು ಒಡವೆಗಳನ್ನು ಕಳ್ಳತನ ಮಾಡಿರುವ ಬಗ್ಗೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಅದೇ ರೀತಿ ಕುದೂರು, ತಾವರೆಕೆರೆ, ರಾಮನಗರ ಟೌನ್ ಹಾಗೂ ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮನೆಗಳ್ಳತನ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳ ಪತ್ತೆಗಾಗಿ ಮಾಗಡಿ ಉಪ ವಿಭಾಗದ ಉಪ ಅಧೀಕ್ಷಕ ಟಿ.ಎ.ಓಂಪ್ರಕಾಶ್  ನೇತೃತ್ವದಲ್ಲಿ ಆರಕ್ಷಕ ನಿರೀಕ್ಷಕ ಬಿ.ರವಿ ಹಾಗೂ ಪಿಎಸ್ಐಎಸ್ ಶ್ರೀಕಾಂತ್ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ರಚಿಸಲಾಗಿತ್ತು.

ಈ ತಂಡ ಆರೋಪಿ ರಘುನನ್ನು ದಸ್ತಗಿರಿ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಮಾಗಡಿ ಠಾಣೆ ವ್ಯಾಪ್ತಿಯ 3, ಕುದೂರು ಠಾಣೆಯ 4, ರಾಮನಗರ ಗ್ರಾಮಾಂತರ ಠಾಣೆಯ 2, ತಾವರೆಕೆರೆ ಹಾಗೂ ರಾಮನಗರ ಪುರ ಠಾಣೆಯ ತಲಾ 1 ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ.


ಆರೋಪಿ ಬೀಗ ಹಾಕಿರುವ ಒಂಟಿ ಮನೆಗಳನ್ನು ಗಮನಿಸಿ ಬೀಗ ತೆಗೆದು ಅಥವಾ ಒಡೆದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಹಣ ಸಂಪಾದಿಸಿ ಐಷಾರಾಮಿ ಜೀವನ ಮಾಡುತ್ತಿದ್ದನು. ಈ ಹಿಂದೆ ತುಮಕೂರು ಜಿಲ್ಲೆಯ ಹೆಬ್ಬೂರು, ತುಮಕೂರು ಗ್ರಾಮಾಂತರ, ಕೊರಟಗೆರೆ, ಕೋರಾ, ಕೊಳಾಲ, ಕ್ಯಾತಸಂದ್ರ ಪೊಲೀಸ್ ಠಾಣೆಗಳಲ್ಲಿನ ಒಟ್ಟು 15 ಕಳ್ಳತನ ಪ್ರಕರಣ ಗಳಲ್ಲಿ ಭಾಗಿಯಾಗಿದ್ದನು. ಈತ ದಸ್ತಗಿರಿಯಾಗಿ ಕಾರಾಗೃಹದಲ್ಲಿದ್ದು, ನಂತರ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದು ಕಳ್ಳತನ ಮುಂದುವರೆಸಿದ್ದನು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ .ಗಿರೀಶ್ ನೆನ್ನೆ ಸುದ್ದಿಗೋಷ್ಠಿಯಲ್ಲಿ  ಪ್ರಕರಣ ಬೇಧಿಸಿದ್ದನ್ನು ವಿವರಿಸಿ ದರಲ್ಲದೆ, ಕಾರ್ಯಾಚರಣೆ ಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಹುಮಾನ ಘೋಷಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑