Tel: 7676775624 | Mail: info@yellowandred.in

Language: EN KAN

    Follow us :


ಭೂಕಬಳಿಕೆ ಹಗರಣವನ್ನು ಸಿಓಡಿ ಗೆ ವಹಿಸಿ ತಾಪಂ ಮಾಜಿ ಅಧ್ಯಕ್ಷ ಹರೂರು ರಾಜಣ್ಣ

Posted date: 09 Jun, 2022

Powered by:     Yellow and Red

ಭೂಕಬಳಿಕೆ ಹಗರಣವನ್ನು ಸಿಓಡಿ ಗೆ ವಹಿಸಿ ತಾಪಂ ಮಾಜಿ ಅಧ್ಯಕ್ಷ ಹರೂರು ರಾಜಣ್ಣ

ಚನ್ನಪಟ್ಟಣ: ತಾಲ್ಲೂಕಿನಲ್ಲಿ ನಡೆದಿರುವ ಭೂಕಬಳಿಕೆಯನ್ನು ಸಿಓಡಿ ತನಿಖೆಗೆ ವಹಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಿದಾಗ ತಾಲ್ಲೂಕಿನ ಭೂಕಬಳಿಕೆ ಶಿಕ್ಷೆಯ ವಿಚಾರ ಇಡೀ ರಾಜ್ಯದ ಗಮನ ಸೆಳೆದು ಆಯಾಯ ತಾಲ್ಲೂಕಿನಲ್ಲೂ ಆಗಿರುವ ಅಕ್ರಮ ಭೂಕಬಳಿಕೆ ಹೊರಬರಲು ಸಹಕಾರಿಯಾಗುತ್ತದೆ.

ಇಲ್ಲಿ ನಡೆದಿರುವ ಭೂಹಗರಣಗಳ ಕುರಿತು ಸಿಓಡಿ ತನಿಖೆ ನಡೆಸಿದರೆ ಸಾಲದು, ಸರ್ಕಾರ ಇನ್ನು ಉನ್ನತ ಮಟ್ಟದ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಾಪಂ ಮಾಜಿ ಅಧ್ಯಕ್ಷ ಹರೂರು ರಾಜಣ್ಣ ಒತ್ತಾಯಿಸಿದರು.

ನಗರದ 5ನೇ ಅಡ್ಡರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಮಾಳ ಸೇರಿದಂತೆ ತಾಲೂಕಿನಲ್ಲಿ ಸಾಕಷ್ಟು ಸರಕಾರಿ ಜಾಗಗಳು ಒತ್ತುವರಿಯಾಗಿವೆ. ಕಂದಾಯ ಇಲಾಖೆಯಲ್ಲಿ ನಡೆದಿರುವ ಗೋಲ್‍ಮಾಲ್ ಸಂಬಂಧ ಆಳವಾದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ನಿರ್ಗತಿಕರಿಗೆ ಸೇರಬೇಕಾದ ಸರ್ಕಾರಿ ಭೂಮಿ ಉಳ್ಳವರ ಪಾಲಾಗಿದೆ. ಸಾವಿರಾರು ಕೋಟಿ ರೂ. ಮೌಲ್ಯದ ಭೂಮಿ ಹಣವಂತರ ಕೈಸೇರಿದೆ. ಭೂಮಂಜೂರಾತಿ ಸಮಿತಿ ನಿರ್ಲಕ್ಷ್ಯ ಮಾಡಿ ಭೂಮಿ ಹಂಚಿಕೆ ಮಾಡಿದೆ. ಭೂಮಂಜೂರಾತಿ ಸಮಿತಿ ಮೂಲಕ ಎಷ್ಟು ಸಾಗುವಳಿ ಪತ್ರಗಳನ್ನು ನೇರವಾಗಿ ನೀಡಿದ್ದಾರೆ ಎಂಬ ಮಾಹಿತಿ ನೀಡಲಿ ಎಂದು ಆಗ್ರಹಿಸಿದರು.


ಬಡರೈತರು ಹತ್ತಾರು ವರ್ಷಗಳಿಂದ ಸಾಗುವಳಿ ನಡೆಸುತ್ತಿದ್ದಾರೆ. ತಾವು ಸಾಗುವಳಿ ನಡೆಸುತ್ತಿರುವ ಭೂಮಿಯನ್ನು ನಂಬಿಕೊಂಡೇ ಅವರು ಜೀವನ ನಡೆಸುತ್ತಿದ್ದಾರೆ. ಆದರೆ ಕಂದಾಯ ಇಲಾಖೆ ಅಧಿಕಾರಿಗಳು ಬಲಾಢ್ಯರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ದಾಖಲೆಗಳನ್ನೇ ತಿರುಚಿ ಸರ್ಕಾರಿ ಜಮೀನನ್ನು ಉಳ್ಳವರಿಗೆ ಮಾರಿದ್ದಾರೆ. ಇಂಥ ಅಧಿಕಾರಿಗಳು ಯಾರೇ ಆಗಿರಲಿ, ಅವರಿಗೆ ಸಹಕಾರಿಯಾಗಿ ನಿಂತಿರುವ ಯಾವುದೇ ಪಕ್ಷದ ಮುಖಂಡರಾಗಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು.

ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ಸಾವಿರಾರು ಕೋಟಿ ರೂ. ಮೌಲ್ಯದ ಭೂಮಿ ಕಬಳಿಕೆಯಾಗಿದೆ. ಆರೋಪಿಗಳು ಬಲಾಢ್ಯರ ಮೊರೆ ಹೋಗಿ ಪ್ರಕರಣ ಹಳ್ಳ ಹಿಡಿಸಲು ಪ್ರಯತ್ನ ನಡೆಸಿದ್ದಾರೆ. ಅಧಿಕಾರಿಗಳು ಮತ್ತು ಏಜೆಂಟ್‍ಗಳಿಂದ ಭೂಮಾಫಿಯಾದವರಿಂದ ಸರಕಾರಿ ಜಮೀನುಗಳು ಅರ್ಹರಲ್ಲದವರ ಪಾಲಾಗುತ್ತಿದೆ. ಸರಕಾರಿ ಭೂಕಬಳಿಕೆ ಮಾಡಿರುವವರಿಂದ ಜಮೀನನ್ನು ವಶಕ್ಕೆ ಪಡೆದು ಬಡವರಿಗೆ ನೀಡುವ ಕೆಲಸವನ್ನು ಸರಕಾರ ಮಾಡಲಿ ಎಂದು ಆಗ್ರಹಿಸಿದರು.


ತಾಲೂಕಿನಲ್ಲಿ ಗೋಮಾಳ, ಸ್ಮಶಾನ ಜಾಗ, ರಾಜಕಾಲುವೆ, ರಸ್ತೆ ಸೇರಿದಂತೆ ಸಾಕಷ್ಟು ಕಡೆ ಸರಕಾರಿ ಜಮೀನುಗಳು ಒತ್ತುವರಿಯಾಗಿದೆ. ಬಲಾಢ್ಯರು ಒತ್ತವರಿಯನ್ನೇ ಕಾಯಕ ಮಾಡಿಕೊಂಡಿದ್ದಾರೆ. ಒತ್ತುವರಿ ಮಾಡಿಕೊಂಡಿರುವ ಸರಕಾರಿ ಜಾಗಗಳನ್ನು ವಶಕ್ಕೆ ಪಡೆಯುವ ಜತೆಗೆ ಸರಕಾರಿ ಭೂಮಿಯನ್ನು ಕಬಳಿಕೆ ಮಾಡಿರುವವರಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದರು.

ಬಡ ರೈತರ ಭೂಮಿ ಪೋಡಿ ಮಾಡಲು ಎರಡು ವರ್ಷ ತೆಗೆದುಕೊಳ್ಳುವ ಅಧಿಕಾರಿಗಳು, ಭೂಮಾಫಿಯವರು ಬಂದ ತಕ್ಷಣ ಒಂದೂಕಾಲು ಗುಂಟೆ ಭೂಮಿಗೆ ಪೋಡಿ ಮಾಡಿಕೊಡುತ್ತಿದ್ದಾರೆ. ಒಂದು ಕಾಲು ಗುಂಟೆಯಂತೆ ಸೈಟ್ ಮಾಡಿ ಮಾರಾಟ ಮಾಡುತ್ತಿರುವ ರಿಯಲ್ ಎಸ್ಟೇಟ್ ಕುಳಗಳು ಈ ಲೇಔಟ್‍ಗಳಲ್ಲಿ ಮೂಲಸೌಕರ್ಯಗಳಿಗೆ ಜಾಗವನ್ನು ಬಿಟ್ಟಿಲ್ಲ. ಇದರಿಂದಾಗಿ ಇಂದು ನಗರದಲ್ಲಿ ಚರಂಡಿ ಸಮಸ್ಯೆ, ಕಸದ ಸಮಸ್ಯೆ ಮಿತಿಮೀರಿದೆ. ನಗರದ ಇಂದಿನ ಈ ಅವ್ಯವಸ್ಥೆಗೆ ಅಧಿಕಾರಿಗಳ ಹಣದಾಹ ಮತ್ತು ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯ ಮೂಲ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ತಾಲೂಕಿನ ಕೋಲೂರು ಮಾತ್ರವಲ್ಲ ಕನ್ನಮಂಗಲ,ಮಾಕಳಿ, ಗರಕಹಳ್ಳಿ, ಮೆಣಸಿಗನಹಳ್ಳಿ ಸೇರಿದಂತೆ ಸಾಕಷ್ಟು ಗ್ರಾಮಗಳಲ್ಲಿ ಭೂಗಳ್ಳರು ಸರಕಾರಿ ಭೂಮಿಯನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಕಣ್ವ ನಿರಾಶ್ರಿತರಿಗೆ ಇನ್ನೂ ಜಾಗ ನೀಡಿಲ್ಲ, ಆದರೆ ಉಳ್ಳವರಿಗೆ ಎಕರೆಗಟ್ಟಲೇ ಭೂಮಿಯನ್ನು ಅಕ್ರಮವಾಗಿ ನೀಡುತ್ತಿದ್ದಾರೆ. ಕೋಲೂರು ಮಾತ್ರವಲ್ಲ ತಾಲೂಕಿನಲ್ಲಿ ನಡೆದಿರುವ ಎಲ್ಲ ಭೂಹಗರಣಗಳ ಕುರಿತು ಉನ್ನತಮಟ್ಟದ ತನಿಖೆಯನ್ನು ಸರಕಾರ ನಡೆಸಲಿ ಎಂದು ಒತ್ತಾಯಿಸಿದರು.


ಬಿಜೆಪಿ ಗ್ರಾಮಾಂತರ ಮಾಧ್ಯಮ ವಕ್ತಾರ ಜಯಕುಮಾರ್ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವ ಗುಮಾಸ್ತ ಸರಕಾರಿ ದಾಖಲೆಗಳನ್ನು ಮನೆಗೆ ತೆಗೆದು ಕೊಂಡು ಹೋಗಿದ್ದು ಹೇಗೆ. ಏತಕ್ಕಾಗಿ ಆತ ಸರಕಾರಿ ದಾಖಲೆಗಳನ್ನು ಮನೆಗೆ ತೆಗೆದುಕೊಂಡು ಹೋದ. ಇದಕ್ಕೆ ಏಕೆ ಅನುಮತಿ ನೀಡಲಾಯಿತು. ಈ ಹಗರಣದ ಹಿಂದೆ ಇನ್ಯಾರ್ಯಾರಿದ್ದಾರೆ ಎಂಬುದರ ಕುರಿತು ಸಮಗ್ರ ತನಿಖೆ ನಡೆಸುವುದು ಅಗತ್ಯವಾಗಿದೆ ಎಂದರು.

ತಾಲೂಕು ಆಡಳಿತ ಸಂಪೂರ್ಣವಾಗಿ ಹದಗೆಟ್ಟಿದೆ. ಕಂದಾಯ ಇಲಾಖೆಯ ಇಷ್ಟು ದೊಡ್ಡ ಹಗರಣ ಬಯಲಿಗೆ ಬಂದಿದ್ದರು ಕ್ಷೇತ್ರದ ಶಾಸಕರು ಮೌನ ವಹಿಸಿರುವುದು ಯಾಕೆ. ಕ್ಷೇತ್ರದ ಶಾಸಕರೇ ಅಧಿಕಾರಿಗಳನ್ನು ಸಮರ್ಥಿಸಿಕೊಂರೆ ಏನಾಗುತ್ತೆ ಎಂಬುದಕ್ಕೆ ಈ ಪ್ರಕರಣ ಒಂದು ಉದಾಹರಣೆ. ಇನ್ನಾದರೂ ಭ್ರಷ್ಟ ಅಧಿಕಾರಿಗಳಿಗೆ ಕಡಿವಾಣ ಹಾಕಲು ಶಾಸಕರು ಮುಂದಾಗಬೇಕು ಎಂದು ಆಗ್ರಹಿಸಿದರು.


ಬಗರ್ ಹುಕುಂ ಸಮಿತಿ ಸದಸ್ಯ ರಾಜೇಶ್ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಮಾತ್ರ ಸಭೆ ನಡೆಸಲಾಗಿದೆ. ಸಭೆ ನಡೆಸುವಂತೆ ಹಿಂದಿನ ತಹಸೀಲ್ದಾರ್ ರವರಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸಹ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ಚನ್ನಪಟ್ಟಣ ಬೆಂಗಳೂರಿಗೆ ಹತ್ತಿರವಿರುವ ಕಾರಣ ಸಾಕಷ್ಟು ಭೂಹಗರಣಗಳು ನಡೆದಿದ್ದು, ಅಕ್ರಮದಲ್ಲಿ ಭಾಗಿಯಾದ ಎಲ್ಲಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಶಿವು, ಮುಖಂಡರಾದ ಶಿವಲಿಂಗಯ್ಯ (ಕುಳಪ್ಪ), ವಿ.ಬಿ.ಚಂದ್ರು ಮುಂತಾದವರು ಇದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑