Tel: 7676775624 | Mail: info@yellowandred.in

Language: EN KAN

    Follow us :


ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ ರೈತಮುಖಂಡರು

Posted date: 31 May, 2022

Powered by:     Yellow and Red

ರಾಕೇಶ್ ಟಿಕಾಯತ್ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ ರೈತಮುಖಂಡರು

ಚನ್ನಪಟ್ಟಣ: ಮೇ 31 22. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸ್ಪಷ್ಟೀಕರಣ ನೀಡಲು, ಬೆಂಗಳೂರಿನ ಗಾಂಧಿಭವನಕ್ಕೆ ಪತ್ರಿಕಾಗೋಷ್ಠಿ ನಡೆಸಲು ಬಂದಿದ್ದ, ರಾಕೇಶ್ ಟಿಕಾಯತ್ ರವರ ಮುಖಕ್ಕೆ ಮಸಿ ಬಳಿದು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ರೈತಸಂಘದ ಮುಖಂಡರು, ನಗರದ ಗಾಂಧಿ ಭವನದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಮೆರವಣಿಗೆ ಮೂಲಕ ತಾಲ್ಲೂಕು ಕಛೇರಿ ಮುಂಭಾಗ, ಪ್ರತಿಭಟನೆ ನಡೆಸಿ ತಹಶಿಲ್ದಾರ್ ಹರ್ಷವರ್ಧನ್ ರವರಿಗೆ ಮನವಿ ಸಲ್ಲಿಸಿದರು.


ರಾಕೇಶ್ ಟಿಕಾಯತ್ ರವರ ಮೇಲೆ ಹಲ್ಲೆ ನಡೆಸಿರುವುದು ರೈತ ಸಮುದಾಯ ಹಾಗೂ ಕರ್ನಾಟಕದ ಸಂಸ್ಕೃತಿಗೆ ಮಾಡಿದ ಅಪಮಾನವಾಗಿದೆ. ಈ ದುಷ್ಕೃತ್ಯವನ್ನು ರೈತಸಮುದಾಯ ಮತ್ತು ನಾಗರೀಕರು ತೀವ್ರವಾಗಿ ಖಂಡಿಸುತ್ತೇವೆ. ಈ ಕೃತ್ಯವೂ ಏಕಾಏಕಿ ನಡೆದಿರುವುದಲ್ಲ. ಇದೊಂದು ಪೂರ್ವ ಯೋಜಿತ ಸಂಚಾಗಿದ್ದು, ಇದರ ಹಿಂದೆ ಸಂಘ ಪರಿವಾರ ಮತ್ತು ಬಿಜೆಪಿಯ ಕೈವಾಡವಿದೆ. ಪೋಲೀಸರ ವೈಫಲ್ಯವೂ ಇದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ವಿಭಾಗೀಯ ಅಧ್ಯಕ್ಷ ಆಣಿಗೆರೆ ಮಲ್ಲಯ್ಯ ಆಗ್ರಹಿಸಿದರು.


ಮತ್ತೋರ್ವ ಮುಖಂಡ ಕೆ ಎನ್ ರಾಜು ಮಾತನಾಡಿ ರೈತರ ಹೆಸರಿನಲ್ಲಿ ದೋಖಾ ಎಸಗಿರುವ, ಅದೇ ರೀತಿ ಕೆ ಎಸ್ ಆರ್ ಟಿ ಸಿ ನೌಕರರು ಸೇರಿದಂತೆ ಹಲವಾರು ಸಂಘಟನೆಗಳನ್ನು ಬಲಿಪಶು ಮಾಡಿರುವ ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಶೀಘ್ರವಾಗಿ ತನಿಖೆ ನಡೆಸಿ, ಅವರ ಸಂಪೂರ್ಣ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಎಎಪಿ ಸೇರಿದಂತೆ ಅವರ ಜೊತೆ ಇರುವ ರೈತಮುಖಂಡರನ್ನು ತನಿಖೆಗೆ ಒಳಪಡಿಸಬೇಕು. ಟಿಕಾಯತ್ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.


ತಾಲ್ಲೂಕು ಅಧ್ಯಕ್ಷ ರಾಮೇಗೌಡ ಮಾತನಾಡಿ ರಾಜ್ಯ ಸರ್ಕಾರದ ವೈಫಲ್ಯಗಳು ಹೆಚ್ಚಾಗಿದ್ದು, ಅವುಗಳನ್ನು ಮುಚ್ಚಿಹಾಕಲು ಸರ್ಕಾರವು ಪ್ರತಿದಿನವೂ ಒಂದೊಂದು ನಾಟಕ ಆಡುತ್ತಿದೆ. ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಕ್ರಮ ಕೈಗೊಳ್ಳಲಾರದೆ ಟಿಕಾಯತ್ ರವರ ಮೇಲೆ ಹಲ್ಲೆ ನಡೆಸಿದೆ. ಸಂಘ-ಪರಿವಾರದ ಕೈಗೊಂಬೆಯಾಗಿರುವ ಬಿಜೆಪಿ ನೇತೃತ್ವದ ಸರ್ಕಾರವು ನೇರ ಹೊಣೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಮನವಿ ಸ್ವೀಕರಿಸಿ ಮಾತನಾಡಿದ ತಹಶಿಲ್ದಾರ್ ಹರ್ಷವರ್ಧನ್ ರವರು ನಿಮ್ಮ ಮನವಿಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿ, ಬಂದಂತಹ ಉತ್ತರವನ್ನು ತಮಗೆ ನೀಡುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತಸಂಘದ ವಿಭಾಗೀಯ ಕಾರ್ಯದರ್ಶಿ ಚೌಕಿಮಠ, ಜಿಲ್ಲಾ ಕಾರ್ಯಾಧ್ಯಕ್ಷ ಹೆಚ್ ಸಿ ಕೃಷ್ಣಯ್ಯ, ಗೌರವಾಧ್ಯಕ್ಷ ತಿಮ್ಮೇಗೌಡ, ಉಪಾಧ್ಯಕ್ಷ ರವಿ, ಕೋದಂಡರಾಮ, ವಿಜಯಕುಮಾರ್, ನಾಗರಾಜು, ರಾಜು, ಬೋರೇಗೌಡ, ರಾಮಕೃಷ್ಣ, ಮರೀಗೌಡ, ಚಂದ್ರಶೇಖರ್, ಕೆ ಟಿ ಗುರುಲಿಂಗಯ್ಯ ಸೇರಿದಂತೆ ಹಲವಾರು ರೈತಮುಖಂಡರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑