Tel: 7676775624 | Mail: info@yellowandred.in

Language: EN KAN

    Follow us :


ನೂರು ವರ್ಷ ಕಳೆದರೂ ಸಜ್ಜನರು ರಾಜಕಾರಣಕ್ಕೆ ಬರಲಾಗುವುದಿಲ್ಲ. ಸಿ ಎಂ ಲಿಂಗಪ್ಪ

Posted date: 06 Jan, 2022

Powered by:     Yellow and Red

ನೂರು ವರ್ಷ ಕಳೆದರೂ ಸಜ್ಜನರು ರಾಜಕಾರಣಕ್ಕೆ ಬರಲಾಗುವುದಿಲ್ಲ. ಸಿ ಎಂ ಲಿಂಗಪ್ಪ

ಚನ್ನಪಟ್ಟಣ: ರಾಷ್ಟ್ರಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿವೆ.ಅಂದಿನಿಂದಲೂ ರಾಜಕೀಯ ನಡೆಯುತ್ತಲೇ ಇದೆ. ಆರಂಭದಲ್ಲಿ ಸಜ್ಜನಿಕೆಯ ರಾಜಕಾರಣಿಗಳಿದ್ದರು. ಈಗ ಹುಡುಕಬೇಕಾದ ಸ್ಥಿತಿ ಇದೆ. ಇನ್ನೂ ಮುಂದೆ ಶತಮಾನವೇ ಕಳೆದರೂ ಸರಳ, ಸಜ್ಜನಿಕೆಯ ರಾಜಕಾರಣಿಗಳು ಮತ್ತೊಮ್ಮೆ ಈ ರಾಜಕೀಯ ರಂಗಕ್ಕೆ, ಸಮಾಜ ಸೇವೆಗೆ ಬರಲು ಸಾಧ್ಯವೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಹೇಳಿದರು.

ಅವರು ನಗರದ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಿ.ಟಿ.ರಾಮು ಅವರ 25ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಈ ಹಿಂದಿನ ರಾಜಕಾರಣಿಗಳು ಶ್ರೀಗಂಧದ ಕೊರಡಿನಂತೆ ಇದ್ದರು, ಅವರ ಒಳ್ಳೆಯ ಗುಣಗಳನ್ನು ತೇಯ್ದು ಇಂದಿನ ರಾಜಕಾರಣಿಗಳು ಅಳವಡಿಸಿಕೊಳ್ಳಬೇಕಿತ್ತು, ದುರದೃಷ್ಟವಶಾತ್ ಹಣ ಒಳ್ಳೆಯ ಗುಣವನ್ನು, ಆದರ್ಶವಾದಿಗಳನ್ನು ಮೂಲೆಗೆ ತಳ್ಳಿದೆ ಎಂದು ವಿಷಾದಿಸಿದರು. ಆದರ್ಶ ಎಂದರೇನು ಎಂದುಕೇಳು ಸ್ಥಿತಿಗೆ ನಾವು ತಲುಪಿದ್ದೇವೆ ಎಂದು ವಿಷಾದಿಸಿದರು. ಡಿ.ಟಿ.ರಾಮು ಹಾಗೂ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡ ಅವರು, ಶಾಸಕರಾಗಿದ್ದ ಅವಧಿಯಲ್ಲಿ ಪ್ರತಿನಿತ್ಯ ಮರೆಯದೆ ಮದುವೆ, ತಿಥಿ, ಸಾವು, ಸಭೆ, ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದುದು, ಜನರೊಂದಿಗೆ ಇರಿಸಿಕೊಂಡಿದ್ದ ಪ್ರೀತಿ ವಿಶ್ವಾಸವನ್ನು ಎಂದಿಗೂ ಮರೆಯಲಾಗುವುದಿಲ್ಲ. ಕನಕಪುರದ ಗಾಂಧಿ ಕರಿಯಪ್ಪ ಅವರ ಶಿಷ್ಯರಾಗಿ, ರಾಜಕೀಯ ರಂಗಕ್ಕೆ ಜನರ ಬೆಂಬಲದಿಂದ ಪ್ರವೇಶ ಮಾಡಿ ತಾಲೂಕಿನ ಅಭಿವೃದ್ದಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರು ಗತಿಸಿ 25 ವರ್ಷಗಳು ಕಳೆದರೂ ಇಂದಿಗೂ ಅಚ್ಚಳಿಯದೆ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ ಎಂದರು.


ತಮ್ಮ ಮನೆಯ ಕಿಟಕಿಗೆ ಒಂದು ಹೊಸ ಕರ್ಟನ್ ಸಹ ಹಾಕಿಸಿಕೊಳ್ಳದಷ್ಟು ಸರಳವಾಗಿ ಜೀವನ ನಡೆಸಿದ ಡಿ.ಟಿ.ರಾಮು, ಬದುಕಿನುದ್ದಕ್ಕೂ ಆದರ್ಶ ಜೀವನ ನಡೆಸಿದವರು. ಶಿಕ್ಷಕರಾಗಿ, ಶಾಸಕರಾಗಿ, ಹಿರಿಯ ಮುತ್ಸದ್ದಿಗಳ ಮನಗೆದ್ದಿದ್ದರು. ಅವರು ಮಕ್ಕಳಿಗೆ ವಿದ್ಯೆ ಕೊಡುಗೆ ನೀಡಿದರೇ ವಿನಃ ಹಣ ನೀಡಲಿಲ್ಲ, ಇಂದು ಮಕ್ಕಳು ಅವರ ಆದರ್ಶದಂತೆಯೇ ನಡೆದುಕೊಂಡು ಬರುತ್ತಿದ್ದಾರೆ. ರಾಜಕೀಯ ರಂಗಕ್ಕೆ ಬರುವವರು ಡಿ.ಟಿ.ರಾಮು ಅವರ ಆದರ್ಶ ಗುಣಗಳನ್ನು ಪಾಲಿಸಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ನಾನು 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ಡಿ.ಟಿ.ರಾಮು ಅವರನ್ನು ಪಾಠ ಮಾಡುತ್ತಾರೆ ಎಂದು ಶಿಕ್ಷಕರನ್ನಾಗಿ ಸಾರ್ವಜನಿಕ ಶಾಲೆ ಮುಖ್ಯಸ್ಥರು ನಮಗೆ ಪರಿಚಯಿಸಿದ್ದರು. ಆ ದಿಟ್ಟ ನಾಯಕ ಶಾಸಕರಾಗಿ ಮಾಡಿದ ಕೆಲಸಗಳು ನಮಗೆ ಪ್ರೇರಣಾದಾಯಕವಾದವು. ಅವರ ಸರಳತೆ, ಆದರ್ಶಗಳನ್ನು ಅಳವಡಿಸಿಕೊಂಡಿದ್ದೇನೆ. ಅವರಲ್ಲಿನ ಮೃದು ಸ್ವಭಾವ, ಆದರ್ಶ ಹಾಗೂ ನಾಯಕತ್ವ ಗುಣಗಳು ಇಂದಿಗೂ ಅವರನ್ನು ಜನಮಾನಸದಲ್ಲಿ ಉಳಿಸಿವೆ ಎಂದರು.

ತಾಲೂಕಿನಲ್ಲಿ ಶಾಸಕರಾಗಿದ್ದಾಗ ಎಲ್ಲರೊಟ್ಟಿಗೂ ಉತ್ತಮ ಬಾಂಧವ್ಯ ಹೊಂದಿದ್ದೆ, ಎಲ್ಲರ ಕಾಲದಲ್ಲೂ ಯಾವ ಯಾವ ಕೆಲಸಗಳು ತಾಲೂಕಿಗೆ ಆಗಿವೆ ಎಂಬ ಬಗ್ಗೆ ಪುಸ್ತಕ ಹೊರತರುವ ಬಗ್ಗೆ ಚಿಂತನೆ ನಡೆಸಿದ್ದೇನೆ. ತಾಲೂಕಿನ ಅಭಿವೃದ್ದಿಗೆ ಎಲ್ಲರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಡಿ.ಟಿ.ರಾಮು ಅವರ ಜನರ ಮೇಲಿನ ಕಾಳಜಿ, ಕಳಕಳಿ ಸ್ತುತ್ಯಾರ್ಹ. ಅವರ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಸಚಿವ ಎಚ್.ಎಂ.ರೇವಣ್ಣ ಮಾತನಾಡಿ, ತಮ್ಮ ರಾಜಕೀಯ ಜೀವನದ ಆರಂಭದ ದಿನಗಳಲ್ಲಿ ಡಿ.ಟಿ.ರಾಮು ಅವರಿಂದ ಸಾಕಷ್ಟು ಪ್ರಭಾವಿತನಾಗಿದ್ದೆ, ಹೋರಾಟಗಳನ್ನು ಮಾಡುವ ಸಂದರ್ಭದಲ್ಲಿ ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿದ್ದರು, ಅವರ ಜೊತೆಗಿನ ಒಡನಾಟ ಜೀವನದಲ್ಲಿ ಅಚ್ಚಳಿಯದೆ ಉಳಿದುಕೊಂಡಿದೆ, ಮಾಜಿ ಸಿಎಂಗಳಾದ ಎಸ್.ಎಂ.ಕೃಷ್ಣ, ಎಸ್.ಬಂಗಾರಪ್ಪ, ವೀರಪ್ಪಮೋಯ್ಲಿ ಹೀಗೆ ಮಹನೀಯರ ಒಡನಾಡಿಯಾಗಿ ರಾಜಕೀಯ ಕ್ಷೇತ್ರದಲ್ಲಿ ಅದರಲ್ಲೂ ಚನ್ನಪಟ್ಟಣದ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿದುಕೊಂಡಿದೆ ಎಂದರು.


ಸಂದರ್ಭದಲ್ಲಿ ಡಿ.ಟಿ.ರಾಮು ಅವರ ಒಡನಾಡಿಗಳು, ವೈದ್ಯರು, ವಿದ್ಯಾರ್ಥಿಗಳು, ಕಲಾವಿದರನ್ನು ಗುರುತಿಸಿ ಸನ್ಮಾನಿಸಲಾಯಿತು. ಸಾರ್ವಜನಿಕ ಆಸ್ಪತ್ರೆಗೆ ಐದು ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಡಿ.ಟಿ.ರಾಮು ಅವರ ಪತ್ನಿ ವಸುಂಧರಾ ರಾಮು, ಪುತ್ರರಾದ ಸುಭಾಷ್‍ರಾಮ್, ಡಾ.ಭಗತ್‍ರಾಮ್, ಅಶೋಕ್‍ರಾಮ್, ಹರ್ಷರಾಮ್, ಡಿ.ಟಿ.ರಾಮು ಸ್ಮಾರಕ ಪ್ರತಿಷ್ಟಾನದ ಸು.ತ.ರಾಮೇಗೌಡ, ತಮ್ಮಣ್ಣ, ಡಿ.ಟಿ.ತಿಮ್ಮಯ್ಯ, ಹುಲುವಾಡಿ ಸಿದ್ದೇಗೌಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಲವೇಗೌಡ ಸೇರಿದಂತೆ ಹಲವರು ಹಾಜರಿದ್ದರು.

ಇದೇ ವೇಳೆ ಜೂನಿಯರ್ ರಾಜಕುಮಾರ್ ಎಂದೇ ಪ್ರಸಿದ್ದರಾದ ಅಶೋಕ್ ಬಸ್ತಿ ಯವರು ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑