Tel: 7676775624 | Mail: info@yellowandred.in

Language: EN KAN

    Follow us :


ಜೂನ್ 18 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ

Posted date: 17 Jun, 2022

Powered by:     Yellow and Red

ಜೂನ್ 18 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ

ರಾಮನಗರ,ಜೂ.17: ರಾಮನಗರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಜೂನ್ 18 ರಂದು ಬೆಳಿಗ್ಗೆ 10 ಗಂಟೆಯಿಂದ ನಡೆಯಲಿದ್ದು, ಅಧಿಕಾರಿಗಳ ತಂಡ ಅಂದು ಭೇಟಿ ನೀಡುವ ಗ್ರಾಮದಲ್ಲೇ ವಾಸ್ತವ್ಯ ಹೂಡಿ ಸಾರ್ವಜನಿಕರಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಸ್ವೀಕರಿಸಿ ಪರಿಹಾರ ನೀಡಲಿದ್ದಾರೆ.


ಚನ್ನಪಟ್ಟಣ ತಾಲ್ಲೂಕಿನ ಮಳೂರು ಹೋಬಳಿಯ ಬೇವೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಚನ್ನಪಟ್ಟಣ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ.

ಕನಕಪುರ ತಾಲ್ಲೂಕಿನ ಮರಳವಾಡಿ ಹೋಬಳಿಯ ದೊಡ್ಡೂರು ಗ್ರಾಮದಲ್ಲಿ ಅಪರ ಜಿಲ್ಲಾಧಿಕಾರಿಗಳು, ಕನಕಪುರ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ. 

ರಾಮನಗರ ತಾಲ್ಲೂಕಿನ ಕಸಬಾ ಹೋಬಳಿಯ ಹರಿಸಂದ್ರ ಗ್ರಾಮದಲ್ಲಿ ಉಪ ವಿಭಾಗಾಧಿಕಾರಿ, ರಾಮನಗರ ಉಪವಿಭಾಗ, ರಾಮನಗರ ತಾಲ್ಲೂಕು ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ. 

ಮಾಗಡಿ ತಾಲ್ಲೂಕಿನ ಕಸಬಾ ಹೋಬಳಿಯ ಹರ್ತಿ ಗ್ರಾಮದಲ್ಲಿ ಮಾಗಡಿ ತಾಲ್ಲೂಕು ತಹಶೀಲ್ದಾರ್ ಹಾಗೂ  ಇತರೆ ಅಧಿಕಾರಿಗಳು ವಾಸ್ತವ್ಯ ಹೂಡಲಿದ್ದಾರೆ.


ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಪಹಣಿ ತಿದ್ದುಪಡಿ, ಸಾಮಾಜಿಕ ಭದ್ರತೆ ಯೋಜನೆ ಪಿಂಚಣಿಗಳ ಮಂಜೂರಾತಿ ಪತ್ರ ವಿತರಣೆ, ಆಹಾರ ಪಡಿತರ ಚೀಟಿ ವಿತರಣೆ, ಚುನಾವಣಾ ಗುರುತಿನ ಚೀಟಿ ವಿತರಣೆ, ಆಶ್ರಯ ಮತ್ತು ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವಿಕೆಗಾಗಿ ಪ್ರಸ್ತಾವನೆ ಪರಿಶೀಲನೆ ಮತ್ತು ಅಂಗೀಕಾರ ಹಾಗೂ ಪೌತಿ ಖಾತೆ ಪ್ರಕ್ರಿಯೆಗಳನ್ನು ವಿಲೇವಾರಿಗೂಳಿಸಲಾಗುವುದು.

ಸಾರ್ವಜನಿಕರು ಹಾಗೂ ರೈತ ಬಂಧುಗಳು ಕಂದಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸಮಸ್ಯೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಅರ್ಜಿ ಹಾಗೂ ಅಹವಾಲುಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ: ಅವಿನಾಶ್ ಮೆನನ್ ರಾಜೇಂದ್ರನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑