Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಅಗತ್ಯ ಸಿಬ್ಬಂದಿ ನಿಯೋಜನೆ

Posted date: 11 Jan, 2022

Powered by:     Yellow and Red

ರಾಮನಗರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಅಗತ್ಯ ಸಿಬ್ಬಂದಿ ನಿಯೋಜನೆ

ರಾಮನಗರ: ಕೋವಿಡ್ ಮತ್ತು ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆ ಮೇರೆಗೆ ತಕ್ಷಣವೇ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. 


ನೂತನ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ಚಿಕಿತ್ಸಾ ಘಟಕಕ್ಕೆ ಮಂಗಳವಾರ ಭೇಟಿ ನೀಡಿ, ಸಮಗ್ರ ಪರಿಶೀಲನೆ ಸಂದರ್ಭದಲ್ಲಿ  ಸಿಬ್ಬಂದಿ ಕೊರತೆಯ ವಿಷಯವನ್ನು ಗಮನಕ್ಕೆ ತರಲಾಯಿತು. ಕೂಡಲೇ ಬೆಂಗಳೂರಿನ ವೈದ್ಯಕೀಯ ಮತ್ತು ಆರೋಗ್ಯ ಆಯುಕ್ತರೊಂದಿಗೆ ಮಾತನಾಡಿದ ಅವರು ಕ್ರಮಕ್ಕೆ ಸೂಚಿಸಿದರು. 


ಸದ್ಯಕ್ಕೆ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕೊರೋನಾ ಮತ್ತು ಒಮಿಕ್ರಾನ್ ಸೋಂಕು ಪತ್ತೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚು ಮಾಡಿ, ತ್ವರಿತ ಗತಿಯಲ್ಲಿ ಫಲಿತಾಂಶ ದೊರಕಿಸಿಕೊಂಡು, ಕೂಡಲೇ ಸೂಕ್ತ ಚಿಕಿತ್ಸೆ ಆರಂಭಿಸಬೇಕು. ಸಕಲ ವ್ಯವಸ್ಥೆಯನ್ನೂ ಮಾಡಿಕೊಂಡು, ಸನ್ನದ್ಧ ಸ್ಥಿತಿಯಲ್ಲಿರಬೇಕು ಎಂದು ಅವರು ಹೇಳಿದರು. 


ಕೊರೋನಾ ಮತ್ತು ಒಮಿಕ್ರಾನ್ ಸೋಂಕುಗಳನ್ನು ತಡೆಯಲು ಸರಿಯಾದ ಮುನ್ನೆಚ್ಚರಿಕೆ ಮತ್ತು ಪರೀಕ್ಷೆಗಳೇ ಅಗತ್ಯವಾಗಿವೆ. ಈ ನಿಟ್ಟಿನಲ್ಲಿ ಸಾರ್ವಜನಕರಿಗೆ ಸಮರ್ಪಕ ಅರಿವು ಮೂಡಿಸಬೇಕು. ಮಿಕ್ಕಂತೆ, ಇದುವರೆಗೂ ಯಾರು ಲಸಿಕೆ ತೆಗೆದುಕೊಂಡಿಲ್ಲವೋ ಅಂಥವರನ್ನು ಸಂಪರ್ಕಿಸಿ, ಅವರಿಗೆಲ್ಲ ಲಸಿಕೆ ಹಾಕಬೇಕು. 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಮತ್ತು 15 ರಿಂದ 18 ವರ್ಷಗಳ ಒಳಗೆ ಇರುವವರಿಗೆ ಲಸಿಕೆ ಕೊಡಲು ತಕ್ಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು. 


ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸದ್ಯಕ್ಕೆ 66 ಸೋಂಕಿತರು ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅರ್ಹರಿಗೆ ಲಸಿಕೆ ಹಾಕಿರುವುದರಿಂದ ಆತಂಕ ಪಡಬೇಕಾದ ಅಗತ್ಯವಿಲ್ಲ. ಆದರೆ, ಸೋಂಕಿತರು ಹೆಚ್ಚಾಗುವ ಸಂಭವ ಇರುವುದರಿಂದ ಹಾಸಿಗೆಗಳ ಸಾಮರ್ಥ್ಯವನ್ನು ಅದಕ್ಕೆ ತಕ್ಕಂತೆ ಕೂಡಲೇ ಹೆಚ್ಚಿಸಿಕೊಳ್ಳಬೇಕು ಎಂದು ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. 


ದೇಶದಲ್ಲಿ ಈಗಾಗಲೇ 150 ಕೋಟಿ ಡೋಸ್ ಲಸಿಕೆಗಳನ್ನು ಹಾಕಲಾಗಿದ್ದು, ರಾಜ್ಯದಲ್ಲಿ ಈ ಸಂಖ್ಯೆ 9 ಕೋಟಿಯನ್ನು ದಾಟಿದೆ. ಆದ್ದರಿಂದ ಸೋಂಕಿನ ವಿರುದ್ಧ ಪ್ರತಿರೋಧ ಶಕ್ತಿ ಸಹಜವಾಗಿಯೇ ಹೆಚ್ಚಾಗಿರುತ್ತದೆ. ಆದರೂ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಮರೆಯುವಂತಿಲ್ಲ. ಪರಿಸ್ಥಿತಿ ನೋಡಿಕೊಂಡು ಸರಕಾರವು ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅಶ್ವತ್ಥನಾರಾಯಣ ನುಡಿದರು. 


ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ಶಶಿಧರ್,  ಡಿ.ಎಲ್ ಓ ಡಾ: ಮಂಜುನಾಥ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑