Tel: 7676775624 | Mail: info@yellowandred.in

Language: EN KAN

    Follow us :


ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ರವರು ನನ್ನ ಗೆಲುವಿಗೆ ಮುನ್ನುಡಿ ಬರೆಯಲು ಆಶೀರ್ವದಿಸಿದ್ದಾರೆ

Posted date: 19 May, 2022

Powered by:     Yellow and Red

ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ರವರು ನನ್ನ ಗೆಲುವಿಗೆ ಮುನ್ನುಡಿ ಬರೆಯಲು ಆಶೀರ್ವದಿಸಿದ್ದಾರೆ

ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಮಂತ್ರಿ ಸೇರಿದಂತೆ ಕ್ಷೇತ್ರದಲ್ಲಿ ಈಗಾಗಲೇ ಇಬ್ಬರು ಘಟಾನುಘಟಿ ನಾಯಕರಿದ್ದಾರೆ, ಅವರ ಜೊತೆ ಸೆಣೆಸಲು ನಾಯಕರಾದ ಚನ್ನಪಟ್ಟಣ: ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಮಂತ್ರಿ ಸೇರಿದಂತೆ ಕ್ಷೇತ್ರದಲ್ಲಿ ಈಗಾಗಲೇ ಇಬ್ಬರು ಘಟಾನುಘಟಿ ನಾಯಕರಿದ್ದಾರೆ, ಅವರ ಜೊತೆ ಸೆಣೆಸಲು ನಾಯಕರಾದ ಡಿ ಕೆ ಶಿವಕುಮಾರ್ ಮತ್ತು ಡಿ ಕೆ ಸುರೇಶ್ ರವರು ನನ್ನ ಗೆಲುವಿಗೆ ಮುನ್ನುಡಿ ಬರೆಯಲು ಆಶೀರ್ವದಿಸಿದ್ದಾರೆ. ಕ್ಷೇತ್ರದಲ್ಲಿರುವ ಕಾಂಗ್ರೆಸ್ ಮುಖಂಡರು, ನನ್ನ ಹಿತೈಷಿಗಳು ಹಾಗೂ ಮತದಾರರು ನನ್ನ ಜೊತೆಗಿದ್ದಾರೆ ಹಾಗಾಗಿ ನಾನು

ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಶತಾಯಗತಾಯ ಗೆಲ್ಲಲೇಬೇಕು ಎಂದು ಕ್ಷೇತ್ರಕ್ಕೆ ಬಂದಿದ್ದು, ಜನರ ಆಶಿರ್ವಾದದಿಂದ ಗೆದ್ದೇ ಗೆಲ್ಲುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಪ್ರಸನ್ನ ಪಿ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಾಂಗ್ರೆಸ್ ನಡಿಗೆ ಹಳ್ಳಿ ಕಡೆಗೆ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ನಾನು ನನ್ನ ಕ್ಷೇತ್ರಕ್ಕೆ ಸೋಲಲು ಬಂದಿಲ್ಲ. ಗೆದ್ದೇ ಗೆಲ್ಲಬೇಕು ಎಂದು ಹಠತೊಟ್ಟು ಕ್ಷೇತ್ರಕ್ಕೆ ಬಂದಿದ್ದೇನೆ. ಯಾವುದೇ ಕಾರಣಕ್ಕೂ ನಾನು ಸೋಲು ಒಪ್ಪಿಕೊಳ್ಳುವವನೂ ಅಲ್ಲಾ ಸೋಲುವವನೂ ಅಲ್ಲಾ. ಕಾಂಗ್ರೆಸ್‍ನಲ್ಲಿ ಸಶಕ್ತ ಕಾರ್ಯಕರ್ತರ ಪಡೆಯೇ ಇದ್ದು, ದೇವರು ಮತ್ತು ಜನರ ಆಶಿರ್ವಾದದಿಂದ ಗೆದ್ದೇ ಗೆಲ್ಲುತ್ತೇನೆ ಎಂಬ ಭರವಸೆ ಇದೆ ಎಂದರು.


*ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ:*

ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಕಾಂಗ್ರೆಸ್‍ನಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಕೊರತೆಯೇನು ಇಲ್ಲ. ಕೆಲ ಕಾಲದಿಂದ ನಾಯಕತ್ವದ ಕೊರೆತೆ ಇದ್ದ ಕಾರಣ ಹೊರಗಿನವರಿಗೆ ಮಣೆ ಹಾಕಲಾಗಿತ್ತು. ಪ್ರತಿ ಚುನಾವಣೆಯಲ್ಲೂ ಬೇರೆಬೇರೆ ನಾಯಕರಿಗೆ ಟಿಕೆಟ್ ನೀಡಲಾಗಿತ್ತು ಆದ್ದರಿಂದ ಪಕ್ಷ ಸಂಘಟನೆ ಕುಂಠಿತಗೊಂಡಿತ್ತು. ಮುಂದಿನ ದಿನಗಳಲ್ಲಿ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಪಕ್ಷವನ್ನು ಬಲಿಷ್ಠಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು.


*ಕಾಂಗ್ರೆಸ್ ಪಕ್ಷ ಸಂಘಟನೆ ಒತ್ತು:*

ಪಕ್ಷ ಸಂಘಟನೆಯ ಉದ್ದೇಶದಿಂದ ಕಾಂಗ್ರೆಸ್ ನಡಿಗೆ ಹಳ್ಳಿಗಳ ಕಡೆಗೆ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುವುದು. ಮೊದಲ ಭೇಟಿಯನ್ನು ಬಿ ವಿ ಹಳ್ಳಿ ಗ್ರಾಮ ಪಂಚಾಯತಿಗೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರನ್ನು ಜೊತೆಯಲ್ಲಿ ಕರೆದುಕೊಂಡು ಪಕ್ಷ ಸಂಘಟನೆ ಮಾಡಲಾಗುವುದು ಎಂದು ತಿಳಿಸಿದರು.


*ವರಿಷ್ಠರ ಸೂಚನೆಯಂತೆ ಸಂಘಟನೆ:*

ಕಾಂಗ್ರೆಸ್ ವರಿಷ್ಠರು ಪಕ್ಷ ಸಂಘಟನೆ ಮಾಡುವಂತೆ ಸೂಚಿಸಿದ್ದು, ಅದರಂತೆ ಪಕ್ಷ ಸಂಘಟನೆಯ ಕೆಲಸ ಮಾಡುತ್ತಿದ್ದೇನೆ. ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಾಂಗ್ರೆಸ್‍ನ ಎಲ್ಲಾ ಹಿರಿಯ ಕಿರಿಯ ಮುಖಂಡರನ್ನು ಭೇಟಿ ಮಾಡಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಎಲ್ಲರ ಸಲಹೆ ಸೂಚನೆಯನ್ನು ಸ್ವೀಕರಿಸಿ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇನೆ. ವರ್ಷದೊಳಗೆ ಪಕ್ಷವನ್ನು ಬಲಗೊಳಿಸುತ್ತೇನೆ. ವರಿಷ್ಠರು ನನ್ನ ಕೆಲಸವನ್ನು ಗುರುತಿಸಿ ಅವಕಾಶ ನೀಡುತ್ತಾರೆ ಎಂಬ ಭರವಸೆ ಇದೆ ಎಂದರು.


*ನನ್ನ ಜನ ಬೆಂಬಲಿಸುತ್ತಾರೆ:*

ನಾನು ಸಹ ಇದೆಸ ತಾಲೂಕಿನವನೇ ಆಗಿದ್ದು, ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಪರಿಚಿತರು, ಸ್ನೇಹಿತರು ಸಾಕಷ್ಟು ಮಂದಿ ಇದ್ದಾರೆ. ಇದಲ್ಲದೇ ನಾನು ಜನರ ಕೈಗೆ ಸುಲಭವಾಗಿ ಸಿಗುವುದರಿಂದ ಜನ ನನ್ನನ್ನು ಆರ್ಶಿವದಿಸುತ್ತಾರೆ ಎಂಬ ನಂಬಿಕೆ ಇದೆ. ಎರಡೂ ಪಕ್ಷದವರನ್ನು ನೋಡಿರುವ ಕ್ಷೇತ್ರದ ಜನತೆ ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


*ಬಿ.ವಿ ಹಳ್ಳಿಯಲ್ಲಿ ಕಾರ್ಯಕ್ರಮ:* 

ಕಾಂಗ್ರೆಸ್ ತಾಲೂಕು ಘಟಕ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಡಿಗೆ ಹಳ್ಳಿಕಡೆಗೆ ಕಾರ್ಯಕ್ರಮವನ್ನು ತಾಲೂಕಿನ ಬಿ.ವಿ.ಹಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆಸಲಾಯಿತು. ಗ್ರಾಪಂ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಮನೆ-ಮನೆಗೆ ತೆರಳಿ ಪಕ್ಷದ ಕಾರ್ಯಕರ್ತರನ್ನು ಭೇಟಿಮಾಡಿ ಸಂಘಟನೆಯನ್ನು ಬಲಗೊಳಿಸುವಂತೆ ಮನವಿ ಮಾಡಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕುಕ್ಕುಟ ಮಹಾಮಂಡಲದ ಅಧ್ಯಕ್ಷ ಡಿ.ಕೆ.ಕಾಂತರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್.ಪ್ರಮೋದ್, ಸುನಿಲ್‍ಕುಮಾರ್, ಮುಖಂಡ ನಿಜಾಮ್ ಫೌಜ್‍ದಾರ್, ತಾಪಂ ಮಾಜಿ ಉಪಾಧ್ಯಕ್ಷೆ ಕಾವೇರಮ್ಮ, ಹಾಪ್‍ಕಾಮ್ಸ್ ನಿರ್ದೇಶಕ ಶಿವಮಾದು, ಮುಖಂಡರಾದ ಬೊರ್‍ವೆಲ್ ರಂಗನಾಥ್, ಚಂದ್ರಸಾಗರ್, ತಗಚಗೆರೆ ಮಹಾಲಿಂಗು, ಪಾಳ್ಯ ಮಹದೇವು, ಪರೀದ್‍ಖಾನ್‍ಘೋರಿ, ಬುಕ್ಕಸಾಗರ ಕುಮಾರ್, ನಗರಸಭಾ ಸದಸ್ಯರಾದ ವಾಸೀಲ್‍ಆಲಿಖಾನ್, ಮತೀನ್ ಮುಂತಾದವರು ಇದ್ದರು.


ಗೋ ರಾ ಶ್ರೀನಿವಾಸ...


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑