Tel: 7676775624 | Mail: info@yellowandred.in

Language: EN KAN

    Follow us :


ಅರಣ್ಯ ನಾಶದಿಂದ ಬದುಕು ನಾಶ ಆಯುಕ್ತ ದಯಾನಂದ

Posted date: 21 May, 2022

Powered by:     Yellow and Red

ಅರಣ್ಯ ನಾಶದಿಂದ ಬದುಕು ನಾಶ ಆಯುಕ್ತ ದಯಾನಂದ

ಚನ್ನಪಟ್ಟಣ: ಮೇ 21 22. ಅರಣ್ಯ ನಾಶ ಪಡಿಸಿದರೆ ಬದುಕು ನಾಶವಾಗುತ್ತದೆ, ಪರಿಸರ ಉಳಿಸಿದರೆ ಮಾತ್ರ ಎಲ್ಲರ ಬದುಕು ಬಂಗಾರವಾಗುತ್ತದೆ. ಪ್ರಕೃತಿ ಉಳಿಸಲು ಕೇವಲ ಅರಣ್ಯ ಇಲಾಖೆ ಅಷ್ಟೇ ಅಲ್ಲಾ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕು. ಓಝೋನ್ ಪದರ ಸರಿಹೋಗಲು ಪರಿಸರ ಬಹಳ ಮುಖ್ಯ. ಮನುಷ್ಯ ಸೇರಿದಂತೆ ಪ್ರತಿಯೊಂದು ಜೀವಿಯೂ ಬದುಕುಳಿಯಬೇಕಾದರೆ ಪ್ರಕೃತಿ ಸಮತೋಲನ ಮುಖ್ಯವಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ಕೆ ಎ ದಯಾನಂದ ತಿಳಿಸಿದರು.

ಅವರು ಇಂದು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಹಯೋಗದಲ್ಲಿ ಮುಕುಂದರಾವ್ ಲೋಕಂಡೆ ನೇತೃತ್ವದಲ್ಲಿ ಕುವೆಂಪು ಕಾಲೇಜು ಬಳಿ ಹಮ್ಮಿಕೊಂಡಿದ್ದ ಬರಡು ಪ್ರದೇಶಗಳಲ್ಲಿ ಅರಣ್ಯೀಕರಣದ ನೂತನ ತಂತ್ರಜ್ಞಾನದ ಅಳವಡಿಕೆಯ ಅಧ್ಯಯನ ಕೇಂದ್ರ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.


ಪರಿಸರ ಎಂದರೆ ಅದೊಂದು ಪುನರ್ಜನ್ಮ ಪುನರ್ಜನ್ಮ ಎಂದರೆ ಮರುಹುಟ್ಟಲ್ಲ. ಮರು ಹುಟ್ಟು ಬಂದಿರುವ ಯಾವುದೇ ಉದಾಹರಣೆಗಳಿಲ್ಲ. ಅದಕ್ಕೆ ಸಾಕ್ಷಿಯು ಇಲ್ಲಾ. ಸಾವಿರ ವರ್ಷಗಳ ಹಿಂದೆ ಸಮಾಜಕ್ಕಾಗಿ ಬದುಕಿ ಹೋದವರ ನೆನಪು ನಮಗೆ ಇದೆ. ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರ ಹೆಸರು ಹೇಳಿದ ತಕ್ಷಣ ಅವರ ಮುಖ ನಮ್ಮ ಕಣ್ಮುಂದೆ ಬರುತ್ತದೆ ಅದೇ ಪುನರ್ಜನ್ಮ. ಸಮಾಜಕ್ಕಾಗಿ ಗತಿಸಿದವರ ಹೆಸರು ನಮಗೆ ನೆನಪಿದೆ ಎಂದಾಗ ನಮ್ಮ ನೆನಪು ಮುಂದಿನ ಪೀಳಿಗೆಗೆ ಉಳಿದುಕೊಳ್ಳುವಂತೆ ನಾವು ಕೆಲಸ ಮಾಡಬೇಕು. ಅದರಲ್ಲೂ ವಿಶೇಷವಾಗಿ ಪರಿಸರ ಉಳಿಸುವ ಕೆಲಸ ಮಾಡಿದರೆ ಹೆಸರಿನ ಜೊತೆಗೆ ಅವರಿಗೆ ಉಸಿರು ಕೊಟ್ಟಂತಾಗುತ್ತದೆ ಎಂದು ತಿಳಿಸಿದರು.


ಕಾರ್ಯಕ್ರಮದ ರೂವಾರಿ ಮುಕುಂದರಾವ್ ಲೋಕಂಡೆ ಯವರು ಮಾತನಾಡಿ ಮನೆಗೊಂದು ಗಿಡವಲ್ಲಾ, ವ್ಯಕ್ತಿಗೊಂದು ಗಿಡ ನೆಡಬೇಕು. ಆ ಗಿಡವನ್ನು ಮನೆಯ ಸದಸ್ಯರಂತೆ ಅಕ್ಕರೆಯಿಂದ ನೋಡಿಕೊಂಡರೆ ಮಾತ್ರ ಅದು ಹೆಮ್ಮರವಾಗುತ್ತದೆ. ಮನೆಯ ಬಳಿ ಜಾಗ ಇದ್ದವರೆಲ್ಲರೂ ಒಂದೊಂದು ಗಿಡ ನೆಡಿ. ಅದಕ್ಕೆ ನೀವು ನೀರು ಹಾಕಲು ಸಮಯ ಮೀಸಲಿಡುವುದು ಬೇಡ ಪ್ರತಿಬಾರಿ ಊಟ ಮಾಡಿದ ನಂತರ ಗಿಡದ ಗುಂಡಿಯಲ್ಲಿ ಕೈ ತೊಳೆಯಿರಿ. ಇದು ನಿಮ್ಮ ಮುಂದಿನ ಪೀಳಿಗೆಗೆ ಉಸಿರು ತುಂಬಲು ನೀವು ನೀಡುವಂತಹ ಕೊಡುಗೆ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಕಳೆದ ಇಪ್ಪತ್ತು ವರ್ಷಗಳಲ್ಲಿ ಹಿಂದೆ ಬಹುತೇಕ ಬರಡಾಗಿದ್ದ ಇದೇ ಚಿಕ್ಕಮಣ್ಣುಗುಡ್ಡೆ ಪ್ರದೇಶದಲ್ಲಿ ನಿರಂತರವಾಗಿ ಹದಿನಾಲ್ಕು ಲಕ್ಷ ಬೀಜಗಳನ್ನು ಹಾಕಿದ್ದು ಇಂದು ಹಸಿರುಮಯವಾಗಿರಲು ಸಾಧ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.


ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ ದೇವರಾಜು ಮಾತನಾಡಿ ನಾಡಿಗಿಂತ ಕಾಡು ಮೂರು ಪಟ್ಟು ಹೆಚ್ಚಿರಬೇಕು. ಆಗ ಮಾತ್ರ ಪ್ರಕೃತಿ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಇತ್ತೀಚಿಗೆ ಕಾಡು ಅಭಿವೃದ್ಧಿ ಹೊಂದುತ್ತಿರುವುದರಿಂದ ಪ್ರಾಣಿಗಳ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ನಾಡಿಗೆ ಬರುವುದು ಹೆಚ್ಚಾಗುತ್ತಿದೆ. ಇದನ್ನು ಶಾಶ್ವತವಾಗಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಚಿತ್ರಗಳಲ್ಲಿ ನೋಡಬೇಕಾದಂತಹ ಪ್ರಾಣಿಗಳನ್ನು ನಾವು ಸ್ಥಳೀಯವಾಗಿ ನೋಡಲಾಗುತ್ತಿದೆ. ಪ್ರತಿಯೋರ್ವ ವ್ಯಕ್ತಿಯು ಪರಿಸರ ಕಾಳಜಿ ವಹಿಸಿದರೆ ಮಾತ್ರ ಕಾಡು ಉಳಿಯಲು ಸಾಧ್ಯ ಎಂದರು. ಕಾಡಿನಿಂದ ಆಚೆ ಬರುವ ಪ್ರಾಣಿಗಳಿಂದ ರೈತ ಬೆಳೆದ ಬೆಳೆ ನಾಶವಾಗುತ್ತಿದೆ. ಪ್ರಾಣಹಾನಿಯೂ ಉಂಟಾಗುತ್ತಿದೆ.


ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಪ್ರಿಯ ಬಿ ಕಡೆಚೂರ್, ತಾಲ್ಲೂಕು ಅಧಿಕಾರಿ ಎನ್ ಮೋಹನ್, ಒನ್ ಭೂಮಿ ಫೌಂಡೇಶನ್ ನ ನವನೀತ್, ಕುಂಬಾಪುರ ಬಾಬು ಅರಣ್ಯ ಇಲಾಖೆಯ ಸಿಬ್ಬಂದಿಗಳು, ಬಾಲು ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಅರಣ್ಯಕ್ಕೆ ಸಂಬಂಧಿಸಿದ ಉಪನ್ಯಾಸ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑