Tel: 7676775624 | Mail: info@yellowandred.in

Language: EN KAN

    Follow us :


ಕೋವಿಡ್ ಲಸಿಕೆ ನೀಡುವ ಕೆಲಸವನ್ನು ಇನ್ನಷ್ಡು ಚುರುಕುಗೊಳಿಸಿ: ಡಾ: ರಾಕೇಶ್ ಕುಮಾರ್ ಕೆ

Posted date: 04 Dec, 2021

Powered by:     Yellow and Red

ಕೋವಿಡ್ ಲಸಿಕೆ ನೀಡುವ ಕೆಲಸವನ್ನು ಇನ್ನಷ್ಡು ಚುರುಕುಗೊಳಿಸಿ: ಡಾ: ರಾಕೇಶ್ ಕುಮಾರ್ ಕೆ

ರಾಮನಗರ, ಡಿ.04/21. ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯಿಂದ ಯಾರು ವಂಚಿತರಾಗಬಾರದು. ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು. ಈ ಹಿನ್ನಲೆಯಲ್ಲಿ ಸಮೀಕ್ಷೆ ನಡೆಸಿ ಲಸಿಕೆ ಪಡೆಯದೇ ಇರುವವರ ವಿವರ ಕ್ರೋಡೀಕರಿಸಿ ಅವರಿಗೆ ಲಸಿಕೆ ಪಡೆಯುವಂತೆ ಪ್ರೇರೇಪಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.


ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮೊದಲ ಡೋಸ್ 781349 ಜನ ಪಡೆದು ಶೇ 95 ಸಾಧನೆಯಾಗಿದೆ. ಉಳಿದ ಶೇ 5 ಜನರು ಲಸಿಕೆ ಬೇರೆ ಜಿಲ್ಲೆಯಿಂದ ಪಡೆದಿರುವ ಬಗ್ಗೆ ಅಥವಾ ಈ ವರೆಗೂ ಲಸಿಕೆ ಪಡೆದಿಲ್ಲವೋ ಎಂಬುದರ ಬಗ್ಗೆ ನಿಖರ ಮಾಹಿತಿ ಬೇಕಿರುತ್ತದೆ. ಇದಕ್ಕೆ ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸಬೇಕು ಎಂದರು.


*ವಾರ್ಡ್ ವಾರು ಸಮೀಕ್ಷೆ ನಡೆಸಿ:* 

ನಗರ ಪ್ರದೇಶದಲ್ಲಿ ಲಸಿಕೆ ಪಡೆಯದೇ ಇರುವವರ ಮಾಹಿತಿ ಸರಿಯಾಗಿ ದೊರಕುತ್ತಿಲ್ಲ. ಒಂದು ವಾರದೊಳಗಾಗಿ ಮನೆ-ಮನೆ ಸಮೀಕ್ಷೆ ನಡೆಸಿ. ನಗರ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು/ ಶಿಕ್ಷಕರು ನೇಮಿಸಿಕೊಂದು ವರದಿ ನೀಡಬೇಕು ಎಂದು ಸೂಚನೆ ನೀಡಿದರು.


ಜಿಲ್ಲೆಯಲ್ಲಿ ಡಿಸೆಂಬರ್ 3 ರ ವರದಿ ಪ್ರಕಾರ ಎರಡನೇ ಡೋಸ್‌ಗೆ 701196 ಜನರಿಗೆ ಲಸಿಕೆ ನೀಡಬೇಕಿದ್ದು, 588048 ಜನರು ಲಸಿಕೆ ಪಡೆದುಕೊಂಡು ಶೇ 84 ರಷ್ಟು ಸಾಧನೆಯಾಗಿದೆ. ಎರಡನೇ ಡೋಸ್ ಲಸಿಕೆ ಪಡೆಯಲು ಅವಧಿ ಪೂರೈಸಿರುವ 119221 ಜನರು ಲಸಿಕೆ ಪಡೆಯಬೇಕಿರುತ್ತದೆ. 64046 ಗ್ರಾಮೀಣ ಹಾಗೂ 55175 ಜನರು ನಗರ ಪ್ರದೇಶದವರಾಗಿರುತ್ತಾರೆ. ಪ್ರಾಥಮಿಕ ಆರೋಗ್ಯ ಕೇಂದ್ರವಾರು ಲಸಿಕೆ ಪಡೆಯದೇ ಇರುವವರ ಪಟ್ಟಿ ಲಭ್ಯವಿದ್ದು, ಲಸಿಕೆ ಪಡೆಯಲು ಹಿಂಜರಿಯುತ್ತಿರುವ ಪ್ರದೇಶಗಳಲ್ಲಿ ಐ.ಇ.ಸಿ ಚಟುವಟಿಕೆಗಳನ್ನು ಹೆಚ್ಚಿಸಿ. ಕೋವಿಡ್ ಲಸಿಕೆ ನೀಡುವ ಕೆಲಸ ಶೇ 100 ಸಾಧನೆಯಾಗಬೇಕಾದರೆ ಎಲ್ಲಾ ಇಲಾಖೆಗಳ ಸಹಭಾಗಿತ್ವ ಮುಖ್ಯ. ಲಸಿಕೆ ಕೆಲಸಕ್ಕೆ ಪ್ರತಿ ಬುಧುವಾರ ಎಲ್ಲಾ ಇಲಾಖೆಯ ವಾಹನವನ್ನು ನಿಯೋಜಿಸಲಾಗುತ್ತಿದೆ. ನಿಯೋಜನೆಗೊಳ್ಳುವ ವಾಹನಗಳು ನಿಗದಿಯಾಗುವ ಸಮಯಕ್ಕೆ ಸರಿಯಾಗಿ ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದರು.


ಶಾಲಾ/ ಕಾಲೇಜಿನ ವಿದ್ಯಾರ್ಥಿಗಳ ಪೋಷಕರು ಎರಡು ಡೋಸ್ ಲಸಿಕೆ ಪಡೆದುಕೊಳ್ಳಬೇಕು. ಈ ಬಗ್ಗೆ ಸರ್ವೆ ನಡೆಸುವಂತೆ ತಿಳಿಸಲಾಗಿತ್ತು. 3940 ಪೋಷಕರು ಲಸಿಕೆ ಪಡೆಯಲು ಬಾಕಿ ಇರುತ್ತಾರೆ ಎಂದು ಶಿಕ್ಷಣ ಇಲಾಖೆಯವರು ತಿಳಿಸಿರುತ್ತಾರೆ. ಶಿಕ್ಷಕರು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಪೋಷಕರು ಲಸಿಕೆ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಕೈಗಾರಿಕೆ ಇಲಾಖೆಯವರು ಕಾರ್ಖಾನೆಗಳಲ್ಲಿ ಈ ಹಿಂದೆ ನಡೆಸಿದಂತೆ ಎರಡನೇ ಡೋಸ್ ಲಸಿಕೆಗೆ ಶಿಬಿರಗಳನ್ನು ಆಯೋಜಿಸಿ ಎಂದರು.


ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಆರ್.ಸಿ.ಹೆಚ್. ಅಧಿಕಾರಿ ಡಾ: ಪದ್ಮ, ತಹಶೀಲ್ದಾರ್ ವಿಜಯ್ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಶ್ವಿನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑