Tel: 7676775624 | Mail: info@yellowandred.in

Language: EN KAN

    Follow us :


೧೭ರಂದು ನಿಖಿಲ್ ೧೯ರಂದು ನಾನು ನಾಮಪತ್ರ ಸಲ್ಲಿಸುತ್ತೇವೆ. ಕುಮಾರಸ್ವಾಮಿ

Posted date: 03 Apr, 2023

Powered by:     Yellow and Red

೧೭ರಂದು ನಿಖಿಲ್ ೧೯ರಂದು ನಾನು ನಾಮಪತ್ರ ಸಲ್ಲಿಸುತ್ತೇವೆ. ಕುಮಾರಸ್ವಾಮಿ

ಚನ್ನಪಟ್ಟಣಃ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ೧೭ನೇ ತಾರೀಖಿನಂದು ಹಾಗೂ ೧೯ನೇ ತಾರೀಖಿನಂದು ನಾನು ನಾನು ನಾಮ ಪತ್ರ ಸಲ್ಲಿಸುತ್ತೇವೆ. ನಂತರ ಎರಡು ದಿನಗಳ ಕಾಲ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಮನೆಗಳನ್ನು ಬಿಟ್ಟು ಬೇರೆ ಮನೆಗಳಿಗೆ ಹೋಗಿದ್ದ ನಿಷ್ಟಾವಂತ ಮುಖಂಡರು. ಕಾರ್ಯಕರ್ತರು ತಮ್ಮ ನೆರಳಿಗಾಗಿ ವಾಪಸ್ಸು ಆಗಮಿಸುತ್ತಿದ್ದು ಅವರೆಲ್ಲರನ್ನು ಮನಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ. ಹಾಲಿ ಶಾಸಕರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಂತಸ ವ್ಯಕ್ತಪಡಿಸಿದರು. 

   ಸಾತನೂರು ರಸ್ತೆಯ ಸುಣ್ಣಘಟ್ಟ ಗ್ರಾಮದಲ್ಲಿ ಅಶ್ವಥ್. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಏರ್ಪಡಿಸಿದ್ದ ಅನ್ಯ ಪಕ್ಷಗಳ ಮುಖಂಡರ ಸೇರ್ಪಡೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಹಾಗೂ ದ್ಯಾವಪಟ್ಟಣ. ಅಂಬೇಡ್ಕರ್ ನಗರ. ಕಲ್ಲಾಪುರ. ಸೇರಿದಂತೆ ಹಲವಾರು ಗ್ರಾಮದ ಯುವಕರು. ಮುಖಂಡರುಗಳಿಗೆ  ಪಕ್ಷದ ಶಾಲು ಹಾಕುವ ಮೂಲಕ ಸೇರ್ಪಡೆ ಮಾಡಿಕೊಂಡರು.


ಮಾಜಿ ಸಚಿವರಾದ, ಎಂ. ವರದೇಗೌಡ ಅವರ ಕಾಲದಲ್ಲಿ ಪಕ್ಷ ಸದೃಢವಾಗಿತ್ತು. ಅಂದು ಬಿಜೆಪಿ ಎಲ್ಲಿತ್ತು ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದ ಅವರು ಈಗಲೂ ಸಹ ಜೆಡಿಎಸ್ ಪಕ್ಷವನ್ನು ಯಾರು ಸಹ ಕೆಳಗಿಳಿಸಲು ಸಾಧ್ಯವಿಲ್ಲ ಎಂದರು. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು. ಮುಖಂಡರ ಒತ್ತಾಯ ಮತ್ತು ಪಕ್ಷದ ಏಳಿಗೆಗಾಗಿ ರಾಮನಗರ ಚನ್ನಪಟ್ಟಣ ಎರಡು ಕ್ಷೇತ್ರಗಳಲ್ಲು ನಾಮಪತ್ರವನ್ನು ಸಲ್ಲಿಸಿದೆ. ನಿಮ್ಮಗಳ ವಿಶ್ವಾಸ. ಸಹಕಾರದಿಂದ ಎರಡರಲ್ಲೂ ಜಯಗಳಿಸಿ ಕೊನೆಯದಾಗಿ ಈ ಕ್ಷೇತ್ರವನ್ನು ಉಳಿಸಿಕೊಂಡೆ. ಇಂದು ಕೆಲ ಮಂದಿ ಅಪಪ್ರಚಾರ ಮಾಡಲು ಮುಂದಾಗಿದ್ದಾರೆ ಹೆಚ್‍ಡಿಕೆ ಈ ಕ್ಷೇತ್ರದ ಬದಲಾಗಿ ಮಂಡ್ಯ. ಕೆ.ಆರ್.ಪೇಟೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಇಂತಹ ಅಪಪ್ರಚಾರಕ್ಕೆ ಯಾರು ಆತಂಕಪಡುವ ಅಗತ್ಯವಿಲ್ಲ ಈ ಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರಕ್ಕೆ ಹೋಗುವುದಿಲ್ಲ. ಈ ಭಾರಿಯೂ ಇದೇ ಕ್ಷೇತ್ರದಿಂದಲೆ ಎರಡನೇ ಬಾರಿ ಮುಖ್ಯಮಂತ್ರಿ ಆಗುತ್ತೆನೆ ಎಂದು ವಿಶ್ವಾಸವ್ಯಕ್ತಪಡಿಸಿದರು.


ಸಾರ್ವತ್ರಿಕ ಚುನಾವಣೆಯಲ್ಲಿ ನಿಮ್ಮೆಲ್ಲರ ಶ್ರಮ. ಹಾಗೂ ನಿಷ್ಠೆಯ ಪ್ರಚಾರದಿಂದ ಜಯಗಳಿಸುವುದು ಸತ್ಯ. ಆ ಗೆಲುವು ನನ್ನದಲ್ಲ. ಅದು ನಿಮ್ಮಗಳ ಗೆಲುವು ಎಂದು ಹೇಳಿದ ಅವರು ಈ ಭಾರಿ ಬಹುಮತಗಳಿಂದ ಸ್ವತಂತ್ರವಾಗಿ ಕರುನಾಡಿನ ಅಧಿಕಾರವನ್ನು ಪಡೆದರೆ ಪಂಚರತ್ನ ಯಾತ್ರೆಯಲ್ಲಿ ಘೋಷಣೆ ಮಾಡಿರುವಂತೆ ಪ್ರತಿಯೊಂದನ್ನು ಜಾರಿಗೊಳಿಸುತ್ತೇನೆ ಎಂದು ಭರವಸೆ ನೀಡಿದ ಅವರು ಕಳೆದ ಆಡಳಿತದಲ್ಲಿ 14 ತಿಂಗಳು ಮಾತ್ರ ಅಡಳಿತ ಆದರೆ ಈ ಭಾರಿ ಪೂರ್ಣ ಅಂದರೆ 5 ವರ್ಷ ಆಡಳಿತವನ್ನು ಕಲ್ಪಿಸಿದರೆ ಸಮಗ್ರ ಅಭಿವೃದ್ಧಿಯ ಜತೆಯಲ್ಲಿ ಶಾಂತಿಯುತವಾದ ನೆಮ್ಮದಿ ಜೀವನವನ್ನು ಸರಿದೂಗಿಸುವಂತೆ ಸರ್ವ ಧರ್ಮ. ಸರ್ವ ಜಾತಿ ಸಮುದಾಯಗಳಿಗೆ ಉತ್ತಮವಾದ ಆಡಳಿತದ ಮೂಲಕ ಯೋಜನೆಗಳನ್ನು ಜಾರಿಗೊಳಿಸುತ್ತೇನೆ ಎಂದರು.

 

   ಈ ಕ್ಷೇತ್ರದಲ್ಲಿ ದೊಡ್ಡ ಪಡೆಯೇ ಇದೆ. ಆದರೆ ಕೆಲವೊಂದು ಸಣ್ಣ ಭಿನ್ನಾಭಿಪ್ರಾಯಗಳಿಂದ ಸಮಸ್ಯೆಗಳು ಎದುರಾಗುತ್ತವೆ. ಅದನ್ನು ನಾವು ನಮ್ಮಲ್ಲೆ ಸರಿಪಡಿಸಿಕೊಳ್ಳಬೇಕಾಗಿದೆ. ಇದು ದೇವರ ಆಟ 1994ರಲ್ಲಿ ದೇವೇಗೌಡರು ಸ್ಪರ್ಧಿಸಿದರೆ ಅವರ ಗೆಲುವಿನ ಜತೆಯಲ್ಲಿ ಮುಖ್ಯಮಂತ್ರಿ ಆಗುತ್ತಿದ್ದರು. ಆದರೆ ರಾಮನಗರ ಕಾರ್ಯಕರ್ತರ ಉಳಿವಿಗಾಗಿ ಅವರು ಅಲ್ಲಿ ಸ್ಪರ್ಧೆ ಮಾಡಿದರು. ನಾನು ಅಂದೆ  ರಾಜಕೀಯದ ಪಾದ ಮುಟ್ದೆದ್ದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಅದರ ನಂಬಿಕೆ ವಿಶ್ವಾಸದಿಂದ ನನಗೆ ಜಯ ನೀಡಿ ಮುಖ್ಯಮಂತ್ರಿಯನ್ನಾಗಿ ಮಾಡಿದ್ದೀರಿ‌ ಈ ಬಾರಿಯು ಸಹ ಅದೇ ವಿಶ್ವಾಸವಿದೆ ಎಂದು ಹೇಳಿದ ಅವರು ನಮ್ಮದು ಅಕ್ರಮ ಹಣ ಕ್ರಿಕೆಟ್ ಬೆಟ್ಟಿಂಗ್ ಅಲ್ಲ ನಿಮ್ಮಗಳ ಸಹಕಾರ ವಿಶ್ವಾಸದಿಂದ ದುಡಿಮೆಯಿಂದ ಪಡೆದಿರುವ ಹಣ ಹಾಗಾಗಿ ಈ ಬಾರಿ ಗೆಲುವಿಗಾಗಿ ನಿಮ್ಮಗಳ ಆಶಿರ್ವಾದ ಸಹಕರವಿರಲಿ ಎಂದು ಮನವಿ ಮಾಡಿದರು.


ಮಾಜಿ ಶಾಸಕ ಎಂ.ಸಿ.ಅಶ್ವಥ್. ತಾ.ಅಧ್ಯಕ್ಷ ಹೆಚ್.ಸಿ.ಜಯಮುತ್ತು. ನಗರ ಘಟಕದ ಅಧ್ಯಕ್ಷ ಅಜೇಯ್‍ಕುಮಾರ್.  ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಕ್ಕೂರುದೊಡ್ಡಿ ಜಯರಾಮು. ಮುಖಂಡರಾದ ಹಾಪ್‍ಕಾಮ್ಸ್ ದೇವರಾಜು. ಪ್ರಸನ್ನ ಪಿ ಗೌಡ. ಗೋವಿಂದಹಳ್ಳಿ ನಾಗರಾಜು. ಎಂ.ಸಿ.ಕರಿಯಪ್ಪ. ಬೋರ್‍ವೆಲ್ ರಾಮಚಂದ್ರ. ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು. 


*ನಗರದ ಅಭಿವೃದ್ಧಿಗಾಗಿ ಕುಮಾರಸ್ವಾಮಿ ಯಾವ ಯೋಜನೆ. ಯಾವ ಅನುದಾನವನ್ನು ಬಿಡುಗಡೆ ಮಾಡಿಸಿದ್ದಾರೆ ಎಂಬುದು ಗೊತ್ತಿದೆ. ಅವರು ಯಾರೋ ಯುಜಿಡಿ ಅಭಿವೃದ್ಧಿಗಾಗಿ ನಾನು ಅನುದಾನವನ್ನು ತಂದಿದ್ದೇನೆ ಎಂದು ಕೆಲವೊಂದು ಭಾಷಣಗಳಲ್ಲಿ ಹೇಳುತ್ತಿದ್ದಾರೆ. ಈ ರಾಜ್ಯ ಸರ್ಕಾರ ನನ್ನ ಮನವಿ ಮೇರೆಗೆ ಏಕೆ ಹಣ ಬಿಡುಗಡೆ ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ಇನ್ನು ಸಂಸದ ಈ ಕ್ಷೇತ್ರಕ್ಕೆ ಏನು ಅಭಿವೃದ್ಧಿ ಮಾಡಿಸಿದ್ದಾರೆ ಅವರದು ಹೋದ ಪುಟ್ಟ ಬಂದ ಪುಟ್ಟ ಎನ್ನುವಂತಾಗಿದೆ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑