Tel: 7676775624 | Mail: info@yellowandred.in

Language: EN KAN

    Follow us :


ಭೈರವೇಶ್ವರ ದೇವಾಲಯದ ಸಿಸಿಟಿವಿ ಮುಚ್ಚಿ ಆಭರಣ ಕಳವು, ಅರ್ಚಕ ಸೇರಿ ನಾಲ್ವರ ಮೇಲೆ ದೂರು

Posted date: 06 Apr, 2023

Powered by:     Yellow and Red

ಭೈರವೇಶ್ವರ ದೇವಾಲಯದ ಸಿಸಿಟಿವಿ ಮುಚ್ಚಿ ಆಭರಣ ಕಳವು, ಅರ್ಚಕ ಸೇರಿ ನಾಲ್ವರ ಮೇಲೆ ದೂರು

ಚನ್ನಪಟ್ಟಣ.ಏ.೦೫: ತಾಲ್ಲೂಕಿನ ನೀಲಸಂದ್ರ ಗ್ರಾಮದ ಹೊರವಲಯದಲ್ಲಿರುವ ಶ್ರೀ ಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಕಳ್ಳತನವಾಗಿದ್ದು ಈ ಸಂಬಂಧ ಅರ್ಚಕ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ಕಳೆದ ವಾರವಷ್ಟೇ ಶ್ರೀ ಭೈರವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ನಡೆದಿತ್ತು. ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಆರೋಪಿಗಳು ಕೈಯಿಂದ ಮುಚ್ಚಿ ದೇವಸ್ಥಾನದಲ್ಲಿದ್ದ ಸುಮಾರು ೭೦ ಸಾವಿರ ಮೌಲ್ಯದ ೫೦೦ ಗ್ರಾಂ ಬೆಳ್ಳಿ ಕಳಸ ಹಾಗೂ ೩೫೦ ಗ್ರಾಂ ತೂಕದ ೩೫ ಬೆಳ್ಳಿ ನಾಣ್ಯಗಳನ್ನು ಆರೋಪಿಗಳು ಕಳವು ಮಾಡಿದ್ದಾರೆ. ಈ ಸಂಬಂಧ ದೇವಸ್ಥಾನದ ವೀರಭದ್ರಯ್ಯ ನವರ ಮಗ ನಾಗೇಶ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆರೋಪಿಗಳಾದ ಸೆಣಬನಹಳ್ಳಿ ಗ್ರಾಮದ ಪ್ರಭಾಕರ್, ಅದೇ ಗ್ರಾಮದ ಯೋಗೇಶ್ ಹಾಗೂ ಕಿರಣ್ ಮತ್ತು ಮೊಳೆದೊಡ್ಡಿ ಗ್ರಾಮದ ಚಂದು ಎಂಬುವವರು ಕಳೆದ ಶನಿವಾರ ತಡರಾತ್ರಿ ಈ ಕೃತ್ಯ ಎಸಗಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ.


ಕಳೆದ ತಿಂಗಳು ೨೭ರಿಂದ ಏ.೦೧ರ ವರೆಗೆ ಜಾತ್ರಾ ಮಹೋತ್ಸವ ನಡೆದಿತ್ತು. ದೇವಸ್ಥಾನದ ಅರ್ಚಕರನ್ನಾಗಿ ಸೆಣಬನಹಳ್ಳಿ ಗ್ರಾಮದ ಯಧುಕುಮಾರ್ ಅವರನ್ನು ನೇಮಕ ಮಾಡಲಾಗಿತ್ತು. ಶನಿವಾರ ತಡರಾತ್ರಿ ಅದೇ ಗ್ರಾಮದ ಪ್ರಭಾಕರ್ ಎಂಬುವವರು  ಯಧುಕುಮಾರ್ ಅವರಿಗೆ ಫೋನ್ ಮಾಡಿ ಪೂಜೆ ಮಾಡಿಸಲು ಬೆಂಗಳೂರಿನಿಂದ ಭಕ್ತಾಧಿಗಳು ಬಂದಿದ್ದು ದೇವಸ್ಥಾನದ ಕೀ ಬೇಕು ಎಂದು ಪಡೆದುಕೊಂಡು ಹೋಗಿದ್ದಾರೆ.

ಈ ಸಂಬಂಧ ಯಧುಕುಮಾರ್ ಅವರು ವೀರಭದ್ರಯ್ಯನವರಿಗೆ ವಿಷಯ ತಿಳಿಸಿದಾಗ, ಇಷ್ಟು ತಡರಾತ್ರಿ ದೇವಸ್ಥಾನಕ್ಕೆ ಯಾರೂ ಬರುವುದಿಲ್ಲವೆಂದು ತಮ್ಮ ಮಗನಿಗೆ ದೇವಸ್ಥಾನದ ಬಳಿ ಹೋಗಿ ಪರಿಶೀಲಿಸಿಕೊಂಡು ಬರಲು ಹೇಳಿದ್ದಾರೆ.


ಅವರ ಮಗ ನಾಗೇಶ್ ದೇವಸ್ಥಾನದ ಬಳಿ ಬಂದಾಗ ಹೊರಗಡೆ ಚಂದು ಇದ್ದು, ಅವರನ್ನು ಪ್ರಶ್ನಿಸಿದಾಗ ಒಳಗಡೆ ಪ್ರಭಾಕರ್ ಕಿರಣ್, ಯೋಗೇಶ್ ಪೂಜೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಅವರು ದೇವಸ್ಥಾನದ ಹೊರಗಡೆ ಬಂದಾಗ ಪ್ರಶ್ನಿಸಿದಾಗ ಪೂಜೆ ಮಾಡುತ್ತಿದ್ದಾಗಿ ತಿಳಿಸಿದ್ದಾರೆ, ಅವರ ಕೈನಲ್ಲಿ ಒಂದು ಬಿಳಿ ಕವರ್ ಇರುವುದಾಗಿ ಅವರು ಗುರುತು ಹಚ್ಚಿದ್ದಾರೆ.

ಕಳೆದ ಭಾನುವಾರ ದೇವಸ್ಥಾನದ ಅರ್ಚಕ  ಕುಮಾರ್ ಪೂಜೆ ಮಾಡಲು ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ.


ದೇವಸ್ಥಾನದ ಕೀ ಪಡೆದ ಆರೋಪಿಗಳು ಒಳಹೋಗಿ, ಅಲ್ಲಿದ್ದ ಸಿಸಿ ಕ್ಯಾಮರವನ್ನು ತಮ್ಮ ಕೈಯಿಂದ ಮರೆಮಾಚಿ ಕಳ್ಳತನ ಮಾಡಿರುವುದು ಸಿಸಿ.ಟಿವಿಯಲ್ಲಿ ರೆಕಾರ್ಡ್ ಹಾಕಿದೆ. ಇಷ್ಟಿದ್ದರೂ ಸಹ ಪೊಲೀಸರು ಐಎಫ್ಆರ್ ದಾಖಲಿಸಲು ಮೀನಾ ಮೇಸ ಎಣಿಸಿದ್ದು ನಡೆದಿದೆ.

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ನಗರಸಭಾ ಸದಸ್ಯರೊಬ್ಬರ ನೇತೃತ್ವದಲ್ಲಿ ರಾಜಿ ಸಂಧಾನಕ್ಕೆ ಯತ್ನಿಸಲಾಗಿದೆ. ಈ ವಿಷಯ ಮಾಧ್ಯಮಗಳಲ್ಲಿ ಪ್ರಕಣಗೊಂಡ ನಂತರವಷ್ಟೇ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದೇವಸ್ಥಾನದಲ್ಲಿ ನಡೆದ ಈ ರೀತಿಯ ಕಳ್ಳತನ ಪ್ರಕರಣಗಳಿಗೇ ರಾಜಿ ಸಂದಾನ ನಡೆದರೆ, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಎಂದು? ಅಲ್ಲದೆ ಈ ರೀತಿಯ ಪ್ರಕರಣಗಳಿಗೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಸಲು ಕಾನೂನಿನಲ್ಲಿ ಅವಕಾಶವಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑