Tel: 7676775624 | Mail: info@yellowandred.in

Language: EN KAN

    Follow us :


ಅಧಿಕಾರಿಗಳ ತಾತ್ಸಾರದಿಂದಲೇ ರೈತರ ಮೇಲೆ ದಬ್ಬಾಳಿಕೆ. ರೈತ ಸಂಘ ಆರೋಪ

Posted date: 15 Jan, 2022

Powered by:     Yellow and Red

ಅಧಿಕಾರಿಗಳ ತಾತ್ಸಾರದಿಂದಲೇ ರೈತರ ಮೇಲೆ ದಬ್ಬಾಳಿಕೆ. ರೈತ ಸಂಘ ಆರೋಪ

ರಾಮನಗರ: ನಗರದ ಸರ್ಕಾರಿ ರೇಷ್ಮೇಗೂಡಿನ ಮಾರುಕಟ್ಟೆಯಲ್ಲಿ ಮೊದಲಿನಿಂದಲೂ ರೈತರ ಮೇಲೆ ದಬ್ಬಾಳಿಕೆ, ದೌರ್ಜನ್ಯ, ಅನ್ಯಾಯ ನಡೆಯುವುದು ನಿಂತಿಲ್ಲ. ಅಧಿಕಾರಿಗಳ  ತಾತ್ಸಾರವೇ ಇದಕ್ಕೆ ಮೊದಲ ಕಾರಣ ಎಂದು ರೈತ ಸಂಘದ ಮುಖಂಡರು ದೂರಿದರು. ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ಅಧಿಕಾರಿಗಳನ್ನು ಅವರು ತರಾಟಗೆ ತೆಗೆದುಕೊಂಡರು.


ಇನ್ನೊಂದೆಡೆ ರೀಲರ್ಸ್‌ ಗಳಿಂದ ನಡೆಯುವ ದಬ್ಬಾಳಿಕೆಯಿಂದ ಕೆಲವು ರಾಜ್ಯಗಳು ಸೇರಿದಂತೆ, ರಾಜ್ಯದ ವಿವಿಧೆಡೆಯಿಂದ ರೇಷ್ಮೆ ಗೂಡನ್ನು ತರಲು ರೈತರು ಪ್ರತಿನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ರೈತರ ಮೇಲೆ ನಡೆಯುವ ದಬ್ಬಾಳಿಕೆಯ ಪ್ರಕರಣಗಳು ಮಾತ್ರ ಬೆಳಕಿಗೆ ಬರುತ್ತಿದ್ದು, ಹಲವು ಪ್ರಕರಣಗಳು ಬೆಳಕಿಗೆ ಬರುತ್ತಿಲ್ಲ. ದೂರದಿಂದ ಬರುವ ರೈತರು ಪ್ರಕರಣಕ್ಕೆ ಓಡಾಡಲು ಆಗುವುದಿಲ್ಲವೆಂದು ಹೆದರಿಯೇ ಕೊಟ್ಟಷ್ಟು ತೆಗೆದುಕೊಂಡು ಹೋಗುತ್ತಾರೆ.


ರೈತನ ಮೇಲೆ ರೀಲರ್ ನಡೆಸಿದ ದಬ್ಬಾಳಿಕೆ, ಹಲ್ಲೆ ಯತ್ನದ ವಿಡಿಯೋ ವೈರಲ್ : ರಾಮನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಜನವರಿ 12ರಂದು ಹಾವೇರಿ ಜಿಲ್ಲೆಯ ವಿರೂಪಾಕ್ಷಪ್ಪ ಎಂಬ ರೈತನ ಮೇಲೆ ಸ್ಥಳೀಯ ರೀಲರ್ ಒಬ್ಬರು ಹಲ್ಲೆ ಯತ್ನ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದರ ವಿಡಿಯೊ ವೈರಲ್ ಆಗುತ್ತಿದೆ.

ವಿರೂಪಾಕ್ಷಪ್ಪ ತಂದಿದ್ದ ರೇಷ್ಮೆಗೂಡು ಆನ್‌ಲೈನ್‌ ಹರಾಜಿನಲ್ಲಿ ಪ್ರತಿ ಕೆ.ಜಿ.ಗೆ 550 ರೂ. ದರದಲ್ಲಿ ಮಾರಾಟ ಆಗಿತ್ತು. ಈ ಹರಾಜು ಪಡೆದಿದ್ದ ರೀಲರ್ ರೈತನ ಬಳಿ ಬಂದು ‘ನಾನು ತಪ್ಪಾಗಿ ಪ್ರತಿ ಕೆ.ಜಿ.ಗೆ 550 ರೂ. ದರ ನಮೂದು ಮಾಡಿದ್ದೇನೆ. ಪ್ರತಿ ಕೆ.ಜಿ.ಗೆ 100 ರೂ. ನರಂತೆ ಹಣ ಕಡಿತ ಮಾಡಿ ಉಳಿದಿದ್ದನ್ನು ಕೊಡುತ್ತೇನೆ. ಹಾಗೆಯೇ ವೇಸ್ಟೇಜ್‌ ಲೆಕ್ಕದಲ್ಲಿ 4 ಕೆ.ಜಿ. ಗೂಡಿನ ಹಣ ಕೊಡುವುದಿಲ್ಲ’ ಎಂದು ತಿಳಿಸಿದ್ದಾರೆ.

ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ವಿರೂಪಾಕ್ಷಪ್ಪ ‘ಹಾಗೆ ಮಾಡಬೇಡಿ. ಬೇಕಿದ್ದರೆ ನಿಮ್ಮ ಹರಾಜು ಹಿಂಪಡೆಯಿರಿ’ ಎಂದು ರೀಲರ್‌ಗೆ ಕೈ ಮುಗಿದಿದ್ದರು. ಈ ಸಂದರ್ಭ ರೀಲರ್‌ ಮತ್ತವರ ಬೆಂಬಲಿಗರು ವಿರೂಪಾಕ್ಷಪ್ಪ ಅವರನ್ನು ನಿಂದಿಸಿ, ಹಲ್ಲೆಗೂ ಯತ್ನಿಸಿದ್ದರು ಎಂದು ದೂರಲಾಗಿದೆ.


ಐಜೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು: ರೈತನ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ರಾಮನಗರದ ಟಿಪ್ಪು ನಗರ ನಿವಾಸಿ ಮುನೀರ್ ಅಹಮ್ಮದ್ ಎಂಬುವರ ವಿರುದ್ಧ ರಾಮನಗರ ರೇಷ್ಮೆಗೂಡು ಮಾರುಕಟ್ಟೆ ಅಧಿಕಾರಿಗಳು ಐಜೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೋಲೀಸರೂ ಸಹ ಎಫ್ಐಆರ್ ಮಾಡದೆ ಕೇವಲ ಎನ್ ಸಿ ಆರ್ ದಾಖಲಿಸಿದ್ದು ಎಲ್ಲಾ ಅಧಿಕಾರಿಗಳು ರೈತರಿಗೆ ಅನ್ಯಾಯ ಮಾಡುವವರೇ ಆಗಿದ್ದಾರೆ ಎಂದು ಅವರು ದೂರಿದ್ದಾರೆ.


ಮನವಿ: ರಾಮನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ರೈತನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ ರೀಲರ್‌ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ರೈತ ಸಂಘಟನೆಗಳ ಮುಖಂಡರು ಮಾರುಕಟ್ಟೆ ಅಧಿಕಾರಿಗಳಿಗೆ ಜ.14ರ ಶುಕ್ರವಾರ ಮನವಿ ಸಲ್ಲಿಸಿದರು.

‘ಜ. 12ರಂದು ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಹಾವೇರಿ ರೈತ ವಿರೂಪಾಕ್ಷಪ್ಪ ಎಂಬುವರ ಮೇಲೆ ರೀಲರ್ ಒಬ್ಬರು ಹಲ್ಲೆಗೆ ಯತ್ನಿಸಿದ್ದಾರೆ. ಮಾರುಕಟ್ಟೆಯಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ರೀಲರ್‌ಗಳ ಜೊತೆ ಅಧಿಕಾರಿಗಳೇ ಶಾಮೀಲಾಗಿದ್ದಾರೆ’ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.


ರೀಲರ್ ಪರವಾನಿಗಿಯನ್ನು ರದ್ದುಪಡಿಸಿ: ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಶುಕ್ರವಾರ ಮಾರುಕಟ್ಟೆ ಅಧಿಕಾರಿಗಳು, ರೈತರು ಹಾಗೂ ಪೊಲೀಸರ ಸಭೆ ನಡೆಯಿತು. ‘ಘಟನೆಗೆ ಕಾರಣನಾದ ರೀಲರ್‌ನ ಪರವಾನಗಿಯನ್ನು ರದ್ದುಪಡಿಸಬೇಕು. ಅಧಿಕಾರಿಗಳು ರೀಲರ್‌ಗಳ ಸಭೆ ಕರೆದು ರೈತರೊಡನೆ ಸೌಜನ್ಯದಿಂದ ವರ್ತಿಸುವಂತೆ ತಿಳಿಸಬೇಕು’ ಎಂದು ಸಭೆಯಲ್ಲಿ ರೈತ ಮುಖಂಡರು ಆಗ್ರಹಿಸಿದರು.


‘ಮಾರುಕಟ್ಟೆಯಲ್ಲಿನ ಕೆಲವು ಸಿಬ್ಬಂದಿ ರೀಲರ್‌ಗಳೊಂದಿಗೆ ಶಾಮೀಲಾಗಿ ರೈತರನ್ನು ವಂಚಿಸುತ್ತಿದ್ಧಾರೆ. ಈ ಸಿಬ್ಬಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಬೇಕು. ಮಾರುಕಟ್ಟೆಯಲ್ಲಿ ರೈತರಿಗೆ ರಕ್ಷಣೆ ಒದಗಿಸಿಕೊಡಬೇಕು. ಇಲ್ಲಿಯೇ ಪೊಲೀಸ್ ಉಪ ಠಾಣೆ ತೆರೆಯಬೇಕು. ಗೂಡಿನ ಹರಾಜು ಹಣವನ್ನು ರೈತರ ಬ್ಯಾಂಕ್ ಖಾತೆಗೆ ಬಿಡ್ ಆದ ತಕ್ಷಣ ನೇರವಾಗಿ ಹಾಕಬೇಕು’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚೀಲೂರು ಮುನಿರಾಜು ಒತ್ತಾಯಿಸಿದರು.

ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಕೆ. ಮಲ್ಲಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎನ್. ರಾಜು, ಪುಟ್ಟಸ್ವಾಮಿ, ಕಾರ್ಯಾಧ್ಯಕ್ಷ ಕೃಷ್ಣಯ್ಯ, ಮುಖಂಡರಾದ ಶಶಿಕುಮಾರ್, ರಾಮೇಗೌಡ, ರವಿ, ಮರಿಯಪ್ಪ, ಕುಮಾರ್, ತಿಮ್ಮೇಗೌಡ ಇತರರು ಉಪಸ್ಥಿತರಿದ್ದರು.


ಸಮಾನ ಮನಸ್ಕರ ಸಭೆ ಕರೆಯಲಿ: ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ರೈತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಬಗ್ಗೆ ಚರ್ಚಿಸಲು ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಾನ ಮನಸ್ಕರ ಸಭೆ ಕರೆಯಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಸಮಾನ ಮನಸ್ಕರ ಸಹಭಾಗಿತ್ವ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯರು ಮಾರುಕಟ್ಟೆ ಉಪ ನಿರ್ದೇಶಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಮಾರುಕಟ್ಟೆಯಲ್ಲಿ ಸದಾ ರೈತರು ಆತಂಕದಲ್ಲೇ ಇರುವಂತಹ ಪರಿಸ್ಥಿತಿ ಇದೆ. ಕಳ್ಳತನ, ನಿಗದಿಯಾದ ಬೆಲೆಗಿಂತ ಕಮ್ಮಿ ಬೆಲೆ ನೀಡಲು ಚೌಕಾಶಿ ಘಟನೆಗಳು ಸಾಮಾನ್ಯವಾಗಿವೆ. 120 ಸಿಬ್ಬಂದಿ ಇರಬೇಕಾದ ಕಡೆ ಕೇವಲ 12–13 ಸಿಬ್ಬಂದಿ ಇದ್ದಾರೆ. ಹೀಗಾಗಿ, ನಾಜೂಕಿನ ಕಳ್ಳರನ್ನು ಹಿಡಿಯುವುದೇ ಸಮಸ್ಯೆಯಾಗಿದೆ. ಸಿ.ಸಿ.ಟಿ.ವಿಗಳು ಸಹ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು.

ಸಂಘಟನೆಯ ಮುಖಂಡರಾದ ಸಿ. ಪುಟ್ಟಸ್ವಾಮಿ, ನಂಜಪ್ಪ, ಧರಣೀಶ್ ರಾಂಪುರ, ಆರ್. ರಾಜಶೇಖರ್, ಸತೀಶ್ , ಶಿವಕುಮಾರ್, ಪ್ರಕಾಶ್ ಬೈರಾಪಟ್ಟಣ ಇತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑