Tel: 7676775624 | Mail: info@yellowandred.in

Language: EN KAN

    Follow us :


ಶ್ರೀರಂಗ ನೀರಾವರಿ ಯೋಜನೆ ವರ್ಷದಲ್ಲಿ ಪೂರ್ಣ, 72 ಕೆರೆಗಳಿಗೆ ನೀರು

Posted date: 03 Jan, 2022

Powered by:     Yellow and Red

ಶ್ರೀರಂಗ ನೀರಾವರಿ ಯೋಜನೆ ವರ್ಷದಲ್ಲಿ ಪೂರ್ಣ, 72 ಕೆರೆಗಳಿಗೆ ನೀರು

ಚಿಕ್ಕಕಲ್ಯ (ಮಾಗಡಿ ತಾ.): ತಾಲ್ಲೂಕಿನಲ್ಲಿ ದಶಕಗಳಿಂದ ನನೆಗುದ್ದಿಗೆ ಬಿದ್ದಿರುವ ಶ್ರೀರಂಗ ನೀರಾವರಿ ಯೋಜನೆಯನ್ನು ಇನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸಿ, 72 ಕೆರೆಗಳಿಗೆ ನೀರು ತುಂಬಿಸಲಾಗುವುದು. ಈ ಮೂಲಕ ತಾಲ್ಲೂಕಿನ ಸಾವಿರಾರು ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಘೋಷಿಸಿದ್ದಾರೆ.

ತಮ್ಮ ಹುಟ್ಟೂರು ಕೂಡ ಆಗಿರುವ ಚಿಕ್ಕಕಲ್ಯ ಗ್ರಾಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ 60 ಕೋಟಿ ರೂ.ವೆಚ್ಚದ ಜಿಟಿಟಿಸಿ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.


ಮಾಗಡಿ ತಾಲ್ಲೂಕಿನಲ್ಲಿ ಇದುವರೆಗೆ ಶೇ.0.09ರಷ್ಟು ಕೃಷಿ ಜಮೀನಿಗೆ ಮಾತ್ರ ನೀರಾವರಿ ಸೌಲಭ್ಯವಿದೆ. ಇದನ್ನು ಮನಗಂಡು ಶ್ರೀರಂಗ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತಿದೆ. ಇದಕ್ಕೆ ಹಿಂದೆ 250 ಕೋಟಿ ರೂ. ಮೀಸಲಿಡಲಾಗಿತ್ತು. ನಂತರ ಯಡಿಯೂರಪ್ಪನವರ ಅವಧಿಯಲ್ಲಿ ಹೆಚ್ಚುವರಿಯಾಗಿ 175 ಕೋಟಿ ರೂ. ಬಿಡುಗಡೆ ಮಾಡಲಾಯಿತು. ಈ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಈಗ ಮುಗಿಯುವ ಹಂತದಲ್ಲಿದೆ ಎಂದು ಅವರು ವಿವರಿಸಿದರು.


ಮಹಿಳೆಯರ ಸಬಲೀಕರಣದ ಗುರಿಯೊಂದಿಗೆ 700 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕಿನ ಪ್ರತಿಯೊಂದು ಮನೆಗೂ ನದೀಮೂಲದ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. ಮಂಚನಬೆಲೆ ಜಲಾಶಯದಿಂದ ಕಡಬಾ ಮತ್ತು ವೈ,ಜಿ.,ಗುಡ್ಡ ಯೋಜನೆಗಳ ಮೂಲಕ ಮನೆಗಳಿಗೆ ನದೀಮೂಲದ ನೀರು ಹರಿದುಬರಲಿದೆ. ಈ ಯೋಜನೆಯನ್ನು ಕೇವಲ ಒಂದೂವರೆ ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.


*ಕೆಂಪೇಗೌಡ ಸಮಾಧಿ ಅಭಿವೃದ್ಧಿ*

ತಾಲ್ಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ನಾಡಪ್ರಭು ಕೆಂಪೇಗೌಡರ ವೀರಸಮಾಧಿಯನ್ನು 40 ಎಕರೆ ಪ್ರದೇಶದಲ್ಲಿ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ಸಮಾಧಿಯ ಪಕ್ಕದಲ್ಲಿರುವ 30 ಎಕರೆ ಕೆರೆಯನ್ನೂ ಬಳಸಿಕೊಳ್ಳಲಾಗುವುದು. ಹೀಗಾಗಿ ಒತ್ತುವರಿಯಾಗಿದ್ದ 5 ಎಕರೆಯನ್ನು ತೆರವುಗೊಳಿಸಲಾಗಿದೆ. ಅಲ್ಲದೆ, ಯೋಜನೆಗೆ ಇನ್ನೂ 11 ಎಕರೆ ಅಗತ್ಯವಿದೆ. ಈ ಪೈಕಿ ಈಗಾಗಲೇ 6 ಎಕರೆಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಉಳಿದ ಭೂಮಿಯನ್ನು ಶೀಘ್ರವೇ ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.


ಕೆಂಪೇಗೌಡ ಪರಂಪರೆ ಸಂರಕ್ಷಣಾ ಪ್ರಾಧಿಕಾರಕ್ಕೆ 150 ಕೋಟಿ ರೂ. ಮಂಜೂರಾಗಿದ್ದು, ಈಗಾಗಲೇ 100 ಕೋಟಿ ರೂ. ಬಿಡುಗಡೆ ಆಗಿದೆ. ಉಳಿದ 50 ಕೋಟಿ ರೂ. ಸಹ ಸದ್ಯದಲ್ಲೇ ಬಿಡುಗಡೆ ಆಗಲಿದೆ ಎಂದು ಅವರು ನುಡಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕಿನಲ್ಲಿ 100 ಎಕರೆ ವಿಸ್ತೀರ್ಣದಲ್ಲಿ 250 ಕೋಟಿ ರೂ.ವೆಚ್ಚದಲ್ಲಿ ಮೈದಾಳಲಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕ್ಯಾಂಪಸ್, 25 ಕೋಟಿ ರೂ. ವೆಚ್ಚದ ರಾಜ್ಯ ಮುಕ್ತ ವಿವಿ ಪ್ರಾದೇಶಿಕ ಕೇಂದ್ರ ಮತ್ತು ಮೋಟಗಾನಹಳ್ಳಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಆಧುನಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಸೇರಿದಂತೆ ಹತ್ತಾರು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ವೈದ್ಯಕೀಯ ಸಚಿವ ಡಾ.ಸುಧಾಕರ್, ಸಂಸದ ಡಿ.ಕೆ.ಸುರೇಶ್, ಶಾಸಕ ಮಂಜುನಾಥ್, ಸಂಸ್ಕೃತ ವಿವಿ ಕುಲಪತಿ ಪ್ರೊ.ದೇವನಾಥನ್, ಮುಕ್ತ ವಿವಿ ಕುಲಪತಿ ವಿದ್ಯಾಶಂಕರ್, ಆರೋಗ್ಯ ವಿವಿ ಕುಲಪತಿ ಡಾ.ಜಯಕರ ಶೆಟ್ಟಿ ಅಂಕನಹಳ್ಳಿ ಮಠದ ಶ್ರೀಗಳು ಮುಂತಾದವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑