Tel: 7676775624 | Mail: info@yellowandred.in

Language: EN KAN

    Follow us :


*ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ*

Posted date: 20 May, 2022

Powered by:     Yellow and Red

*ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ*

ತಾಲ್ಲೂಕಿನಾದ್ಯಂತ ಶಿಥಿಲಗೊಂಡಿರುವ ಕೆರೆಗಳ ಮಾಹಿತಿ ಪಡೆದು ದುರಸ್ಥಿ ಮಾಡಿ, ನಿರಂತರ ಸುರಿದ ಮಳೆಯಿಂದ ಬೆಳೆ ನಷ್ಟವಾಗಿದ್ದರೆ ಜಂಟಿ ಸರ್ವೇ ಮಾಡಿಸಿ ಬೆಳೆ ಹಾನಿ ಬಗ್ಗೆ ಮಾಹಿತಿ ನೀಡುವಂತೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮತ್ತು ಕೆಡಿಪಿ ಸದಸ್ಯರು ವಿಸ್ತೃತ ಚರ್ಚೆ ನಡೆಸಿದರು.


ನಗರ ಮತ್ತು ನಗರಕ್ಕೆ ಹೊಂದಿಕೊಂಡಿರುವ ಹಾಗೂ ತಾಲ್ಲೂಕಿನಾದ್ಯಂತ ಇರುವ ಹಲವಾರು ಕೆರೆಗಳು ಅಪಾಯದ ಅಂಚಿನಲ್ಲಿವೆ. ಕೆಲವು ಒತ್ತುವರಿಯಾಗಿವೆ. ಎಲ್ಲಾ ಕೆರೆಗಳನ್ನು ವೀಕ್ಷಣೆ ಮಾಡಿ, ಸರ್ವೇಮಾಡಿ ಕೆರೆಗಳನ್ನು ದುರಸ್ಥಿ ಮಾಡಿ, ಹೊಂಗನೂರು ಕೆರೆ ಸೇರಿದಂತೆ ಮೀನು ಸಾಕುವ ಕೆರೆಗಳನ್ನು ಕಲುಷಿತಗೊಳಿಸದಂತೆ, ಎಚ್ಚರಿಕೆ ವಹಿಸಿ ಗ್ರಾಮೀಣ ಭಾಗದ ರಸ್ತೆ ಗುಂಡಿ ಸಮಸ್ಯೆ ಬಗ್ಗೆ ಗಮನ ನೀಡಿ, ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ. ಇವು ಶುಕ್ರವಾರ ನಡೆದ ತಾಲೂಕು ಮಟ್ಟದ ಪ್ರಗತಿಪರಿಶೀಲನಾ ಸಭೆಯಲ್ಲಿನ ಮುಖ್ಯಾಂಶಗಳು.


ತಾಲ್ಲೂಕು ಪಂಚಾಯತಿ ಆಡಳಿತಾಧಿಕಾರಿ ಪಿ.ರಾಧ ಅವರ ಅಧ್ಯಕ್ಷತೆಯಲ್ಲಿ ತಹಶಿಲ್ದಾರ್ ಹರ್ಷವರ್ಧನ್ ಮತ್ತು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರು ಉಪಸ್ಥಿತಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖಾ ಪ್ರಗತಿ ವರದಿಯನ್ನು ಮಂಡಿಸಿದರು.ತಂತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕುಂದುಕೊರತೆಗಳು, ಅನುದಾನಗಳು ಮತ್ತು ಪ್ರಗತಿಯ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು.


*ಕೆರೆಗಳ ದುರಸ್ಥಿಗೆ ಸೂಚನೆ:*

ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಅಪಾಯದ ಅಂಚಿನಲ್ಲಿರುವ ಕೆರೆಗಳು ವಿಶೇಷವಾಗಿ ನೀಲಸಂದ್ರ ಗ್ರಾಮದ ಕೆರೆಯನ್ನು ದುರಸ್ಥಿಗೊಳಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ತಾಪಂ ಇಓ ಚಂದ್ರು ಮತ್ತು ತಹಸೀಲ್ದಾರ್ ಹರ್ಷವರ್ಧನ್ ಸೂಚಿಸಿದರು. ನೀಲಸಂದ್ರ ಗ್ರಾಮದ ಕೆರೆ ಏರಿ ಹಾಗೂ ಕೋಡಿ ಶಿಥಿಲಗೊಂಡಿದೆ. ಇದೇ ರೀತಿ ಜೋರು ಮಳೆ ಸುರಿದರೆ ಕೆರೆ ಏರಿ ಹೊಡೆದು ಜಮೀನುಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಗೆ ತಾಕೀತು ಮಾಡಿದರು.


*ಕೆರೆ ಗುತ್ತಿಗೆ ನೀಡಿರುವುದು ಮೀನು ಸಾಕಲು ಮಾತ್ರ:*

ತಾಲೂಕಿನ ಹೊಂಗನೂರು ಗ್ರಾಮದ ಕೆರೆಯಲ್ಲಿ ಮೀನುಸಾಕಾಣಿಕೆ ಮಾಡಿಮೀನು ಮಾರಲು ಮಾತ್ರ ಗುತ್ತಿಗೆ ನೀಡಲಾಗಿದೆ. ಗುತ್ತಿಗೆ ಪಡೆದಿರುವ ವ್ಯಕ್ತಿ ಸಂಪೂರ್ಣವಾಗಿ ಕೆರೆಯನ್ನು ಸ್ವಾಧೀನಕ್ಕೆ ಪಡೆದಂತೆ ವರ್ತಿಸುತ್ತಿದ್ದಾರೆ. ಕೆರೆಯ ನೀರನ್ನು ತೂಬಿನ ಮೂಲಕ ಜಮೀನಿಗೆ ಬಳಸಿಕೊಳ್ಳಲು ಬಿಡುತ್ತಿಲ್ಲ. ಇನ್ನು ಕೋಳಿತ್ಯಾಜ್ಯ, ಸತ್ತ ರೇಷ್ಮೆ ಹುಳು, ಅಳಿದುಳಿದ ಮಾಂಸದ ತ್ಯಾಜ್ಯ ಸೇರಿದಂತೆ ಕಲುಷಿತ ವಸ್ತುಗಳನ್ನು ಮೀನಿಗೆ ಆಹಾರ ಎಂದು ಹಾಕಿ ಕೆರೆಯನ್ನು ಮಲಿನ ಗೊಳಿಸುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ. ಕೆರೆಯಲ್ಲಿ ಮೀನುಸಾಕಾಣಿಕೆ ಮಾಡಲು ಗುತ್ತಿಗೆ ಪಡೆದಿರುವ ವ್ಯಕ್ತಿ ಕೆರೆಯೇ ನನ್ನ ಸ್ವಂತದ್ದು ಎನ್ನುವಂತೆ ವರ್ತಿಸುತ್ತಿದ್ದಾನೆ. ಇವರಿಗೆ ಕಡಿವಾಣ ಹಾಕಿ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ತಹಸೀಲ್ದಾರ್ ಹರ್ಷವರ್ಧನ್ ಸೂಚಿಸಿದರು.


*ಬೆಳೆಹಾನಿ ಸಂಬಂಧ ಶೀಘ್ರ ಜಂಟಿಸಮೀಕ್ಷೆ:*

ವಾಡಿಕೆ ಮುನ್ನಾ ಮುಂಗಾರು ನಿರೀಕ್ಷಿತ ಪ್ರಮಾಣಿಕ್ಕಿಂತ ನಾಲ್ಕುಪಟ್ಟು ಹೆಚ್ಚು ಅಂದರೆ ಇಪ್ಪತ್ತೊಂದು ದಿನದಲ್ಲಿ ಅರವತ್ತಾರು ಮಿಮೀ ಸುರಿದಿದೆ. ಇದರಿಂದಾಗಿ ತಾಲೂಕಿನ ಹಲವೆಡೆ ಬೆಳೆಹಾನಿ ಸಂಭವಿಸಿದೆ. ಮಳೆಯಿಂದ ಸಂಭವಿಸಿರುವ ಬೆಳೆ ಹಾನಿಯನ್ನು ಅಂದಾಜು ಮಾಡಲು ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಜೊತೆಗೂಡಿ ಜಂಟಿ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಲು ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.


*ರಸಗೊಬ್ಬರ ಕೊರತೆ ಇಲ್ಲಾ:*

ಮುಂಗಾರು ಮುನ್ನವೇ ತಾಲೂಕಿನ ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಸಂಬಂಧಿಸಿದ ಇಲಾಖೆಯ ಗೋದಾಮುಗಳಲ್ಲಿ ದಾಸ್ತಾನು ಇರಿಸಲಾಗಿದೆ. ಅಗತ್ಯ ಪ್ರಮಾಣದಲ್ಲಿ ಎಲ್ಲಾ ರಸ ಗೊಬ್ಬರವನ್ನು ದಾಸ್ತಾನಿರಿಸಿದ್ದು, ತಾಲೂಕಿನಲ್ಲಿ ಹೆಚ್ಚಾಗಿ ಬೆಳೆಯುವ ಹಿಪ್ಪುನೇರಳೆ, ಬೇಬಿಕಾರ್ನ್ ಮತ್ತು ಮೇವಿನ ಬೆಳೆಗಳಿಗೆ ಯೂರಿಯಾದ ಅಗತ್ಯತೆ ಸಾಕಷ್ಟಿದೆ. ಈ ಬೆಳೆಗಳಿಗೆ ಯೂರಿಯಾ ಕೊರತೆ ನೀಗಿಸುವ ಉದ್ದೇಶದಿಂದ ನ್ಯಾನೋ 

ಯೂರಿಯಾ ಬಳಕೆ ಬಗ್ಗೆ ರೈತರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಕೃಷಿ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.


*ರಸ್ತೆ ಗುಂಡಿಗಳಿಂದ ಅಪಘಾತವಾದರೆ ಯಾರು ಹೊಣೆ:*

ರಸ್ತೆಯಲ್ಲಿರುವ ಗುಂಡಿಯಿಂದ ಚಾಲಕ ಮತ್ತು ಸಹ ಪ್ರಯಾಣಿಕರಿಗೆ ಅಪಘಾತ ಸಂಭವಿಸಿದರೆ ಅದಕ್ಕೆ ಯಾರನ್ನು ಹೊಣೆಮಾಡಬೇಕು ಎಂಬ ವಿಷಯ ಕೆಡಿಪಿ ಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಎಡೆಮಾಡಿಕೊಟ್ಟಿತು. ಸಭೆಯಲ್ಲಿ ಪಿಡಬ್ಲುಡಿ ಇಲಾಖೆ ಇಂಜಿನಿಯರ್ ವರದಿ ಮಂಡಿಸುವಾಗ ಗುಂಡಿಗಳ ಬಗ್ಗೆ ಪ್ರಶ್ನೆ ಮಾಡಲಾಯಿತು. ರಸ್ತೆ ಗುಂಡಿಯಿಂದ ಸಂಭವಿಸುವ ಅಪಘಾತಕ್ಕೆ ಇಲಾಖೆಯನ್ನೇ ಹೊಣೆಮಾಡಬಹುದೇ ಎಂದು ಸಭೆಯಲ್ಲಿದ್ದ ಕೆಡಿಪಿ ಸದಸ್ಯರು ಪ್ರಶ್ನಿಸಿದರು.

ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿಕೊಳ್ಳುವುದಿಲ್ಲ ಎಂಬ ಸಂಗತಿಯನ್ನು ಸಭೆಯ ಗಮನಕ್ಕೆ ತಂದಾಗ, ತಹಸೀಲ್ದಾರ್ ಹರ್ಷವರ್ಧನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಬಹುದು ಎಂದು ಸ್ಪಷ್ಟೀಕರಣ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಿಡಬ್ಲುಡಿ ಇಂಜಿನಿಯರ್ ಪ್ರದೀಪ್, ನಮ್ಮಿಂದ ಗುಂಡಿ ನಿರ್ಮಾಣವಾಗುವುದಿಲ್ಲ, ನಿರಂತರ ಸರಿಯುವ ಮಳೆಯಿಂದ ಹಾಗೂ ಅತಿ ಭಾರ ಹೊತ್ತ ಲಾರಿಗಳಿಂದ ನಿರ್ಮಾಣವಾಗುತ್ತಿದೆ. ಇಲಾಖೆ ವತಿಯಿಂದ ಸಾಕಷ್ಟು ಅನುದಾನ ಇಲ್ಲದ ಕಾರಣ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುವುದಿಲ್ಲ. ಈಬಗ್ಗೆ ಸರಕಾರವೂ ಹೇಳುತ್ತದೆಯಾದರೂ ಗುಂಡಿಗೆ ಇಲಾಖೆಯೇ ಪೂರ್ಣ ಜವಾಬ್ದಾರಿಯಲ್ಲ ಎಂದು ಸಮಜಾಯಿಷಿ ನೀಡಿದರು.

ಈಗಾಗಲೇ ತಾಲೂಕಿನಲ್ಲಿ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳಲಾಗಿದೆ. ಕಾಂಕ್ರೀಟ್ ಹಾಕಿ ರಸ್ತೆ ಗುಂಡಿಯನ್ನು ಮುಚ್ಚುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಮಳೆಯ ಕಾರಣದಿಂದ ರಸ್ತೆ ಗುಂಡಿಯನ್ನು ಮುಚ್ಚಲು ಸಮಸ್ಯೆಯಾಗಿದೆ. ಮಳೆ ನಿಂತ ಬಳಿಕ ರಸ್ತೆಗುಂಡಿಯನ್ನು ಮುಚ್ಚಲಾಗುವುದು ಎಂದು ಸ್ಪಷ್ಟಪಡಿಸಿದರು.


ಸಭೆಯ ಅಧ್ಯಕ್ಷತೆಯನ್ನು ತಾಪಂ ಆಡಳಿತಾಧಿಕಾರಿ ಪಿ.ರಾಧಾ ವಹಿಸಿದ್ದರು. ತಹಸೀಲ್ದಾರ್ ಹರ್ಷವರ್ಧನ್, ಇಓ ಚಂದ್ರು, ಕೆಡಿಪಿ ಸಮಿತಿ ಸದಸ್ಯರಾದ ಶಭೀರ್ ವುಲ್ಲಾಬೇಗ್, ಯೋಗೀಶ್, ತಾರಕೇಶ್, ರಾಜು, ಲೋಹಿತ್ ಮುಂತಾದವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑